ಚಿತ್ರದುರ್ಗ | ಶಿವಸಂಚಾರಕ್ಕೆ ಶಾಶ್ವತನಿಧಿ; ನಾಟಕೋತ್ಸವದಲ್ಲಿ ಸಾಣೇಹಳ್ಳಿ ಶ್ರೀಗಳ ಒತ್ತಾಯ

Date:

“ಕಲಾವಿದರ ವೇತನ ಸೌಲಭ್ಯ ಭರಿಸಲು ಸಾಣೇಹಳ್ಳಿಯ ಶಿವಸಂಚಾರಕ್ಕೆ ಶಾಶ್ವತನಿಧಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡುವಂತೆ
ಚಿತ್ರದುರ್ಗ ಜಿಲ್ಲೆಯ ಶಾಸಕರು, ಸಚಿವರು ಒತ್ತಾಯಿಸಬೇಕು” ಎಂದು ರಾಷ್ಟ್ರೀಯ ನಾಟಕೋತ್ಸವ ಸಮಾರೋಪ ಸಮಾರಂಭದಲ್ಲಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ತಿಳಿಸಿದರು.

1003054138

ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯಲ್ಲಿ ಶುಕ್ರವಾರ ಆಯೋಜಿಸಿದ್ದ‌ ರಾಷ್ಟ್ರೀಯ ನಾಟಕೋತ್ಸವದ ಸಮಾರೋಪ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು “ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನಮ್ಮ ಬಗ್ಗೆ ಪ್ರೀತಿ, ವಿಶ್ವಾಸ ಇದೆ.
ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಬಗೆಹರಿಸಲು ಬೆಂಗಳೂರಿನಲ್ಲಿ ಇರಬೇಕಾದ ಅನಿವಾರ್ಯ ಇರುವುದರಿಂದ ಅವರು ಸಮಾರೋಪ ಸಮಾರಂಭಕ್ಕೆ ಬರಲು ಸಾಧ್ಯವಾಗಿಲ್ಲ” ಎಂದು ಹೇಳಿದರು.

1003054139

“ಉಮಾಶ್ರೀ ಅವರು ಅಭಿಜಾತ ಕಲಾವಿದೆ. ಅವರಿಗೆ ಶಿವಕುಮಾರ ಪ್ರಶಸ್ತಿ ನೀಡಿದ್ದರಿಂದ ಕನ್ನಡ ನಾಡು ಸಂಭ್ರಮಿಸಿದೆ.‌ ಸಾಣೇಹಳ್ಳಿಯಲ್ಲಿ ತಮ್ಮ ತಂಗಿಯ ಮಕ್ಕಳನ್ನು ನಮ್ಮಲ್ಲಿ ಓದಲು ಉಮಾಶ್ರೀ ಕಳಿಸಿದ್ದರು” ಎಂದು ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1003054150

ಸಾಣೇಹಳ್ಳಿಯಲ್ಲಿ ಶಿವಸಂಚಾರದಿಂದ ಕೊಡುವ ಶಿವಕುಮಾರ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಕಲಾವಿದೆ ಉಮಾಶ್ರೀ, “ಶಿವಸಂಚಾರದ ಕಲಾವಿದರಿಗೆ ಹೆಚ್ಚಿನ ಸಂಬಳ ನೀಡುವ ಸಲುವಾಗಿ 3 ಕೋಟಿ
ರೂಪಾಯಿಗಳಷ್ಟು ಸಂಗ್ರಹಿಸಿ ಠೇವಣಿ ಇಡುವ ಯೋಜನೆಗೆ ಶಾಸಕರ ನಿಧಿಯಿಂದ ರೂ. 5 ಲಕ್ಷ ನೀಡುವುದರ ಜೊತೆಗೆ ಈಚಿನ ನನ್ನ ಶರ್ಮಿಷ್ಠೆ ಎಂಬ ಏಕವ್ಯಕ್ತಿ ನಾಟಕದ 5 ಪ್ರದರ್ಶನದ ಮೂಲಕ ಸಂಗ್ರಹವಾಗುವ ಮೊತ್ತವನ್ನು ದೇಣಿಗೆಯಾಗಿ ನೀಡುತ್ತೇನೆ” ಎಂದು ಖ್ಯಾತ ರಂಗ ಕಲಾವಿದೆ ಉಮಾಶ್ರೀ ಭರವಸೆ ನೀಡಿದರು.

1003054139 1

“ನನ್ನನ್ನು ಪ್ರೋತ್ಸಾಹಿಸುವ ಪ್ರೇಕ್ಷಕ ಪ್ರಭುಗಳಿಗೆ ಶಿವಕುಮಾರ ಪ್ರಶಸ್ತಿ ಅರ್ಪಿಸುವೆ. ಇದಕ್ಕೂ ಮೊದಲು ಕಲ್ಲಂತಿದ್ದ ನನ್ನನ್ನು ರಂಗಭೂಮಿಯಲ್ಲಿ ಶಿಲೆಯಾಗಿ ಮಾಡಿದ ಅನೇಕರನ್ನು ಸ್ಮರಿಸುತ್ತೇನೆ” ಎಂದರು.

ಶಿವಸಂಚಾರದ ಕಲಾವಿದರಿಗೆ ಹೆಚ್ಚಿನ ಸಂಬಳ ನೀಡುವ ಸಲುವಾಗಿ 3 ಕೋಟಿ ರೂಪಾಯಿಗಳಷ್ಟು ಸಂಗ್ರಹಿಸಿ ಠೇವಣಿ ಇಡುವ ಯೋಜನೆಗೆ ರೂ. 25 ಲಕ್ಷ ನೀಡುವ ವಾಗ್ದಾನವನ್ನು ಚಿತ್ರದುರ್ಗ ಜಿಲ್ಲೆಯ ಸಚಿವರು, ಶಾಸಕರು ಶುಕ್ರವಾರ ಭರವಸೆ ನೀಡಿದರು.

1003054148

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಮಾತನಾಡಿ “ವೈಯಕ್ತಿಕವಾಗಿ ರೂ. 5 ಲಕ್ಷ ಹಾಗೂ ಡಿಸಿಸಿ ಮೂಲಕ ರೂ. 5 ಲಕ್ಷವನ್ನು ನೀಡುವೆ. ಅಲ್ಲದೆ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರು ರೂ.5 ಲಕ್ಷ ನೀಡಲಿದ್ದಾರೆ” ಎಂದು ಭರವಸೆ ನೀಡಿದರು.

1003054140

ಇದಕ್ಕೂ ಮೊದಲು ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹನುಮಲಿ ಷಣ್ಮುಖಪ್ಪ ತಲಾ ರೂ. 5 ಲಕ್ಷ ದೇಣಿಗೆ ನೀಡುವುದಾಗಿ ಘೋಷಿಸಿದರು.‌

ಖ್ಯಾತ ರಂಗಕಲಾವಿದೆ, ಸಿನಿಮಾ ನಟಿ ಮಾಜಿ ಸಚಿವೆ ಉಮಾಶ್ರೀ ಅವರಿಗೆ ಚಿತ್ರದುರ್ಗ ಜಿಲ್ಲೆಯ ಸಾಣೇಹಳ್ಳಿಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ನಾಟಕೋತ್ಸವದ ಸಮಾರೋಪ ಸಮಾರಂಭದಲ್ಲಿ ಶುಕ್ರವಾರ ಶಿವಕುಮಾರ ಪ್ರಶಸ್ತಿ ಪ್ರದಾನ ಮಾಡಲಾಯಿತು. ನಾಟಕ, ನೃತ್ಯ ರೂಪಕ ಪ್ರದರ್ಶನ ನಡೆಯಿತು.

1003054146

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಧರ್ಮಸ್ಥಳದ ಅಪರಾಧ ಪ್ರಕರಣಗಳ ಸಮಗ್ರ ತನಿಖೆಗೆ ಮಹಿಳಾ ಒಕ್ಕೂಟ ಸಹಿ ಸಂಗ್ರಹ

ರಾಷ್ಟ್ರೀಯ ನಾಟಕೋತ್ಸವದ ಸಮಾರೋಪ ಸಮಾರಂಭದಲ್ಲಿ ಲೇಖಕ ಸಿದ್ಧು ಯಾಪಲಪರವಿ, ಗ್ಯಾರಂಟಿ ಯೋಜನೆ ಜಿಲ್ಲಾಧ್ಯಕ್ಷ ಶಿವಣ್ಣ, ರಂಗಕರ್ಮಿ ಶ್ರೀನಿವಾಸ್ ಕಪ್ಪಣ್ಣ,ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ, ಹಿರೇಕೆರೂರು ಶಾಸಕ ಯು.ಬಿ.ಬಣಕಾರ
ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹನುಮಲಿ ಷಣ್ಮಖಪ್ಪ, ಕಲಾವಿದರು ಸೇರಿದಂತೆ ಸಾವಿರಾರು ಮಂದಿ ಭಾಗವಹಿಸಿದ್ದರು.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...