RTI ಕಾಯ್ದೆಗೆ ಪಂಚಾಯಿತಿ ಅಧಿಕಾರಿಗಳ ತಿಲಾಂಜಲಿ: ‘ಕಪ್ಪು ಪಟ್ಟಿ’ ನೆಪದಲ್ಲಿ ಮಾಹಿತಿ ನಿರಾಕರಣೆ ಕಾನೂನು ಬಾಹಿರ ನಡೆ?

Date:

ಜನಸಾಮಾನ್ಯರಿಗೆ ಪಾರದರ್ಶಕ ಆಡಳಿತ ನೀಡಬೇಕಾದ ಗ್ರಾಮ ಪಂಚಾಯಿತಿಗಳು, ಮಾಹಿತಿ ಹಕ್ಕು ಕಾಯ್ದೆ-2005ನ್ನು ಗಾಳಿಗೆ ತೂರುತ್ತಿವೆಯೇ? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಚಿತ್ರದುರ್ಗ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳು ಅರ್ಜಿದಾರರನ್ನು ‘ಕಪ್ಪು ಪಟ್ಟಿಗೆ’ (Blacklist) ಸೇರಿಸಲಾಗಿದೆ ಎಂಬ ವಿಚಿತ್ರ ಕಾರಣ ನೀಡಿ ಮಾಹಿತಿ ನಿರಾಕರಿಸುತ್ತಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.

​ಅರ್ಜಿದಾರರಾದ ಸಿ.ಪಿ. ತಿಪ್ಪೇಸ್ವಾಮಿ ದೊಡ್ಡಸಿದ್ದವ್ವನಹಳ್ಳಿ, ಆಲಗಟ್ಟ ಮತ್ತು ಗೋನೂರು ಗ್ರಾಮ ಪಂಚಾಯಿತಿಗಳಲ್ಲಿ ವಿಕಲಚೇತನರ ಕಲ್ಯಾಣಕ್ಕಾಗಿ ಮೀಸಲಿಟ್ಟ ಶೇ. 5ರಷ್ಟು ಅನುದಾನದ ಬಳಕೆ ಮತ್ತು ಸೌಲಭ್ಯ ಪಡೆದವರ ಪಟ್ಟಿಯನ್ನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಈ ಮೂರೂ ಪಂಚಾಯಿತಿಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಕರ್ನಾಟಕ ಮಾಹಿತಿ ಆಯೋಗವು ಅರ್ಜಿದಾರರನ್ನು ಕಪ್ಪು ಪಟ್ಟಿಗೆ ಸೇರಿಸಿದೆ ಎಂದು ಹೇಳಿ ಮಾಹಿತಿಯನ್ನು ನೀಡಲು ನಿರಾಕರಿಸಿದ್ದಾರೆ.

​ಗಮನಾರ್ಹ ಸಂಗತಿಯೆಂದರೆ, ಸ್ವತಃ ಕರ್ನಾಟಕ ಮಾಹಿತಿ ಆಯೋಗವು ಬೇರೊಂದು ಸ್ಪಷ್ಟೀಕರಣದಲ್ಲಿ (ಸಂಖ್ಯೆ: ಕಮಾಆ/605/2025), “ಮಾಹಿತಿ ಹಕ್ಕು ಕಾಯ್ದೆ 2005ರ ಯಾವುದೇ ಕಲಂ ಅಥವಾ ಸೆಕ್ಷನ್‌ನಲ್ಲಿ ಅರ್ಜಿದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಅಥವಾ ದಂಡ ವಿಧಿಸಲು ಮುಖ್ಯ ಮಾಹಿತಿ ಆಯುಕ್ತರಿಗೆ ಅವಕಾಶವಿರುವುದಿಲ್ಲ” ಎಂದು ಸ್ಪಷ್ಟಪಡಿಸಿದೆ. ​ಹೀಗಿದ್ದರೂ, ಪಂಚಾಯಿತಿ ಅಧಿಕಾರಿಗಳು ಹಳೆಯ ಅಥವಾ ಅನ್ವಯವಾಗದ ಆದೇಶಗಳನ್ನು ಮುಂದಿಟ್ಟುಕೊಂಡು ಮಾಹಿತಿ ನೀಡದೆ ನುಣುಚಿಕೊಳ್ಳುತ್ತಿರುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ.

RtI ಕಾಯ್ದೆಯಲ್ಲಿ ‘ಕಪ್ಪು ಪಟ್ಟಿ’ ಎಂಬ ಪದವೇ ಇಲ್ಲದಿದ್ದರೂ ಅಧಿಕಾರಿಗಳು ಅದನ್ನು ಬಳಸುತ್ತಿದ್ದಾರೆ. ಇದರಿಂದಾಗಿ ​ಅನುದಾನದಲ್ಲಿ ಗೋಲ್ಮಾಲ್ ಶಂಕೆ ವ್ಯಕ್ತವಾಗುತ್ತಿದೆ. ವಿಕಲಚೇತನರ ನಿಧಿಯ ಬಳಕೆಯ ಬಗ್ಗೆ ಮಾಹಿತಿ ಕೇಳಿದಾಗ ಮಾತ್ರ ಇಂತಹ ಉತ್ತರಗಳು ಬರುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮಾಹಿತಿ ನೀಡದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಬದಲು, ಅರ್ಜಿದಾರರನ್ನೇ ತಪ್ಪಿತಸ್ಥರನ್ನಾಗಿ ಬಿಂಬಿಸುವ ಪ್ರಯತ್ನ ನಡೆಯುತ್ತಿದೆ.

ಇದನ್ನೂ ಓದಿ: ಚಿತ್ರದುರ್ಗ | ಚುನಾವಣೆ ನಡೆಸದೆ ಆಡಳಿತಾಧಿಕಾರಿ ನೇಮಕ: ಪರಿಶಿಷ್ಟ ಹಿಂದುಳಿದವರಿಗೆ ಅಧಿಕಾರ ನಿರಾಕರಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

​”ಮಾಹಿತಿ ನಿರಾಕರಿಸುವ ಅಧಿಕಾರ ಇವರಿಗೆ ಕೊಟ್ಟವರು ಯಾರು? ವಿಕಲಚೇತನರ ಹಣ ಎಲ್ಲಿ ಹೋಯಿತು ಎಂದು ಕೇಳುವುದು ತಪ್ಪೇ?” ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಮೇಲಧಿಕಾರಿಗಳು ಈ ಕೂಡಲೇ ಮಧ್ಯಪ್ರವೇಶಿಸಿ, ಮಾಹಿತಿ ಹಕ್ಕು ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೆ ತರಬೇಕು ಮತ್ತು ಸುಳ್ಳು ಕಾರಣ ನೀಡಿ ಅರ್ಜಿ ವಿಲೇವಾರಿ ಮಾಡುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿಜೃಂಭಣೆಯ ನಾಯಕನಹಟ್ಟಿ ದೊಡ್ಡರಥೋತ್ಸವ

ಮಧ್ಯ ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ನಾಯಕನಹಟ್ಟಿಯಲ್ಲಿ ಶುಕ್ರವಾರ ದೊಡ್ಡರಥೋತ್ಸವ ಜರುಗಿತು. ಮಧ್ಯಾಹ್ನ...

ಚಿತ್ರದುರ್ಗ | ಪೊಲೀಸರೊಂದಿಗೆ ಓಟ “ಜಾಗೃತ ರನ್ 2.0” 5 ಕೆ ಮ್ಯಾರಥಾನ್‍ಗೆ ಎಸ್ ಪಿ ರಂಜಿತ್ ಕುಮಾರ್ ಬಂಡಾರು ಚಾಲನೆ

ಯುವಜನತೆಯು ಮಾದಕ ವ್ಯಸನವೆಂಬ ಮಾರಕ ಜಾಲಕ್ಕೆ ಸಿಲುಕದೆ, ಸದೃಢ ಮತ್ತು ಆರೋಗ್ಯವಂತ...

ಚಿತ್ರದುರ್ಗ | 2027 ಕ್ಕೆ ದಾವಣಗೆರೆ-ಚಿತ್ರದುರ್ಗ ನೇರ ರೈಲ್ವೇ ಮಾರ್ಗ ಪೂರ್ಣ : ಕೇಂದ್ರ ಸಚಿವ ವಿ.ಸೋಮಣ್ಣ

ದಾವಣಗೆರೆ-ಚಿತ್ರದುರ್ಗ ನಡುವಿನ ನೇರ ರೈಲ್ವೇ ಮಾರ್ಗ ಕಾಮಗಾರಿ 2027ರ ಜೂನ್ ಅಂತ್ಯಕ್ಕೆ...

ಚಿತ್ರದುರ್ಗ | ಶಾಲಾ ಕಟ್ಟಡದ 3ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಸಾವು

ಚಿತ್ರದುರ್ಗ ತಾಲೂಕಿನ ಭರಮಸಾಗರದ ಡಿವಿಎಸ್ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ...