ಚಿತ್ರದುರ್ಗ | ಸ್ಥಳ ಗೊಂದಲದ ವಿರುದ್ಧ ಆಕ್ರೋಶ, ಮೂಂದೂಡಿದ ಜಿಲ್ಲಾಡಳಿತದ ರೈತಸಭೆ.

Date:

ಬೇಸಿಗೆಯಲ್ಲಿ ವಿದ್ಯುತ್ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಲು ಚಿತ್ರದುರ್ಗ ಜಿಲ್ಲಾಡಳಿತದಿಂದ ಕರೆದಿದ್ದ ರೈತಸಭೆಯನ್ನು ರೈತರು ಬಹಿಷ್ಕರಿಸಿ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಹೊರಟು, ಮೂಂದೂಡಿದ ಘಟನೆ ನಡೆದಿದೆ.

ರೈತರೊಂದಿಗೆ ವಿದ್ಯುತ್, ಬೆಳೆ ಪರಿಹಾರ ಸೇರಿದಂತೆ ಸಮಸ್ಯೆಗಳ ಬಗ್ಗೆ ಚರ್ಚಿಸಲು ಜಿಲ್ಲಾಡಳಿತದಿಂದ ಆಯೋಜಿಸಿದ್ದ ರೈತರಿಂದ ಸಭೆ ಸ್ಥಳದ ಸ್ಥಳದ ಗೊಂದಲದಿಂದ ಪ್ರಾರಂಭವಾಗದೆ ಅಧಿಕಾರಿಗಳ ವಿರುದ್ಧ ರೈತರು ಬಹಿಷ್ಕಾರ ಹಾಕಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ

ರೈತರು ಸಾಮಾನ್ಯವಾಗಿ ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಎದುರಿಸುವ ವಿದ್ಯುತ್ ಸಮಸ್ಯೆ, ಬೆಳೆ ವಿಮೆ ಪರಿಹಾರ, ಭದ್ರಾ ಮೇಲ್ದಂಡೆ ಕಾಮಗಾರಿ ಕುರಿತಂತೆ ಚರ್ಚಿಸಲು ರೈತರ ಸಭೆಯನ್ನು ಮೊದಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾ.25 ಮಂಗಳವಾರ ಬೆಳಗ್ಗೆ 11 ಗಂಟೆಗೆ ಕರೆಯಲಾಗಿತ್ತು. ಆದರೆ, ಈ ಸಭೆ ಕಾರಣಾಂತರಗಳಿಂದ ಜಿಲ್ಲಾ ಪಂಚಾಯಿತಿ ಸಭಾಂಗಣಕ್ಕೆ ಸ್ತಳಾಂತರವಾಗಿತ್ತು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಕಾರ್ಯಕ್ರಮ ನಡೆಯುತ್ತಿದ್ದ ಕಾರಣ, ಮಿನಿ ಸಭಾಂಗಣದಲ್ಲಿ ರೈತರ ಸಭೆಗೆ ವ್ಯವಸ್ಥೆ ಮಾಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಿನಿ ಸಭಾಂಗಣದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಬಂದಿದ್ದ ರೈತರಿಗೆ ಕುಳಿತುಕೊಳ್ಳಲು ಜಾಗ ಇಲ್ಲದಂತಾಗಿತ್ತು. ಸಾಕಷ್ಟು ಸಂಖ್ಯೆಯಲ್ಲಿ ರೈತರು ಸಭೆಗೆ ಆಗಮಿಸಿದ್ದರಿಂದ ಅಧಿಕಾರಿಗಳು ಕುರ್ಚಿ ವ್ಯವಸ್ಥೆ ಮಾಡಿದರೂ, ಜಾಗ ಸಾಲದಾಯಿತು. ಇದರಿಂದ ಸಿಡಿಮಿಡಿಗೊಂಡ ಹಲವು, ರೈತರು ಕುಳಿತುಕೊಳ್ಳಲು ಜಾಗವೇ ಇಲ್ಲದೇ, ಇಂತಹ ಕಾಟಾಚಾರದ ಸಭೆ ಯಾಕೆ ಮಾಡುತ್ತೀರಿ ಎಂದು ಅಸಮಧಾನ ವ್ಯಕ್ತಪಡಿಸಿ, ವಾಪಾಸು ಮುಖ್ಯ ಸಭಾಂಗಣಕ್ಕೆ ಬಂದ ರೈತರು, ಅಲ್ಲಿಯೂ ಆರೋಗ್ಯ ಇಲಾಖೆ ಕಾರ್ಯಕ್ರಮ ಬೇಗ ಮುಗಿಯದಿರುವುದನ್ನು ಕಂಡು ಬೇಸರ ವ್ಯಕ್ತಪಡಿಸಿದರು.

ಬೆಳಗ್ಗೆ 11 ಗಂಟೆಗೆ ಕರೆದಿದ್ದ ಸಭೆಗೆ 12.45 ಆದರೂ ಜಿಲ್ಲಾಧಿಕಾರಿಗಳು ಸೇರಿದಂತೆ ಯಾವುದೇ ಇಲಾಖೆಯ ಅಧಿಕಾರಿಗಳು ಆಗಮಿಸದಿರುವುದನ್ನು ಕಂಡು ರೈತರು ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾಡಳಿತದ ವಿರುದ್ಧ ಧಿಕ್ಕಾರ ಕೂಗಿದರು.ಈ ವೇಳೆ ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಬಿ.ಮಂಜುನಾಥ್ ರೈತರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರಾದರೂ ಪ್ರಯೋಜನವಾಗಲಿಲ್ಲ.

ಈ ವೇಳೆ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ಧವೀರಪ್ಪ ಮಾತನಾಡಿ, “ಸರಿಯಾದ ಜಾಗವೇ ನಿಗದಿಯಾಗದೇ ರೈತರ ಸಭೆ ಕರೆದು ಸಭೆ ಗೊಂದಲದ ಗೂಡಾಗಿದೆ. ಒಂದೂವರೆ ಗಂಟೆಯಾದರೂ ಅಧಿಕಾರಿಗಳು ಬಂದಿಲ್ಲ. ಆದ್ದರಿಂದ ಈ ಸಭೆಯನ್ನು ಬರ್ಖಾಸ್ತು ಮಾಡಿ ಯುಗಾದಿ ಹಬ್ಬದ ನಂತರ ಕರೆಯಲಿ ಎಂದು ಒತ್ತಾಯಿಸಿದಾಗ ರೈತರು ಸಹಮತ ವ್ಯಕ್ತಪಡಿಸಿದರು.

ಈ ವೇಳೆಗೆ ಸ್ಥಳಕ್ಕೆ ಆಗಮಿಸಿದ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹಾಗೂ ಡಿವೈಎಸ್‌ಪಿ ದಿನಕರ್ ಕೆಲ ರೈತರ ಜೊತೆಗೆ ಮಾತುಕತೆ ನಡೆಸಿ, ಯುಗಾದಿ ಹಬ್ಬದ ನಂತರ ರೈತರ ಸಭೆ ನಡೆಸಿ ಎಲ್ಲ ಸಮಸ್ಯೆಗಳ ಬಗ್ಗೆ ಚರ್ಚಿಸುವುದಾಗಿ ಭರವಸೆ ನೀಡಿದರು.

ಸಭೆಯಲ್ಲಿ ರೈತ ಮುಖಂಡರಾದ ಹಂಪಯ್ಯನಮಾಳಿಗೆ ಧನಂಜಯ, ಬಸ್ತಿಹಳ್ಳಿ ಸುರೇಶ್‌ಬಾಬು, ಕೆ.ಪಿ.ಭೂತಯ್ಯ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ್, ಎನ್.ಇ.ಲಕ್ಷ್ಮಿಕಾಂತ್ , ಹುಣಸೆಕಟ್ಟೆ ಕಾಂತರಾಜ್, ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಸಿದ್ದಪ್ಪ, ತಿಮ್ಮಣ್ಣ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಹಲವು ರೈತರು ಆಗಮಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಎಚ್.ಪಿ.ವಿ ಲಸಿಕೆ ಅತ್ಯಂತ ಸುರಕ್ಷಿತ: ಡಾ. ಮೆಲ್ವಿನ್ ಕುಮಾರ್

ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಕಂಡುಬರುಲು ಹ್ಯೂಮನ್ ಪ್ಯಾಪಿಲೋಮ ವೈರಸ್(ಎಚ್.ಪಿ.ವಿ) ಹೆಚ್ಚಾಗಿ ಕಾರಣವಾಗುತ್ತದೆ....

ಚಿತ್ರದುರ್ಗ | ಭೀಕರ ಅಪಘಾತ: ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು, ಇಬ್ಬರಿಗೆ ಗಾಯ

ಚಿತ್ರದುರ್ಗ ಜಿಲ್ಲೆಯ ಹೆಗ್ಗರೆ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್...

ಚಿತ್ರದುರ್ಗ | ಅಡುಗೆ ಅನಿಲ ಕೊರತೆಯಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ದೇಶದಲ್ಲಿ ಗ್ಯಾಸ್ ಸರಬರಾಜು...

ಚಿತ್ರದುರ್ಗ | ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವ ಡಿ.ಸುಧಾಕರ್

ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ...