ಚಿತ್ರದುರ್ಗ | ದಂತ ವೈದ್ಯಕೀಯ ಸ್ನಾತಕೋತ್ತರ ಪದವಿಯಲ್ಲಿ ರಾಜ್ಯಕ್ಕೆ 5ನೇ ರ್‍ಯಾಂಕ್ ಪಡೆದ ಡಾ. ಸಾಧನಾ ಎಸ್. ಎಂ

Date:

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ನಡೆಸಿದ ದಂತ ವೈದ್ಯಕೀಯ ಸ್ನಾತಕೋತ್ತರ (MDS) ಪದವಿ ಪರೀಕ್ಷೆಯಲ್ಲಿ ಚಿತ್ರದುರ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (C.M.C.R.I) ಹಿರಿಯ ನಿವಾಸಿ ವೈದ್ಯೆ ಡಾ. ಸಾಧನಾ ಎಸ್. ಎಂ. ಅವರು ರಾಜ್ಯಕ್ಕೆ 5ನೇ ರ್ಯಾಂಕ್ ಪಡೆಯುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

ನಗರದ ಮೈರಾಡ್ ಸಂಸ್ಥೆಯ ಉದ್ಯೋಗಿ ವೇದಮೂರ್ತಿ ಎಂ.ಎಸ್. ಮತ್ತು ಶ್ರೀಮತಿ ಮಂಗಳಾ ಎಂ. ಅವರ ದ್ವಿತೀಯ ಪುತ್ರಿಯಾದ ಡಾ. ಸಾಧನಾ ಅವರು ಚಿತ್ರದುರ್ಗದ ಪ್ರಸಿದ್ಧ ಎಸ್‌ಜೆಎಂ ದಂತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಎಂಡಿಎಸ್ (MDS) ವ್ಯಾಸಂಗ ಮಾಡಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ದಂತ ವೈದ್ಯಕೀಯ ಕಾಲೇಜಿನಲ್ಲಿ ಬಿಡಿಎಸ್ (BDS) ಪದವಿ ಪೂರೈಸಿದ್ದು, ಅಲ್ಲಿಯೂ ಸಹ ಚಿನ್ನದ ಪದಕ ಪಡೆಯುವ ಮೂಲಕ ಜಿಲ್ಲೆಗೆ ಹೆಮ್ಮೆ ತಂದಿದ್ದರು.

ಈ ಅತ್ಯುತ್ತಮ ಸಾಧನೆ ತೋರಿದ ಡಾ.ಸಾಧನ ಅವರಿಗೆ ಸಿ.ಎಂ.ಸಿ.ಆರ್.ಐ ಸಂಸ್ಥೆಯ ಡೀನ್ ಮತ್ತು ನಿರ್ದೇಶಕ ಡಾ. ಬಿ.ವೈ. ಯುವರಾಜ್, ಅಕಾಡೆಮಿಕ್ ರಿಜಿಸ್ಟ್ರಾರ್ ಡಾ. ಚಂದ್ರಿಕಾ ಎನ್., ಡಾ. ಜಿ.ಎಚ್. ಮೇಘಾ ಸೇರಿದಂತೆ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಾ. ಸಾಧನಾ ಅವರ ಈ ಸಾಧನೆಯು ಸಂಸ್ಥೆಗೆ ಸಂದ ಗೌರವವಾಗಿದೆ ಎಂದು ಅವರು ಶ್ಲಾಘಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಪೊಲೀಸರೊಂದಿಗೆ ಓಟ “ಜಾಗೃತ ರನ್ 2.0” 5 ಕೆ ಮ್ಯಾರಥಾನ್‍ಗೆ ಎಸ್ ಪಿ ರಂಜಿತ್ ಕುಮಾರ್ ಬಂಡಾರು ಚಾಲನೆ

ಯುವಜನತೆಯು ಮಾದಕ ವ್ಯಸನವೆಂಬ ಮಾರಕ ಜಾಲಕ್ಕೆ ಸಿಲುಕದೆ, ಸದೃಢ ಮತ್ತು ಆರೋಗ್ಯವಂತ...

ಚಿತ್ರದುರ್ಗ | 2027 ಕ್ಕೆ ದಾವಣಗೆರೆ-ಚಿತ್ರದುರ್ಗ ನೇರ ರೈಲ್ವೇ ಮಾರ್ಗ ಪೂರ್ಣ : ಕೇಂದ್ರ ಸಚಿವ ವಿ.ಸೋಮಣ್ಣ

ದಾವಣಗೆರೆ-ಚಿತ್ರದುರ್ಗ ನಡುವಿನ ನೇರ ರೈಲ್ವೇ ಮಾರ್ಗ ಕಾಮಗಾರಿ 2027ರ ಜೂನ್ ಅಂತ್ಯಕ್ಕೆ...

RTI ಕಾಯ್ದೆಗೆ ಪಂಚಾಯಿತಿ ಅಧಿಕಾರಿಗಳ ತಿಲಾಂಜಲಿ: ‘ಕಪ್ಪು ಪಟ್ಟಿ’ ನೆಪದಲ್ಲಿ ಮಾಹಿತಿ ನಿರಾಕರಣೆ ಕಾನೂನು ಬಾಹಿರ ನಡೆ?

ಜನಸಾಮಾನ್ಯರಿಗೆ ಪಾರದರ್ಶಕ ಆಡಳಿತ ನೀಡಬೇಕಾದ ಗ್ರಾಮ ಪಂಚಾಯಿತಿಗಳು, ಮಾಹಿತಿ ಹಕ್ಕು ಕಾಯ್ದೆ-2005ನ್ನು...

ಚಿತ್ರದುರ್ಗ | ಶಾಲಾ ಕಟ್ಟಡದ 3ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಸಾವು

ಚಿತ್ರದುರ್ಗ ತಾಲೂಕಿನ ಭರಮಸಾಗರದ ಡಿವಿಎಸ್ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ...