ಚಿತ್ರದುರ್ಗ | ತಂಬಾಕು ಮಾರಾಟಗಾರರ ಮೇಲೆ ದಾಳಿ; 33 ಪ್ರಕರಣ ದಾಖಲು

Date:

ಯುವಜನತೆ ತಂಬಾಕಿನ ದುಶ್ಚಟಗಳಿಗೆ ಬಲಿಯಾಗುವುದನ್ನು ತಡೆಗಟ್ಟಲು ಹಾಗೂ ಸಾರ್ವಜನಿಕ ಆರೋಗ್ಯ ರಕ್ಷಣೆಗಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ತನಿಖಾ ತಂಡವು ಚಳ್ಳಕೆರೆ ನಗರ ಪ್ರದೇಶದ ವಿವಿಧೆಡೆ ಬುಧವಾರ ಜಂಟಿ ಕಾರ್ಯಾಚರಣೆ ನಡೆಸಿತು.

ಚಳ್ಳಕೆರೆ ನಗರದ ಪ್ರದೇಶದ ವಿವಿಧೆಡೆ ತಂಬಾಕು ಉತ್ಪನ್ನಗಳ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿದ ಆರೋಗ್ಯ ಇಲಾಖೆ ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳ ತಂಡವು ಬಾರ್ ಮತ್ತು ರೆಸ್ಟೋರೆಂಟ್‍ಗಳಲ್ಲಿ ಕೋಟ್ಪಾ-2003ರ ಕಾಯ್ದೆ ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಿತು.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುತ್ತಿದ್ದ ಸಂಬಂಧ ಸೆಕ್ಷನ್-4ರ ಅಡಿಯಲ್ಲಿ 31 ಪ್ರಕರಣಗಳನ್ನು ದಾಖಲಿಸಿ ರೂ.3,100 ದಂಡ ವಸೂಲಿ ಮಾಡಲಾಯಿತು. ಅಂತೆಯೇ, ನಿಯಮ ಬಾಹಿರವಾಗಿ ತಂಬಾಕು ಮಾರಾಟ ಮಾಡಿದ ಸಂಬಂಧ ಸೆಕ್ಷನ್-6ಎ ಅಡಿಯಲ್ಲಿ 2 ಪ್ರಕರಣ ದಾಖಲಿಸಿ ರೂ.200 ದಂಡ ವಿಧಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 ಯುವಜನತೆಯು ಅತೀ ಹೆಚ್ಚಾಗಿ ತಂಬಾಕಿನ ವ್ಯಸನಕ್ಕೆ ಒಳಗಾಗುತ್ತಿರುವುದರಿಂದ ಸಮಾಜದಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಅಂಗಡಿಗಳಲ್ಲಿ ಕಡ್ಡಾಯವಾಗಿ ಸೆಕ್ಷನ್-4, 6ಎ ಮತ್ತು 6ಬಿ ಫಲಕಗಳನ್ನು ಹಾಕುವಂತೆ ಸೂಚಿಸಿದ ಅಧಿಕಾರಿಗಳು, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ ಮತ್ತು ತಂಬಾಕು ಜಗಿದು ಉಗಿಯದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

ಈ ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ. ಪ್ರಭುದೇವ, ಅಬಕಾರಿ ಇನ್ಸ್‍ಪೆಕ್ಟರ್ ಗಂಗರಾಜು, ಆರೋಗ್ಯ ನಿರೀಕ್ಷಣಾಧಿಕಾರಿ ಅಮೃತ್ ರಾಜ್ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿಯ ಡಿಇಓ ಸ್ವಾಮಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಪೊಲೀಸರೊಂದಿಗೆ ಓಟ “ಜಾಗೃತ ರನ್ 2.0” 5 ಕೆ ಮ್ಯಾರಥಾನ್‍ಗೆ ಎಸ್ ಪಿ ರಂಜಿತ್ ಕುಮಾರ್ ಬಂಡಾರು ಚಾಲನೆ

ಯುವಜನತೆಯು ಮಾದಕ ವ್ಯಸನವೆಂಬ ಮಾರಕ ಜಾಲಕ್ಕೆ ಸಿಲುಕದೆ, ಸದೃಢ ಮತ್ತು ಆರೋಗ್ಯವಂತ...

ಚಿತ್ರದುರ್ಗ | 2027 ಕ್ಕೆ ದಾವಣಗೆರೆ-ಚಿತ್ರದುರ್ಗ ನೇರ ರೈಲ್ವೇ ಮಾರ್ಗ ಪೂರ್ಣ : ಕೇಂದ್ರ ಸಚಿವ ವಿ.ಸೋಮಣ್ಣ

ದಾವಣಗೆರೆ-ಚಿತ್ರದುರ್ಗ ನಡುವಿನ ನೇರ ರೈಲ್ವೇ ಮಾರ್ಗ ಕಾಮಗಾರಿ 2027ರ ಜೂನ್ ಅಂತ್ಯಕ್ಕೆ...

RTI ಕಾಯ್ದೆಗೆ ಪಂಚಾಯಿತಿ ಅಧಿಕಾರಿಗಳ ತಿಲಾಂಜಲಿ: ‘ಕಪ್ಪು ಪಟ್ಟಿ’ ನೆಪದಲ್ಲಿ ಮಾಹಿತಿ ನಿರಾಕರಣೆ ಕಾನೂನು ಬಾಹಿರ ನಡೆ?

ಜನಸಾಮಾನ್ಯರಿಗೆ ಪಾರದರ್ಶಕ ಆಡಳಿತ ನೀಡಬೇಕಾದ ಗ್ರಾಮ ಪಂಚಾಯಿತಿಗಳು, ಮಾಹಿತಿ ಹಕ್ಕು ಕಾಯ್ದೆ-2005ನ್ನು...

ಚಿತ್ರದುರ್ಗ | ಶಾಲಾ ಕಟ್ಟಡದ 3ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಸಾವು

ಚಿತ್ರದುರ್ಗ ತಾಲೂಕಿನ ಭರಮಸಾಗರದ ಡಿವಿಎಸ್ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ...