ಚಿತ್ರದುರ್ಗ | ಪರೀಕ್ಷೆಯನ್ನು ಸಂಭ್ರಮದಿಂದ ಎದುರಿಸಿ : ಇಒ ವೈ.ರವಿಕುಮಾರ್

Date:

ಶಾಲಾ ವಾರ್ಷಿಕ ಪರೀಕ್ಷೆಗಳು ವರ್ಷಕ್ಕೊಮ್ಮೆ ಬರುತ್ತವೆ, ಅದೇ ರೀತಿ ಹಬ್ಬಗಳು ಸಹ ವರ್ಷಕ್ಕೊಮ್ಮೆ ಬರುತ್ತವೆ. ಹಬ್ಬವನ್ನು ಹೇಗೆ ಸಂಭ್ರಮದಿಂದ ಆಚರಿಸುತ್ತೇವೆಯೋ, ಹಾಗೆಯೇ ಪರೀಕ್ಷೆಯನ್ನೂ ಸಂಭ್ರಮದಿಂದ ಎದುರಿಸಬೇಕು ಎಂದು ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿಗಳು ಹಾಗೂ ತಾಲ್ಲೂಕು ಬಾಲ ಭವನ ಸಮಿತಿಯ ಅಧ್ಯಕ್ಷ ವೈ.ರವಿಕುಮಾರ್ ತಿಳಿಸಿದರು.

ನಗರದ ಕೆ.ಕೆ. ನ್ಯಾಷನಲ್ ಆಂಗ್ಲ ಮಾಧ್ಯಮಿಕ ಶಾಲೆಯಲ್ಲಿ ಈಚೆಗೆ ರಾಜ್ಯ ಬಾಲ ಭವನ ಸೊಸೈಟಿ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮತ್ತು ತಾಲೂಕು ಬಾಲ ಭವನ ಸಮಿತಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ಮಕ್ಕಳ ಕಲಾ ಪ್ರತಿಭೆ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪರೀಕ್ಷೆಯ ಒತ್ತಡಕ್ಕೆ ಒಳಗಾಗದೆ ಏಕಾಗ್ರತೆಯಿಂದ ಪರೀಕ್ಷೆ ಬರೆಯಬೇಕು. ಮಕ್ಕಳ ಮನಸ್ಸು ಹೂವಿನಂತೆ, ಅದಕ್ಕೆ ಜ್ಞಾನವೆಂಬ ಗೊಬ್ಬರ ಹಾಕಿ ಸಮಾಜದಲ್ಲಿ ಉತ್ತಮ ವಿನಯದೊಂದಿಗೆ ಬೆಳೆಸುವುದು ಪೋಷಕರ ಆದ್ಯ ಕರ್ತವ್ಯ. ಪರೀಕ್ಷೆ ಸಂದರ್ಭದಲ್ಲಿ ಪೋಷಕರು ಮಕ್ಕಳಿಗೆ ಒತ್ತಡ ಹಾಕಬಾರದು ಎಂದು ಕಿವಿಮಾತು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಬಾಲಭವನ ಕಾರ್ಯಕ್ರಮ ಸಂಯೋಜಕ ಡಿ. ಶ್ರೀಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯ ಬಾಲ ಭವನದ ಕಲಾಪ್ರತಿಭೆ ಕಾರ್ಯಕ್ರಮವು ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ನಡೆಯುತ್ತಿದೆ. ರಾಜ್ಯ ಬಾಲ ಸೊಸೈಟಿಯ ಅಧ್ಯಕ್ಷರಾದ ಬಿ.ಆರ್. ನಾಯ್ಡು ಹಾಗೂ ಕಾರ್ಯದರ್ಶಿ ನಿಶ್ಚಲ್ ಅವರ ಮಾರ್ಗದರ್ಶನದಂತೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆಕಾಶ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ಎಚ್.ವಿಜಯಕುಮಾರ್ ಅವರ ನಿರ್ದೇಶನದ ಮೇರೆಗೆ ಜಿಲ್ಲೆಯಾದ್ಯಂತ ಮಕ್ಕಳಿಗೆ ಈ ಕಾರ್ಯಕ್ರಮ ಆಯೋಜಿಸಿ ಬಹುಮಾನ ನೀಡಲಾಗುತ್ತಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಮಹೇಶ್ವರಪ್ಪ ಮಾತನಾಡಿ, ಮಕ್ಕಳಿಗೆ ಬಾಲ ಭವನದ ಚಟುವಟಿಕೆಗಳು ಬಹಳ ಅವಶ್ಯಕ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಪ್ರಮಾಣ ಪತ್ರ ಹಾಗೂ ಪೆನ್ನುಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಹಿರಿಯ ಶಿಕ್ಷಕಿಯರಾದ ವಿಜಯಲಕ್ಷ್ಮಿ, ಅಮೋಘ, ವೀಣಾ, ತಮಸುಮ್, ರೂಪಿಣಿ, ರೂಪಾ, ತೌಷಿತ ಹಾಗೂ ದೈಹಿಕ ಶಿಕ್ಷಕರಾದ ಡಿ.ಅಣ್ಣೇಶ್, ನಾಗಾರ್ಜುನ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಪೊಲೀಸರೊಂದಿಗೆ ಓಟ “ಜಾಗೃತ ರನ್ 2.0” 5 ಕೆ ಮ್ಯಾರಥಾನ್‍ಗೆ ಎಸ್ ಪಿ ರಂಜಿತ್ ಕುಮಾರ್ ಬಂಡಾರು ಚಾಲನೆ

ಯುವಜನತೆಯು ಮಾದಕ ವ್ಯಸನವೆಂಬ ಮಾರಕ ಜಾಲಕ್ಕೆ ಸಿಲುಕದೆ, ಸದೃಢ ಮತ್ತು ಆರೋಗ್ಯವಂತ...

ಚಿತ್ರದುರ್ಗ | 2027 ಕ್ಕೆ ದಾವಣಗೆರೆ-ಚಿತ್ರದುರ್ಗ ನೇರ ರೈಲ್ವೇ ಮಾರ್ಗ ಪೂರ್ಣ : ಕೇಂದ್ರ ಸಚಿವ ವಿ.ಸೋಮಣ್ಣ

ದಾವಣಗೆರೆ-ಚಿತ್ರದುರ್ಗ ನಡುವಿನ ನೇರ ರೈಲ್ವೇ ಮಾರ್ಗ ಕಾಮಗಾರಿ 2027ರ ಜೂನ್ ಅಂತ್ಯಕ್ಕೆ...

RTI ಕಾಯ್ದೆಗೆ ಪಂಚಾಯಿತಿ ಅಧಿಕಾರಿಗಳ ತಿಲಾಂಜಲಿ: ‘ಕಪ್ಪು ಪಟ್ಟಿ’ ನೆಪದಲ್ಲಿ ಮಾಹಿತಿ ನಿರಾಕರಣೆ ಕಾನೂನು ಬಾಹಿರ ನಡೆ?

ಜನಸಾಮಾನ್ಯರಿಗೆ ಪಾರದರ್ಶಕ ಆಡಳಿತ ನೀಡಬೇಕಾದ ಗ್ರಾಮ ಪಂಚಾಯಿತಿಗಳು, ಮಾಹಿತಿ ಹಕ್ಕು ಕಾಯ್ದೆ-2005ನ್ನು...

ಚಿತ್ರದುರ್ಗ | ಶಾಲಾ ಕಟ್ಟಡದ 3ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಸಾವು

ಚಿತ್ರದುರ್ಗ ತಾಲೂಕಿನ ಭರಮಸಾಗರದ ಡಿವಿಎಸ್ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ...