ಚಿತ್ರದುರ್ಗ | ನರೇಗಾ ಪುನಃ ಜಾರಿ ಹೋರಾಟಕ್ಕೆ ಬೆಂಬಲಿಸಿ: ಕಾಂಗ್ರೆಸ್ ಮುಖಂಡ ಆರ್ ಕೆ ಸರ್ದಾರ್

Date:

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ನರೇಗಾ ಯೋಜನೆ ಬದಲಿಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ ಗ್ರಾಮ್ ಜಿ ಕಾಯ್ದೆ ರದ್ದಾಗಿ ಮನರೇಗಾ ಪುನ: ಸ್ಥಾಪನೆಯಾಗುವವರೆಗೆ ನಮ್ಮ ಹೋರಾಟಕ್ಕೆ ಎಲ್ಲರೂ ಬೆಂಬಲಿಸಬೇಕು ಎಂದು ಚಿತ್ರದುರ್ಗದಲ್ಲಿ ಕಾಂಗ್ರೆಸ್ ಮುಖಂಡ ಆರ್ ಕೆ ಸರ್ದಾರ್ ಮನವಿ ಮಾಡಿದರು.‌

ಚಿತ್ರದುರ್ಗ ನಗರದ ಸಂವಿಧಾನ ಶಿಲ್ಪಿ ಬಾ. ಬಿಆರ್ ಅಂಬೇಡ್ಕರ್ ವೃತ್ತದಲ್ಲಿ ಆಯೋಜಿಸಿದ್ದ ವಿಬಿಜಿರಾಮ್ ಜಿ ವಿರೋಧಿಸಿ, ನರೇಗಾ ಮತ್ತೆ ಜಾರಿಗೆ ತರಲು ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು “2005 ರಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಗಳಾಗಿದ್ದಾಗ ಮನರೇಗಾ ಉದ್ಯೋಗ ಖಾತ್ರಿ ಕಾನೂನು ಜಾರಿ ಮಾಡಿದರು. ಆ ಮೂಲಕ ಗ್ರಾಮೀಣ ಪ್ರದೇಶದ ಬಡವರಿಗೆ ಕೆಲಸದ ಹಕ್ಕು ಕೊಟ್ಟರು. ಮೋದಿ ಸರ್ಕಾರ ಅದನ್ನು ಕಿತ್ತುಹಾಕುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಬಿಜೆಪಿಯವರು ಹಳ್ಳಿಗಳ ಬಡವರು, ಹೆಣ್ಣುಮಕ್ಕಳು, ಕಾರ್ಮಿಕರಿಗೆ ಕೆಲಸ ಕೊಡಲು ಬಿಡುತ್ತಿಲ್ಲ. ನೀವು ಯಾವಾಗ ಕೇಳಿದರೂ ಉದ್ಯೋಗ ಕೊಡುವ ಕಾಯಿದೆಯನ್ನು ಜಾರಿ ಮಾಡಲಾಗಿತ್ತು. ಈಗ ಕೆಲಸವನ್ನು ಕೊಡಬೇಕೇ? ಬೇಡವೇ? ಎಂದು ಕೇಂದ್ರ ಸರ್ಕಾರ ತೀರ್ಮಾನಿಸಲಿದೆ. ಇಂತಹ ಅವೈಜ್ಞಾನಿಕ ಜನವಿರೋಧಿ ವಿಬಿ ಗ್ರಾಮ್ ಜಿ ರದ್ದಾಗಬೇಕು. ಜನರನ್ನು ತಪ್ಪು ದಾರಿ ಎಳೆಯಲು ರಾಮ್ ಜಿ ಸೇರಿಸಿದ್ದಾರೆ. ಇದನ್ನು ಕಿತ್ತುಹಾಕಲು ಎಲ್ಲರೂ ಹೋರಾಟಕ್ಕೆ ತಯಾರಾಗಿ” ಎಂದು ಕರೆ ನೀಡಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶದಲ್ಲಿ ಇನ್ನು ಮುಂದೆ ಮನರೇಗಾ ಯೋಜನೆ ಇರುವುದಿಲ್ಲ. ನಮ್ಮ ಸರ್ಕಾರ ಮನರೇಗಾ ಯೋಜನೆಯನ್ನು ಮುಂದುವರೆಸಲು ಹೋರಾಡುತ್ತಿದೆ. ದಲಿತರಿಗೆ, ಹೆಣ್ಣುಮಕ್ಕಳಿಗೆ ಕೆಲಸ ಕೊಡುವ ಕಾಯ್ದೆ. ಅದು ಸಂವಿಧಾನದ ಹಕ್ಕು. ಮನರೇಗಾವನ್ನು ಯಾವುದೇ ಕಾರಣಕ್ಕೂ ರದ್ದು ಮಾಡಬಾರದೆಂಬ ಒತ್ತಡವನ್ನು
ಹಾಕಲಾಗುತ್ತಿದೆ” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ದಕ್ಷಿಣ ಉಪಚುನಾವಣೆ;ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್: ಅಲ್ಪಸಂಖ್ಯಾತರ ವಿಭಾಗ ಒತ್ತಾಯ

ಪ್ರತಿಭಟನೆಯಲ್ಲಿ ಮಾಜಿ ಸಂಸದ ಬಿಎನ್ ಚಂದ್ರಪ್ಪ, ಬಾಬು ಜಗಜೀವನರಾಂ ನಿಗಮದ ಅಧ್ಯಕ್ಷ ಮಂಜುನಾಥ, ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್ ಪೀರ್, ಯಾಸಿನ್ ಮೊಹಮ್ಮದ್ ಸೇರಿದಂತೆ ಮುಖಂಡರು ಕಾರ್ಯಕರ್ತರು ಹಾಜರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಜೆಟ್ 2026-27ರಲ್ಲಿ ಜಿಲ್ಲೆಗೆ ನೀಡಿದ ಅನುದಾನ ಹಾಗೂ ಘೋಷಣೆಗಳೆಷ್ಟು?

ಅವಿಭಜಿತ ಶಿವಮೊಗ್ಗ ಜಿಲ್ಲೆಯಿಂದ ಕರ್ನಾಟಕ ರಾಜ್ಯಕ್ಕೆ ಮೂರು ಮುಖ್ಯಮಂತ್ರಿಗಳನ್ನು ನೀಡಿದ ಕೀರ್ತಿ...

ಚಿತ್ರದುರ್ಗ | ಎಚ್.ಪಿ.ವಿ ಲಸಿಕೆ ಅತ್ಯಂತ ಸುರಕ್ಷಿತ: ಡಾ. ಮೆಲ್ವಿನ್ ಕುಮಾರ್

ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಕಂಡುಬರುಲು ಹ್ಯೂಮನ್ ಪ್ಯಾಪಿಲೋಮ ವೈರಸ್(ಎಚ್.ಪಿ.ವಿ) ಹೆಚ್ಚಾಗಿ ಕಾರಣವಾಗುತ್ತದೆ....

ಚಿತ್ರದುರ್ಗ | ಭೀಕರ ಅಪಘಾತ: ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು, ಇಬ್ಬರಿಗೆ ಗಾಯ

ಚಿತ್ರದುರ್ಗ ಜಿಲ್ಲೆಯ ಹೆಗ್ಗರೆ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್...