ಚಿತ್ರದುರ್ಗ | ಕನಕ ಜಯಂತಿ ಪ್ರಯುಕ್ತ ಲಕ್ಷ ದೀಪೋತ್ಸವ ರಾಜ್ಯ ಮಟ್ಟದ ಟಗರಿನ ಕಾಳಗ, ಕಬಡ್ಡಿ ಮತ್ತು ಕೃಷಿ ಮೇಳ

Date:

“ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾಗಿನೆಲೆ ಗುರುಪೀಠದ ಕೆಲ್ಲೋಡು ಶಾಖಾಮಠದಲ್ಲಿ ಕನಕ ಜಯಂತಿ ಅಂಗವಾಗಿ ಎಂಟನೇ ವರ್ಷದ ಲಕ್ಷ ದೀಪೋತ್ಸವ, ರಾಜ್ಯಮಟ್ಟದ ಭಾರಿ ಟಗರಿನ ಕಾಳಗ, ಕೃಷಿ ಮೇಳ ಮತ್ತು ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯ ಕನಕ ಕಪ್ -2025 ಹಮ್ಮಿಕೊಳ್ಳಲಾಗಿದೆ” ಎಂದು ಹೊಸದುರ್ಗ ಶಾಖಾಮಠದ ಈಶ್ವರಾನಂದಪುರಿ ಶ್ರೀ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಹಳ್ಳಿಗಳಲ್ಲಿ ಪ್ರವಾಸ ಕೈಗೊಂಡಿರುವ ವೇಳೆ ಮಾಹಿತಿ ನೀಡಿರುವ ಅವರು “ನವಂಬರ್ 5 ರಿಂದ 8ರವರೆಗೆ ನಾಲ್ಕು ದಿನಗಳ ಕಾಲ ಶ್ರೀ ಮಠದ ಆವರಣದಲ್ಲಿ ಲಕ್ಷ ದೀಪೋತ್ಸವ ಟಗರಿನ ಕಾಳಗ ಕೃಷಿ ಮೇಳ ಮತ್ತು ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ಕನಕ ಕಪ್ ಹೆಸರಿನಲ್ಲಿ ನಡೆಸಲಾಗುವುದು” ಎಂದು ತಿಳಿಸಿದ್ದಾರೆ.

“ಇದರ ಅಂಗವಾಗಿ ಬೆಂಗಳೂರು ವಿಭಾಗಮಟ್ಟದ ಚಿತ್ರದುರ್ಗ, ಕೋಲಾರ, ತುಮಕೂರು, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಗಳ ಬಹುತೇಕ ನೂರಾರು ಹಳ್ಳಿಗಳಲ್ಲಿ ಪ್ರವಾಸ ಕೈಗೊಂಡು ಭಕ್ತರಲ್ಲಿ ಲಕ್ಷ ದೀಪೋತ್ಸವ ಕನಕ ಜಯಂತಿ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕವಾಗಿ ಕನಕದಾಸರ ಜಾತ್ಯತೀತ ನಿಲುವುಗಳನ್ನು ವೈಚಾರಿಕ ವಿಚಾರಧಾರೆಗಳನ್ನು ಅಳವಡಿಸಿಕೊಂಡು ಸಂಘಟಿತರಾಗಲು ಕರೆ ನೀಡಲಾಗುತ್ತಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಂಬರುವ ದಿನಗಳಲ್ಲಿ ಏಷ್ಯಾ ಖಂಡದಲ್ಲಿ ಅತಿ ಎತ್ತರದ 36 ಅಡಿ ಏಕಶಿಲೆ ಕನಕ ಪ್ರತಿಬಿಂಬ ನಿರ್ಮಾಣ ಕಾರ್ಯ ಕೈಗೊಳ್ಳಲಾಗುವುದು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು, ರಾಜ್ಯದ ಬಹುತೇಕ ಸಚಿವರು, ರಾಜಕೀಯ ಮುಖಂಡರು, ಜನಪ್ರತಿನಿಧಿಗಳು ಪಾಲ್ಗೊಳ್ಳುವರು” ಎಂದು ಶ್ರೀಗಳು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ನಾಯಕನಹಟ್ಟಿ ವೇದಶಾಲೆ ಮಕ್ಕಳ ಮೇಲೆ ಹಲ್ಲೆ: ಶಿಕ್ಷಕನ ಬಂಧನ, ಅಮಾನತು

ಶಾಖಾಮಠದ ಕನಕ ಜಯಂತಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಅಂಗವಾಗಿ ಕಳೆದ ಅಕ್ಟೋಬರ್ ಎಂಟರಿಂದ ಶ್ರೀಗಳು ಪ್ರತಿ ಹಳ್ಳಿ ಹಳ್ಳಿಗಳಲ್ಲಿ ಪ್ರವಾಸ ಕೈಗೊಂಡಿದ್ದು, ಬೆಳಗ್ಗೆ ಚನ್ನಗಿರಿ ತಾಲೂಕಿನ ಹಳ್ಳಿಗಳು, ದಾವಣಗೆರೆ ತಾಲೂಕಿನ ಅಣಬೇರು, ಬಾಡ, ಮಳಲ್ಕೆರೆ ಲೋಕಿಕೆರೆ, ಮತ್ತಿ, ಹೂವಿನ ಮಡು, ತ್ಯಾವಣಗಿ, ಬೆಳಗೆರೆ ಸಂಘಹಳ್ಳಿ, ಕುರುಬರಹಳ್ಳಿ, ಕುಂಬಳೂರು ಸೇರಿದಂತೆ ಹಲವಾರು ಹಳ್ಳಿಗಳಲ್ಲಿ ಪ್ರವಾಸ ಕೈಗೊಂಡಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...