ಚಿತ್ರದುರ್ಗ | ದಸಂಸ ನೇತೃತ್ವದಲ್ಲಿ ಎಸ್ ಸಿ ಎಸ್ ಟಿ ದೌರ್ಜನ್ಯ ಕಾಯ್ದೆ ಸಂತ್ರಸ್ತರ ಹೋರಾಟ 8ನೇ ದಿನಕ್ಕೆ

Date:

ಎಸ್ ಸಿ ಎಸ್ ಟಿ ದೌರ್ಜನ್ಯ ಕಾಯ್ದೆಯಡಿಯಲ್ಲಿ ಸಂತ್ರಸ್ತರಿಗೆ ಜಿಲ್ಲಾಡಳಿತ ಮತ್ತು ಸರಕಾರಗಳು ಇದುವರೆಗೂ ನೆರವು ಒದಗಿಸಿಲ್ಲ ಎಂದು ಆರೋಪಿಸಿ, ಕೂಡಲೇ ನೆರವನ್ನು ಒದಗಿಸಲು ಆಗ್ರಹಿಸಿ ದಸಂಸ ನೇತೃತ್ವದಲ್ಲಿ ನಡೆಸುತ್ತಿರುವ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕೋನಿಗರಹಳ್ಳಿ, ದೊಡ್ಡಬೀರನಹಳ್ಳಿಯ ದೌರ್ಜನ್ಯಕ್ಕೊಳಗಾದ ಎಸ್ ಸಿ ಎಸ್ ಟಿ ದೌರ್ಜನ್ಯ ಕಾಯ್ದೆಯ ಸಂತ್ರಸ್ತರ ಹೋರಾಟ 8ನೇ ದಿನಕ್ಕೆ ಕಾಲಿಟ್ಟ ವೇಳೆ ಆಕ್ರೋಶಕ್ಕೆ ತಿರುಗಿದ್ದು ಚಳ್ಳಕೆರೆ ತಾಲೂಕು ಕಚೇರಿ ಮುಂಭಾಗದಲ್ಲಿ ರಸ್ತೆ ಬದಿಯಲ್ಲಿ ಆಹಾರ ತಯಾರಿಸಿ ಸಂತ್ರಸ್ತರ ನೋವಿನ ಊಟ ಸಿದ್ಧವಿದೆ ಎಂದು ಕೂಗಿ ಹೇಳುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ..

1002487242

ತಾಲೂಕು ಕಚೇರಿ ಮುಂಭಾಗದ ರಸ್ತೆ ಪಕ್ಕದ ಪಾದಾಚಾರಿ ಮಾರ್ಗದಲ್ಲಿ ಸಂತ್ರಸ್ತ ಕುಟುಂಬಗಳು ಸೌದೆ ಒಲೆಯ ಮೇಲೆ ಅಡುಗೆ ಮಾಡುವುದರ ಮೂಲಕ ವಿನೂತನವಾಗಿ ತಾಲೂಕು ಆಡಳಿತಕ್ಕೆ ಹಾಗೂ ಜಿಲ್ಲಾ ಆಡಳಿತಕ್ಕೆ ಬಿಸಿ ಮುಟ್ಟಿಸಿದರು. ಅಡುಗೆ ಮಾಡಿ ಫುಟ್ ಬಾತ್ ನಲ್ಲಿಯೇ ಸ್ಥಳದಲ್ಲಿ ಊಟ ಮಾಡುವುದರ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.

“ಹೋರಾಟ ಪ್ರಾರಂಭಿಸಿ ಎಂಟು ದಿನಗಳಾದರೂ ನಮ್ಮ ಸಂಕಷ್ಟ ಕೇಳಲು ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬಂದಿಲ್ಲ . ಸಂತ್ರಸ್ತರ ಕುಟುಂಬಗಳ ಬೇಡಿಕೆಗಳನ್ನು ಈಡೇರಿಸುವವರೆಗೂ ಹೋರಾಟ ಮುಂದುವರಿಯಲಿದೆ” ಎಂದು ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಟಿಡಿ.ರಾಜಗಿರಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002487241

“ಕಳೆದ ಎಂಟು ದಿನಗಳಿಂದ ಮಳೆ, ಗಾಳಿ, ಚಳಿ ಎನ್ನದೆ ನ್ಯಾಯಕ್ಕಾಗಿ ಧರಣಿ ಮಾಡುತ್ತಿದ್ದೇವೆ. ಆದರೆ ಜಿಲ್ಲಾಡಳಿತ, ತಾಲೂಕು ಆಡಳಿತ ಇತ್ತ ಕಡೆ ಗಮನಹರಿಸಿಲ್ಲ. ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ದೊರೆತಿಲ್ಲ. ಇಲ್ಲಿನ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ” ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದರು.

‘ಸಂತ್ರಸ್ತರ ನೋವಿನ ಊಟ ಸಿದ್ಧವಿದೆ. ಇನ್ನು ಜಿಲ್ಲಾಧಿಕಾರಿ ಬರುವಿಕೆಗಾಗಿ ರಸ್ತೆ ಪಕ್ಕದ ಫುಟ್ ಬಾತ್ ಮೇಲೆ ಅಡಿಗೆ ತಯಾರಿಸಿದ್ದೇವೆ’ ಎಂದು ಧರಣಿ ನಿರತ ಮಹಿಳೆಯರು ಅಳಲು ತೋಡಿಕೊಂಡರು.‌

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ವೇತನ ಹೆಚ್ಚಳ ಹಾಗೂ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ

ದಲಿತ ಸಂಘರ್ಷ ಸಮಿತಿಯ ತಿಮ್ಮಪ್ಪ, ಕೆ ಎಂ ಎಸ್ ಹರೀಶ್ ಕೊನಿಗಾರಹಳ್ಳಿ, ಹನುಮಂತ, ಹಾಗೂ ಬೀರನಹಳ್ಳಿಯ ತಿಪ್ಪೇಸ್ವಾಮಿ, ರತ್ನಮ್ಮ, ಸೇರಿದಂತೆ ಹಲವರು ಹೋರಾಟದಲ್ಲಿ ಭಾಗವಹಿಸಿದ್ದರು.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...