ಚಿತ್ರದುರ್ಗ | ರಸ್ತೆ ತಡೆ ನಡೆಸಿ ರೈತರ ಜಮೀನಿಗೆ ರಾತ್ರಿ ಗೃಹಬಳಕೆ ವಿದ್ಯುತ್ ಪೂರೈಸಿ: ರೈತ ಸಂಘ

Date:

ರೈತರ ತೋಟದ ಮನೆ, ಜಮೀನುಗಳಿಗೆ ರಾತ್ರಿ ವೇಳೆ ಮನೆ ಬಳಕೆ ವಿದ್ಯುತ್ ಪೂರೈಸದ ಕ್ರಮ ಖಂಡಿಸಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಮತ್ತು ಮೊಳಕಾಲ್ಕುರು ತಾಲ್ಲೂಕು ರೈತ ಸಂಘಗಳ ಒಕ್ಕೂಟದಿಂದ ನೂರಾರು ರೈತರು ಚಳ್ಳಕೆರೆ ಬಳಿಯ ಗರಣಿ ಕ್ರಾಸ್ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ರೈತರು ಟ್ರ್ಯಾಕ್ಟ‌ರ್ ಹಾಗೂ ಜಾನುವಾರುಗಳೊಂದಿಗೆ ರಸ್ತೆ ತಡೆದು ಬೃಹತ್‌ ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

1001609429
ಚಳ್ಳಕೆರೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆ

ಈ ವೇಳೆ ಮಾತನಾಡಿದ ಬೇಡರೆಡ್ಡಿಹಳ್ಳಿ ಬಸವರೆಡ್ಡಿ, “ರಾತ್ರಿ ವೇಳೆ ತೋಟಗಳಲ್ಲಿ ವಾಸಮಾಡುವ ಮನೆಗೆ ವಿದ್ಯುತ್ ನೀಡದೆ, ಮಕ್ಕಳ ವಿದ್ಯಾಭ್ಯಾಸ ಹಾಳಾಗುತ್ತಿದೆ.‌ರಾತ್ರಿ ಸಮಯ ಹೊಲಗಳಲ್ಲಿ ಕೆಲಸ ಮಾಡುವಾಗ ಕತ್ತಲಲ್ಲಿ ಹಾವು ಚೇಳು, ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಗ್ರಾಮೀಣ ರೈತರ ಬದುಕನ್ನ ಮೂರಾಬಟ್ಟೆ ಮಾಡಿ ತೋಟದ ಮನೆಗಳಲ್ಲಿ ವಾಸ ಮಾಡುತ್ತಿರುವ ರೈತ ಕುಟುಂಬಗಳ ಬದುಕನ್ನೇ ಹಾಳು ಮಾಡಲಾಗಿದೆ.‌ ರೈತರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರಕ್ಕೆ ಆದೇಶ ನೀಡಬೇಕೆಂದು ಜಿಲ್ಲಾಡಳಿತಕ್ಕೆ ಒತ್ತಾಯ ಮಾಡುತ್ತೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

1001609427

ಮರ್ಲಹಳ್ಳಿ ರವಿಕುಮಾರ್ ಮಾತನಾಡಿ, “ರೈತರ ಜಮೀನುಗಳಿಗೆ ವೊಲ್ವೇಜ್ ಇಲ್ಲದ ವಿದ್ಯುತ್ ನೀಡಿ ಮೋಟಾರ್ ಗಳು ಸುಟ್ಟು ಹೋಗುತ್ತಿವೆ.‌ ಬೆಳೆ ನಷ್ಟದಿಂದ ಸಾಲದ ಹೊರೆಯಾಗುತ್ತಿದೆ. ರೈತರ ಸಾಲ ವಸೂಲಾತಿಗೆ ಬ್ಯಾಂಕ್‌ಗಳು ನೋಟೀಸ್, ಕಿರುಕುಳ ನೀಡುತ್ತಿವೆ.‌ ಸಾಲಕ್ಕೆ ಆಸ್ತಿ ಹರಾಜು, ಬೆಳೆ ಕಳ್ಳತನ, ಸಾಲದ ಸುಳಿಗೆ ಸಿಲುಕಿ ನಲುಗಿದ ರೈತರು ಸಾವು ಬದುಕಿನ ಜೊತೆ ಹೋರಾಡುತ್ತಿದ್ದಾರೆ. ಸರ್ಕಾರ, ಜಿಲ್ಲಾಡಳಿತ ರೈತರನ್ನು ರಕ್ಷಿಸಲು ಸರ್ಕಾರದ ಅನುದಾನವನ್ನು ರೈತರಿಗೆ, ಕೂಲಿಕಾರರಿಗೆ ತಲುಪಿಸಲು ಕ್ರಮ ಕೈಗೊಳ್ಳಬೇಕು.‌ ಅಧಿಕಾರಿಗಳು ಸ್ಥಳಕ್ಕೆ ಬಂದು ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಹಳ್ಳಿಯ ಜನರ ಬದುಕಿಗೆ ಶಕ್ತಿ ತುಂಬಬೇಕೆಂದು ನಿಷ್ಕ್ರಿಯ ಭ್ರಷ್ಟ ಅಧಿಕಾರಿಗಳಿಂದ ಅಗುತ್ತಿರುವ ತೊಂದರೆಗಳನ್ನು ಸರಿಪಡಿಸಬೇಕೆಂದು ಒತ್ತಾಯಿಸುತ್ತಿದ್ದೇವೆ” ಎಂದು ಆಗ್ರಹಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಇಂಧನ ಸಚಿವರ ಭೇಟಿ, ವಿದ್ಯುತ್ ಸಮಸ್ಯೆ ನಿವಾರಣೆಗೆ ರೈತಸಂಘ ಆಗ್ರಹ

ನೂರಾರು ಸಂಖ್ಯೆಯಲ್ಲಿ ಟ್ಯಾಕ್ಟರ್ ಎತ್ತಿನಗಾಡಿ ಬೈಕ್ ನಲ್ಲಿ ಬಂದಿದ್ದ ರೈತರು ಗರಣಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ವಾಹನಗಳನ್ನು ತಡೆದು ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಪ್ರತಿಭಟನೆಯಲ್ಲಿ ಚಳ್ಳಕೆರೆ, ಮೊಳಕಾಲ್ಮೂರು ತಾಲೂಕಿನ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರು, ಹಲವು ಗ್ರಾಮಗಳ ನೂರಾರು ರೈತರು ಭಾಗವಹಿಸಿದ್ದರು.‌

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವ ಡಿ.ಸುಧಾಕರ್

ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ...

ಚಿತ್ರದುರ್ಗ | ಭಾರತೀಯ ವಾಸ್ತುಶಿಲ್ಪ ಜ್ಞಾನ ವಿದ್ಯಾರ್ಥಿಗಳಿಗೆ ಅಗತ್ಯ : ಡಾ.ಹೊನ್ನೂರ ಸ್ವಾಮಿ

ಭಾರತೀಯ ದೇವಾಲಯಗಳ ಪರಂಪರೆಗೆ ಸುದೀರ್ಘ ಹಾಗೂ ಪ್ರಾಚೀನ ಇತಿಹಾಸವಿದೆ. ಮುಂದಿನ ದಿನಗಳಲ್ಲಿ...

ಚಿತ್ರದುರ್ಗ | ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ (ಎಸ್‍ಐಆರ್)-2026ರ ಸಂಬಂಧ ಬಾಕಿ ಇರುವ ಮತದಾರರ...

ಚಿತ್ರದುರ್ಗ | ವಿಜೃಂಭಣೆಯ ನಾಯಕನಹಟ್ಟಿ ದೊಡ್ಡರಥೋತ್ಸವ

ಮಧ್ಯ ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ನಾಯಕನಹಟ್ಟಿಯಲ್ಲಿ ಶುಕ್ರವಾರ ದೊಡ್ಡರಥೋತ್ಸವ ಜರುಗಿತು. ಮಧ್ಯಾಹ್ನ...