ಚಿತ್ರದುರ್ಗ | ನಿರೀಕ್ಷೆ ಮೀರಿ ಕಡಲೆ ಬಿತ್ತನೆ ಬೀಜ ವಿತರಣೆ; ಭರವಸೆ ಮೂಡಿಸಿದ ಬೆಳೆ

Date:

ಹಿಂಗಾರು ಹಂಗಾಮಿನ ಪ್ರಮುಖ ಬೆಳೆಯಾಗಿರುವ ಕಡಲೆ ಬಿತ್ತನೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ ನಿರೀಕ್ಷೆ ಮೀರಿ ಬೀಜ ವಿತರಣೆಯಾಗಿದೆ. ಕೃಷಿ ಇಲಾಖೆ 20,000 ಕ್ವಿಂಟಲ್‌ ಬಿತ್ತನೆ ಬೀಜ ವಿತರಣೆಯ ಗುರಿ ಹೊಂದಿತ್ತು. ಆದರೆ, 23,500ಕ್ವಿಂಟಲ್‌ ಬೀಜವನ್ನು ರೈತರಿಗೆ ವಿತರಿಸಿದೆ.

ಕೃಷಿ ಇಲಾಖೆ ಅಂದಾಜು ಪ್ರಕಾರ, ಹಿಂಗಾರು ಹಂಗಾಮಿನಲ್ಲಿ 57,000 ಹೆಕ್ಟೇರ್‌ ಬಿತ್ತನೆ ಗುರಿ ಇದೆ. ಇದರಲ್ಲಿ ಕಡಲೆ ಪ್ರಮುಖ ಬೆಳೆಯಾಗಿದ್ದು, 28,000 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಈಗಾಗಲೇ 27,000 ಹೆಕ್ಟೇರ್‌ ಪ್ರದೇಶದಲ್ಲಿ ಕಡಲೆ ಬಿತ್ತನೆಯಾಗಿದ್ದು, ಡಿಸೆಂಬರ್‌ ಮೊದಲ ವಾರದವರೆಗೆ ಕಾಲಾವಕಾಶವಿದೆ. ಬಿತ್ತನೆ ಪ್ರದೇಶ ನಿರೀಕ್ಷೆ ಮೀರಿ ಹೆಚ್ಚಾಗುವ ಸಾಧ್ಯತೆ ಇದೆ.

ಹಿರಿಯೂರು ತಾಲ್ಲೂಕಿನ ಐಮಂಗಲ, ಕಸಬಾ, ಚಿತ್ರದುರ್ಗ ತಾಲ್ಲೂಕಿನ ತುರುವನೂರು, ಕಸಬಾ ಹಾಗೂ ಚಳ್ಳಕೆರೆ ತಾಲ್ಲೂಕಿನ ಕಸಬಾ ಹೋಬಳಿಯಲ್ಲಿ ಕಡಲೆ ಪ್ರಮುಖ ಬೆಳೆ. ಕಪ್ಪು ಮಣ್ಣು ಹೊಂದಿದ ಜಮೀನು ಕಡಲೆ ಬೆಳೆಗೆ ಸೂಕ್ತ. ಹೊಸದುರ್ಗ ಹಾಗೂ ಹೊಳಲ್ಕೆರೆ ತಾಲ್ಲೂಕಿನ ಅಲ್ಲಲ್ಲಿ ಬೆಳೆಯಲಾಗುತ್ತದೆ. ಮುಂಗಾರು ಕೈಕೊಟ್ಟು ಸಂಕಷ್ಟಕ್ಕೆ ಸಿಲುಕಿದ ರೈತರು ಕಡಲೆ ಕೈಹಿಡಿಯುವು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಡಲೆ ಬಿತ್ತನೆ ಸಾಮಾನ್ಯವಾಗಿ ಅ.15ರಿಂದ ಡಿಸೆಂಬರ್‌ ಮೊದಲ ವಾರದವರೆಗೆ ನಡೆಯುತ್ತದೆ. ಚಳಿಗಾಲದಲ್ಲಿ ಬೀಳುವ ಇಬ್ಬನಿಗೆ ಕಡಲೆ ಹುಲುಸಾಗಿ ಬೆಳೆಯುತ್ತದೆ. ಮಳೆ ಕೊರತೆ ಉಂಟಾಗಿ ರೈತರು ಕಡಲೆ ಬಿತ್ತನೆಗೂ ಹಿಂದೇಟು ಹಾಕುವ ಸ್ಥಿತಿ ನಿರ್ಮಾಣವಾಗಿತ್ತು. ಆದರೆ, ನವೆಂಬರ್‌ ಮೊದಲ ವಾರ ಬಿದ್ದ ಮಳೆ ರೈತರಲ್ಲಿ ಮಂದಹಾಸ ಮೂಡಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...