ಚಿತ್ರದುರ್ಗ | ಭಾರತೀಯ ವಾಸ್ತುಶಿಲ್ಪ ಜ್ಞಾನ ವಿದ್ಯಾರ್ಥಿಗಳಿಗೆ ಅಗತ್ಯ : ಡಾ.ಹೊನ್ನೂರ ಸ್ವಾಮಿ

Date:

ಭಾರತೀಯ ದೇವಾಲಯಗಳ ಪರಂಪರೆಗೆ ಸುದೀರ್ಘ ಹಾಗೂ ಪ್ರಾಚೀನ ಇತಿಹಾಸವಿದೆ. ಮುಂದಿನ ದಿನಗಳಲ್ಲಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ವಿದ್ಯಾರ್ಥಿಗಳು ಭಾರತೀಯ ಕಲೆ ಮತ್ತು ವಾಸ್ತುಶಿಲ್ಪದ ಜ್ಞಾನ ಅಳವಡಿಸಿಕೊಳ್ಳುವುದು ಅತ್ಯಗತ್ಯ ಎಂದು ದಾವಣಗೆರೆ ವಿಶ್ವವಿದ್ಯಾಲಯದ ಸ್ನಾತಕೋತ್ತರ ಇತಿಹಾಸ ಮತ್ತು ಪುರಾತತ್ವ ವಿಭಾಗದ ಮುಖ್ಯಸ್ಥ ಡಾ.ಹೊನ್ನೂರು ಸ್ವಾಮಿ ಅಭಿಪ್ರಾಯಪಟ್ಟರು.

ಚಿತ್ರದುರ್ಗ ನಗರದ ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ಸ್ನಾತಕೋತ್ತರ ಸಭಾಂಗಣದಲ್ಲಿ ಮಂಗಳವಾರ ಸರ್ಕಾರಿ ಕಲಾ ಕಾಲೇಜು ಇತಿಹಾಸ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ‘ಭಾರತೀಯ ಕಲೆ ಮತ್ತು ವಾಸ್ತುಶಿಲ್ಪ’ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬೌದ್ಧ ಸ್ತೂಪಗಳು, ವಿಹಾರಗಳು ಹಾಗೂ ಚೈತ್ಯಾಲಯಗಳ ಅಧ್ಯಯನದಿಂದ ವಿವಿಧ ಧರ್ಮಗಳ ಮೂಲ ಆಶಯಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಜೆ. ಕರಿಯಪ್ಪ ಮಾಳಿಗೆ ಮಾತನಾಡಿ, ದೇವಾಲಯ ಮತ್ತು ವಾಸ್ತುಶಿಲ್ಪಗಳು ಜಾತ್ಯತೀತ ಮೌಲ್ಯಗಳನ್ನು ಒಳಗೊಂಡಿದ್ದು, ಸಮಾಜದಲ್ಲಿ ಸಾಮರಸ್ಯ ಮೂಡಿಸುವ ಕೆಲಸ ಮಾಡುತ್ತಿವೆ. ಹಾಗಾಗಿ, ಪ್ರಾಚೀನ ಪರಂಪರೆಯ ಬಗ್ಗೆ ವಿದ್ಯಾರ್ಥಿಗಳು ತೀವ್ರ ಕಳಕಳಿ ಹೊಂದಬೇಕು ಎಂದರು.

ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಬಿ. ಸುರೇಶ್ ಅವರು ಗಾಂಧಾರ ಮತ್ತು ಮಥುರಾ ಕಲೆಗಳ ವಿಶೇಷತೆ ಪರಿಚಯಿಸಿದರು. ಐಕ್ಯೂಎಸಿ ಸಂಚಾಲಕಿ ಪ್ರೊ. ತಾರಿಣಿ ಶುಭದಾಯಿನಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಅಧ್ಯಾಪಕರ ಸಂಘದ ಕಾರ್ಯದರ್ಶಿ ಪ್ರೊ. ಹನುಮಂತಪ್ಪ, ಡಾ. ರೇವಣಸಿದ್ದಪ್ಪ ಹಾಗೂ ಸ್ನಾತಕ ಪದವಿ ಮುಖ್ಯಸ್ಥ ಪ್ರೊ. ಮಹ್ಮದ್ ಬಾಷ ಇದ್ದರು. ಇತಿಹಾಸ ಪ್ರಾಧ್ಯಾಪಕ ಪ್ರೊ. ಬಿ. ಜಗನ್ನಾಥ ಕಾರ್ಯಕ್ರಮ ನಿರೂಪಿಸಿದರು. ಪ್ರೊ. ಎಸ್. ಬಿ. ಶಿವಪ್ರಸಾದ್ ಸ್ವಾಗತಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವ ಡಿ.ಸುಧಾಕರ್

ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ...

ಚಿತ್ರದುರ್ಗ | ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ (ಎಸ್‍ಐಆರ್)-2026ರ ಸಂಬಂಧ ಬಾಕಿ ಇರುವ ಮತದಾರರ...

ಚಿತ್ರದುರ್ಗ | ವಿಜೃಂಭಣೆಯ ನಾಯಕನಹಟ್ಟಿ ದೊಡ್ಡರಥೋತ್ಸವ

ಮಧ್ಯ ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ನಾಯಕನಹಟ್ಟಿಯಲ್ಲಿ ಶುಕ್ರವಾರ ದೊಡ್ಡರಥೋತ್ಸವ ಜರುಗಿತು. ಮಧ್ಯಾಹ್ನ...

ಚಿತ್ರದುರ್ಗ | ಭದ್ರಾ ಹೋರಾಟಕ್ಕೆ ಸಂಘಟನೆಗಳ ಶಕ್ತಿ

 ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡುವಂತೆ ಆಗ್ರಹಿಸಿ ಒನಕೆ ಓಬವ್ವ ವೃತ್ತದಲ್ಲಿ...