ಚಿತ್ರದುರ್ಗ | ಗಣತಿ ಕಾರ್ಯದಲ್ಲಿ ಗೊಂದಲ ಬೇಡ : ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ

Date:

ಭಾರತ ಜನಗಣತಿ 2027ರ ಪೂರ್ವಸಿದ್ಧತಾ ಕಾರ್ಯಗಳು ಜಿಲ್ಲೆಯಲ್ಲಿ ಚುರುಕುಗೊಂಡಿದ್ದು, ಗಣತಿ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ನೀಡಬೇಡಿ ಎಂದು ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಜನಗಣತಿ ಅಧಿಕಾರಿ ಬಿ.ಟಿ. ಕುಮಾರಸ್ವಾಮಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಭಾರತ ಜನಗಣತಿ-2027ರ ಸಂಬಂಧ ಜಿಲ್ಲಾ ಅಧಿಕಾರಿಗಳು, ಚಾರ್ಜ್ ಅಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗಳಿಗೆ ಹಮ್ಮಿಕೊಂಡಿದ್ದ ಮೂರು ದಿನಗಳ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಜನಗಣತಿ ಕಾರ್ಯವು ಯಶಸ್ವಿಯಾಗಲು ಬ್ಲಾಕ್‍ಗಳ ರಚನೆ ಅತ್ಯಂತ ಪ್ರಮುಖವಾಗಿದೆ. ಬ್ಲಾಕ್ ರಚನೆಯಲ್ಲಿ ಸಣ್ಣ ತಪ್ಪುಗಳಾದರೂ ಇಡೀ ಪ್ರಕ್ರಿಯೆ ಹಳಿ ತಪ್ಪುತ್ತದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಪ್ರತಿ ಬ್ಲಾಕ್‍ಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು.
ಕ್ಷೇತ್ರ ಮಟ್ಟದಲ್ಲಿ ಕೆಲಸ ಮಾಡುವ ವಾರ್ಡ್ ಬಿಲ್ ಕಲೆಕ್ಟರ್ ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದ ಅವರು, ಗಣತಿದಾರರನ್ನು ನೇಮಿಸುವಾಗ ಅವರು ವಾಸಿಸುವ ಅಥವಾ ಕೆಲಸ ಮಾಡುವ ಬ್ಲಾಕ್‍ಗಳಲ್ಲೇ ನಿಯೋಜಿಸಬೇಕು. ಒಂದು ವೇಳೆ ಅನಿವಾರ್ಯ ಸಂದರ್ಭಗಳಲ್ಲಿ ಸ್ಥಳೀಯರು ಲಭ್ಯವಿಲ್ಲದಿದ್ದರೆ, 200 ಮೀಟರ್ ವ್ಯಾಪ್ತಿಯಲ್ಲಿರುವ ಸರ್ಕಾರಿ ನೌಕರರನ್ನು ಮಾತ್ರ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇಶದ ಅಭಿವೃದ್ಧಿ ಯೋಜನೆಗಳ ರೂಪಿಸುವಿಕೆಯಲ್ಲಿ ಜನಗಣತಿ ಅಂಕಿ-ಅಂಶಗಳು ಅಡಿಪಾಯವಾಗಿದ್ದು, ಈ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಅಧಿಕಾರಿಗಳು ರಾಷ್ಟ್ರ ನಿರ್ಮಾಣದ ಅಳಿಲು ಸೇವೆಯಲ್ಲಿ ಭಾಗಿಗಳಾಗುತ್ತಿದ್ದೇವೆ ಎಂಬ ಭಾವನೆಯೊಂದಿಗೆ ಪ್ರಾಮಾಣಿಕವಾಗಿ ಹಾಗೂ ಸಮರ್ಪಕವಾಗಿ ಕೆಲಸ ಮಾಡಬೇಕು. ಸರ್ಕಾರಿ ನೌಕರರ ವೃತ್ತಿ ಜೀವನದಲ್ಲಿ ಚುನಾವಣೆ ಮತ್ತು ಜನಗಣತಿ ಕೆಲಸಗಳು ಅತ್ಯಂತ ಸ್ಮರಣೀಯವಾದವು. 1872ರಲ್ಲಿ ಮೊದಲ ಬಾರಿ ಆರಂಭವಾದ ಜನಗಣತಿ ಪ್ರಕ್ರಿಯೆ ಈಗ 16ನೇ ಜನಗಣತಿ ಹಂತಕ್ಕೆ ಬಂದು ನಿಂತಿದೆ. ಈ ಅಂಕಿ-ಅಂಶಗಳು ದೇಶದ ಆರ್ಥಿಕ ಗುರಿ ಮತ್ತು ಜನರ ಸ್ಥಿತಿಗತಿಗಳನ್ನು ತಿಳಿಯಲು ಬಹಳ ಮುಖ್ಯವಾಗಿದ್ದು, ನಿಖರತೆಯ ವಿಷಯದಲ್ಲಿ ಯಾವುದೇ ಅಜಾಗರೂಕತೆ ವಹಿಸಬಾರದು ಎಂದು ಎಚ್ಚರಿಸಿದರು.

ಕೋವಿಡ್ ಮಹಾಮಾರಿಯಿಂದಾಗಿ ಮುಂದೂಡಲ್ಪಟ್ಟಿದ್ದ ಈ ಜನಗಣತಿಯು ಈಗ ಎರಡು ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತದಲ್ಲಿ ಮನೆ ಪಟ್ಟಿ ಮತ್ತು ಮನೆ ಗಣತಿ ಕಾರ್ಯ ನಡೆಯಲಿದ್ದು, ಈ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಸಮರ್ಥವಾಗಿ ತರಬೇತಿ ಪಡೆದು ಕೆಲಸ ಆರಂಭಿಸಬೇಕು ಎಂದು ಸೂಚಿಸಿದರು.

ಈ ಬಾರಿಯ ಜನಗಣತಿಯು ಹಳೆಯ ಮ್ಯಾನುಯಲ್ ಪದ್ಧತಿ ಕೈಬಿಟ್ಟು, ಸಂಪೂರ್ಣವಾಗಿ ಮೊಬೈಲ್ ಆ್ಯಪ್ ಮೂಲಕ ನಡೆಯಲಿದ್ದು, ಇದು ನಿಖರತೆ ಮತ್ತು ಪಾರದರ್ಶಕತೆ ಹೆಚ್ಚಿಸಲಿದೆ. ಪ್ರತಿ ವಾರ್ಡ್ ಅಥವಾ ಗ್ರಾಮ ಮಟ್ಟದಲ್ಲಿ 150 ರಿಂದ 200 ಕುಟುಂಬಗಳನ್ನು ಒಳಗೊಂಡ ‘ಬ್ಲಾಕ್’ಗಳನ್ನು ಗುರುತಿಸಿ, ನಿಖರವಾದ ಬ್ಲಾಕ್ ನಕ್ಷೆ ಮತ್ತು ಪಟ್ಟಿಗಳನ್ನು ಸಿದ್ಧಪಡಿಸುವಂತೆ ಸೂಚನೆ ನೀಡಿದರು.

ಜನಗಣತಿ ಕಾರ್ಯಕ್ಕಾಗಿ ಎಣಿಕೆದಾರರು ಮತ್ತು ಮೇಲ್ವಿಚಾರಕರನ್ನು ಶೀಘ್ರವೇ ನೇಮಕ ಮಾಡಿ, ಅವರಿಗೆ ಅಧಿಕೃತ ಆದೇಶ ಪತ್ರಗಳನ್ನು ವಿತರಿಸಲು ತಹಶೀಲ್ದಾರ್‍ಗಳಿಗೆ ನಿರ್ದೇಶನ ನೀಡಿದ ಅವರು, ‘ಭಾರತ ಜನಗಣತಿ 2027’ ಪ್ರಕ್ರಿಯೆಯು ಅತ್ಯಂತ ನಿಖರ ಮತ್ತು ವೈಜ್ಞಾನಿಕವಾಗಿ ನಡೆಯಬೇಕಿದೆ ಎಂದು ಹೇಳಿದರು.
ತರಬೇತಿ ಅಧಿಕಾರಿಗಳಾದ ವೈಭವ ಕೃಷ್ಣ, ಸೂರ್ಯನಾರಾಯಣ ಹಾಗೂ ಎಲ್.ಪಿ.ಅನುಜಾ ಅವರು ಜಣಗಣತಿ ಕುರಿತು ಅಧಿಕಾರಿಗಳಿಗೆ ತರಬೇತಿ ನೀಡಿದರು.

ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಡಾ. ಕೆ.ಜೆ. ಕಾಂತರಾಜ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸಿ.ಎಸ್.ಗಾಯತ್ರಿ, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ರವಿಕುಮಾರ್, ಮಾಸ್ಟರ್ ಟ್ರೈನರ್ ರಾಮಚಂದ್ರಪ್ಪ, ಚುನಾವಣಾ ತಹಶೀಲ್ದಾರ್ ಬೀಬಿ ಫಾತಿಮ, ಚುನಾವಣಾ ಶಿರಸ್ತೆದಾರ್ ಮಲ್ಲಿಕಾರ್ಜುನ ನಾಯಕ ಸೇರಿದಂತೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವ ಡಿ.ಸುಧಾಕರ್

ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ...

ಚಿತ್ರದುರ್ಗ | ಭಾರತೀಯ ವಾಸ್ತುಶಿಲ್ಪ ಜ್ಞಾನ ವಿದ್ಯಾರ್ಥಿಗಳಿಗೆ ಅಗತ್ಯ : ಡಾ.ಹೊನ್ನೂರ ಸ್ವಾಮಿ

ಭಾರತೀಯ ದೇವಾಲಯಗಳ ಪರಂಪರೆಗೆ ಸುದೀರ್ಘ ಹಾಗೂ ಪ್ರಾಚೀನ ಇತಿಹಾಸವಿದೆ. ಮುಂದಿನ ದಿನಗಳಲ್ಲಿ...

ಚಿತ್ರದುರ್ಗ | ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ (ಎಸ್‍ಐಆರ್)-2026ರ ಸಂಬಂಧ ಬಾಕಿ ಇರುವ ಮತದಾರರ...

ಚಿತ್ರದುರ್ಗ | ವಿಜೃಂಭಣೆಯ ನಾಯಕನಹಟ್ಟಿ ದೊಡ್ಡರಥೋತ್ಸವ

ಮಧ್ಯ ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ನಾಯಕನಹಟ್ಟಿಯಲ್ಲಿ ಶುಕ್ರವಾರ ದೊಡ್ಡರಥೋತ್ಸವ ಜರುಗಿತು. ಮಧ್ಯಾಹ್ನ...