ಚಿತ್ರದುರ್ಗ | ಪ್ರಾಥಮಿಕ ಕೃಷಿ ಸಹಕಾರ ಸಂಘದಲ್ಲಿ ಅವ್ಯವಹಾರ, ತನಿಖೆಗೆ ಸಂಘದ ನಿರ್ದೇಶಕರ ಆಗ್ರಹ.

Date:

“ಎನ್ ದೇವರಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕಾರ್ಯನಿರ್ವಹಣಾಧಿಕಾರಿ ಸುಮಾರು 40 ಲಕ್ಷಕ್ಕೂ ಹೆಚ್ಚಿನ ಅವ್ಯವಹಾರ ನಡೆಸಿದ್ದು ಈ ಕೂಡಲೇ ಇದರ ಬಗ್ಗೆ ತನಿಖೆ ನಡೆಸಬೇಕು” ಎಂದು ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕು ನಾಯಕನಹಟ್ಟಿ ಹೋಬಳಿಯ ಎನ್ ದೇವರಹಳ್ಳಿ ಗ್ರಾಮದ ಪತ್ತಿನ ಸಹಕಾರ ಸಂಘದ ನಿರ್ದೇಶಕ ಕೆಓ ಬೋರಯ್ಯ ಹಣ ದುರುಪಯೋಗದ ಬಗ್ಗೆ ಮಾತನಾಡಿ, ತನಿಖೆಗೆ ಒತ್ತಾಯಿಸಿದರು.

ಚಳ್ಳಕೆರೆಯಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು “ಎನ್ ದೇವರಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರಾಜಣ್ಣ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇವರು ಸಂಘದ ವ್ಯಾಪ್ತಿಗೆ ಒಳಪಡುವ ಗ್ರಾಮಗಳಾದ ಎನ್ ದೇವರಹಳ್ಳಿ, ಗೌರಿಪುರ, ಕುದಾಪುರ, ಕುದಾಪುರ ಲಂಬಾಣಿಹಟ್ಟಿ ಹಾಗೂ ಭೀಮನಕೆರೆ ಗ್ರಾಮದ ರೈತರಿಂದ ದಾಖಲೆಗಳನ್ನು ಪಡೆದು, ರೈತರಿಗೆ ಮಾಹಿತಿ ನೀಡದೆ ಅಕ್ರಮವಾಗಿ ರೈತರ ದಾಖಲೆಗಳ ಆಧಾರದ ಮೇಲೆ ಸಂಘದಲ್ಲಿ ಸುಮಾರು 40 ಲಕ್ಷಕ್ಕೂ ಹೆಚ್ಚು ಮೊತ್ತದ ಸಾಲವನ್ನು ಸೃಜಿಸಿಕೊಂಡಿದ್ದಾರೆ” ಎಂದು ಮಾಹಿತಿ ನೀಡಿದರು.

1002012842
Oplus_0

“ರೈತರ ದಾಖಲೆಗಳ ಆಧಾರದ ಮೇಲೆ ತೆಗೆದುಕೊಂಡಿರುವ ಸಾಲದ ಮೊತ್ತವನ್ನು ರೈತರಿಗೆ ನೀಡದೆ, ವೈಯಕ್ತಿಕವಾಗಿ ಬಳಸಿಕೊಂಡಿರುವುದು ಅವ್ಯವಹಾರ ಎಸಗಿರುವುದು ಇತ್ತೀಚಿನ ದಿನಾಂಕ 14.05.2025 ರಂದು ನಡೆದ ಸಂಘದ ಸಾಮಾನ್ಯ ಸಭೆಯಲ್ಲಿ ನಮ್ಮ ಗಮನಕ್ಕೆ ಬಂದಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಬಗ್ಗೆ ಚಿತ್ರದುರ್ಗ ಜಿಲ್ಲಾ ಸಹಕಾರ ಬ್ಯಾಂಕಿನ ವ್ಯವಸ್ಥಾಪಕರು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ವಂಚನೆಗೊಳಗಾದ ರೈತರಿಗೆ ನ್ಯಾಯ ದೊರಕಿಸಿ ಕೊಡಬೇಕೆಂದು” ಆಗ್ರಹಿಸಿದ್ದಾರೆ.

ಈ ಬಗ್ಗೆ ಈದಿನ ಡಾಟ್ ಕಾಮ್ ನೊಂದಿಗೆ ಮಾತನಾಡಿದ ನಿರ್ದೇಶಕ ಬೋರಯ್ಯ,”ಪತ್ತಿನ ಸಹಕಾರ ಸಂಘದಲ್ಲಿ ರೈತರಿಗೆ ಗೊತ್ತಿಲ್ಲದೇ ಸಾಲಗಳನ್ನು ರೈತರ ಹೆಸರಿನಲ್ಲಿ ತೆಗೆದುಕೊಂಡಿದ್ದಾರೆ. ಸಾಲ ತೆಗೆದುಕೊಂಡಿರುವುದೇ ರೈತರಿಗೆ ಗೊತ್ತಿಲ್ಲ. 40 ಲಕ್ಷಕ್ಕೂ ಹೆಚ್ಚಿನ ಹಣ ದುರುಪಯೋಗ ಆಗಿದೆ.‌ ತನಿಖೆ ನಡೆಸಿ ರೈತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಮೇಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಭತ್ತ ಬೆಂಬಲ ಬೆಲೆಗೆ ಖರೀದಿಸುವಂತೆ ಆಗ್ರಹಿಸಿ ರೈತ ಸಂಘ ರಸ್ತೆ ತಡೆದು ಪ್ರತಿಭಟನೆ.

ಈ ಬಗ್ಗೆ ಮಾತನಾಡಿದ ಸಾಮಾಜಿಕ ಹೋರಾಟಗಾರರಾದ ಕೃಷ್ಣಮೂರ್ತಿ, “ರೈತರಿಗೆ ಗೊತ್ತಿಲ್ಲದಂತೆ ಅಲ್ಲಿನ ಅಧಿಕಾರಸ್ಥರೇ ಸಾಲ ಪಡೆದು ದುರುಪಯೋಗ ಪಡಿಸಿಕೊಂಡು ವಂಚಿಸಿದ್ದಾರೆ. ಯಶಸ್ವಿನಿ, ಬೇರೆ ಬೇರೆ ಉದ್ದೇಶಗಳಿಗೆ ಪಡೆದಿದ್ದ ಕಾಗದ ಪತ್ರಗಳನ್ನು ಇದಕ್ಕೆ ಉಪಯೋಗಿಸಿರುವ ಶಂಕೆ ಇದೆ. ಇದರಲ್ಲಿ ಬಹಳಷ್ಟು ಜನರ ಕೈವಾಡವಿರುವ ಶಂಕೆ ಇದೆ. ಇದು ಕೇವಲ ದೇವರಹಳ್ಳಿ ಪತ್ತಿನ ಸಹಕಾರ ಸಂಘದಲ್ಲಿ ಮಾತ್ರವಲ್ಲ. ಹಲವು ಕಡೆಗಳಲ್ಲಿ ಇದೇ ರೀತಿ ನೆಡೆದಿರುವ ಮಾಹಿತಿ ಇದ್ದು, ಜಿಲ್ಲಾ ಮಟ್ಟದ ಅಧಿಕಾರಿಗಳು ಸೂಕ್ತ ತನಿಖೆ ನಡೆಸಿದರೆ ಹಗರಣಗಳು ಬೆಳಕಿಗೆ ಬರಲಿವೆ.‌ ಈ ನಿಟ್ಟಿನಲ್ಲಿ ಮೇಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಎಚ್.ಪಿ.ವಿ ಲಸಿಕೆ ಅತ್ಯಂತ ಸುರಕ್ಷಿತ: ಡಾ. ಮೆಲ್ವಿನ್ ಕುಮಾರ್

ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಕಂಡುಬರುಲು ಹ್ಯೂಮನ್ ಪ್ಯಾಪಿಲೋಮ ವೈರಸ್(ಎಚ್.ಪಿ.ವಿ) ಹೆಚ್ಚಾಗಿ ಕಾರಣವಾಗುತ್ತದೆ....

ಚಿತ್ರದುರ್ಗ | ಭೀಕರ ಅಪಘಾತ: ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು, ಇಬ್ಬರಿಗೆ ಗಾಯ

ಚಿತ್ರದುರ್ಗ ಜಿಲ್ಲೆಯ ಹೆಗ್ಗರೆ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್...

ಚಿತ್ರದುರ್ಗ | ಅಡುಗೆ ಅನಿಲ ಕೊರತೆಯಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ದೇಶದಲ್ಲಿ ಗ್ಯಾಸ್ ಸರಬರಾಜು...

ಚಿತ್ರದುರ್ಗ | ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವ ಡಿ.ಸುಧಾಕರ್

ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ...