ಚಿತ್ರದುರ್ಗದ ಮೂವರು ಯೋಗ ಶಿಕ್ಷಕರಿಗೆ ಬೆಂಗಳೂರಿನ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ( ಟೌನ್ ಹಾಲ್) ಶಿಕ್ಷಕರ ದಿನಾಚರಣೆ ಪ್ರಯುಕ್ತ ರಾಜ್ಯಮಟ್ಟದ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಚಿತ್ರದುರ್ಗ ಜಿಲ್ಲಾ ಯೋಗಾಸನ ಕ್ರೀಡಾ ಸಾಂಸ್ಕೃತಿಕ ಸಂಸ್ಥೆಯ ಯೋಗಾಚಾರ್ಯ ಎಲ್.ಎಸ್.ಚಿನ್ಮಯಾನಂದ ಇವರಿಗೆ ಯೋಗ ಸಾಧನೆಗಾಗಿ ಜೀವಮಾನ ಶ್ರೇಷ್ಠ ಪ್ರಶಸ್ತಿ,
ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿಯ ಯೋಗ ತರಬೇತುದಾರ ಸಂತೋಷ್ ಕುಮಾರ್ ಇವರಿಗೆ ಯೋಗ ರತ್ನ ಪ್ರಶಸ್ತಿ, ಚಿನ್ಮಯ ಮಯೂರ ಯೋಗ ಕ್ರೀಡಾ ಸಾಂಸ್ಕೃತಿಕ ಸಂಸ್ಥೆಯ ಯೋಗ ಚಿಕಿತ್ಸಕ ಎಂ.ಬಿ ಮುರುಳಿ ಇವರಿಗೆ ಯೋಗ ಜ್ಯೋತಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಬೆಂಗಳೂರು ನಗರದ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ (ಟೌನ್ ಹಾಲ್) ರೋಟರಿ ಬೆಂಗಳೂರು ಗ್ಲೋಬಲ್ ಯೋಗ, ಬೆಂಗಳೂರು ಕಲ್ಯಾಣ್ಹಾ ಗೂ ಯೋಗ ಯುನಿವರ್ಸಿಟಿ ಆಫ್ ದಿ ಅಮೆರಿಕಾಸ್ ಇವರ ಸಹಯೋಗದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಯೋಗ ಶಿಕ್ಷಕರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ವೇಳೆ ಯೋಗ ಸೇರಿದಂತೆ ಹಲವು ವಿಭಾಗಗಳ ಶಿಕ್ಷಕರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಬಯಲುಸೀಮೆ ನೀರಿನ ಭದ್ರಾ ಮೇಲ್ದಂಡೆ
ಯೋಜನೆಗೆ ಎಸ್ಸಿಪಿ, ಟಿಎಸ್ಪಿ ಹಣ ಬಳಕೆಗೆ ಒತ್ತಾಯ
ಗೌರಿಗದ್ದೆ ಅವಧೂತ ವಿನಯ್ ಕುಮಾರ್ ಗುರೂಜಿ, ವಿದ್ಯಾ ವಾಚಸ್ಪತಿ ಅರಳು ಮಲ್ಲಿಗೆ ಪಾರ್ಥ ಸಾರಥಿ, ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರ ಸಚಿವ ಹೆಚ್.ಎಂ. ರೇವಣ್ಣ, ರೋಟರಿ ಬೆಂಗಳೂರು ಗ್ಲೋಬಲ್ ಯೋಗ ಅಧ್ಯಕ್ಷ ಯೋಗಿ ದೇವರಾಜ್ ಮುಂತಾದ ಗಣ್ಯರು ಉಪಸ್ಥಿತರಿದ್ದರು





