ಚಿತ್ರದುರ್ಗ | ಹಸಿದವರು ಕಾಂತರಾಜ್ ವರದಿ ಜಾರಿಗಾಗಿ ಕಾಯುತ್ತಿದ್ದಾರೆ, ಹೊಟ್ಟೆ ತುಂಬಿದವರು ವಿರೋಧಿಸುತ್ತಾರೆ ; ಈಶ್ವರಾನಂದಪುರಿ ಶ್ರೀ

Date:

“ಕಾಂತರಾಜ್ ವರದಿಯನ್ನು ಸಚಿವ ಸಂಪುಟದಲ್ಲಿ ತರಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಈ ನಿರ್ಧಾರವನ್ನು ನಾನು ವೈಯಕ್ತಿಕವಾಗಿ ಸ್ವಾಗತಿಸುತ್ತೇನೆ. ಕಾಂತರಾಜ್ ಆಯೋಗದ ವರದಿಯನ್ನು ಹೊಟ್ಟೆ ತುಂಬಿದವರು ವಿರೋಧಿಸುತ್ತಾರೆ.
ಹಸಿದವರು ವರದಿ ಜಾರಿಗಾಗಿ ಕಾಯುತ್ತಿರುತ್ತಾರೆ. ಕಾಂತರಾಜ್ ವರದಿ ಬಿಡುಗಡೆಯಾಗಿ ಈ ಸಮುದಾಯಗಳಿಗೆ ಬೆಳಕಾಗಲಿ ಎಂದು ಆಶಿಸುತ್ತೇನೆ” ಎಂದು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಕನಕ ಪೀಠದ ಶಾಖಾಮಠದ ಈಶ್ವರಾನಂದಪುರಿ ಶ್ರೀಗಳು ವರದಿಯನ್ನು ಸ್ವಾಗತಿಸಿದರು.

1001841273
ಕನಕಪೀಠ ಹೊಸದುರ್ಗ ಶಾಖಾಮಠದ ಈಶ್ವರಾನಂದಪುರಿ ಶ್ರೀ ಗಳು

ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು “ವಿರೋಧ ಪಕ್ಷದವರು ರಾಜಕೀಯ ಕಾರಣಕ್ಕಾಗಿ ವಿರೋಧಿಸುತ್ತಿದ್ದಾರೆ. ಆದರೆ
ಲಿಂಗಾಯತ ಸಮುದಾಯ ಮತ್ತು ಒಕ್ಕಲಿಗ ಸಮುದಾಯ ಈ ವರದಿಯನ್ನು ವಿರೋಧಿಸುತ್ತಿವೆ ಎಂದು ಹೇಳಲಾಗುತ್ತಿದೆ. ವರದಿ ಬಂದ ಮೇಲೆ ತಮ್ಮ ಆಕ್ಷೇಪಗಳನ್ನು ಮತ್ತು ಅದರಲ್ಲಿನ ಲೋಪದೋಷಗಳನ್ನು ಸರ್ಕಾರದ ಗಮನಕ್ಕೆ ತರಲು ಅವಕಾಶ ಇದೆ” ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸಂಭ್ರಮದ ಅಂಬೇಡ್ಕರ್ ಜಯಂತಿ ಆಚರಣೆ ಮತ್ತು ‘ಅರಿವೇ ಅಂಬೇಡ್ಕರ’ ವಿಶೇಷ ಸಂಚಿಕೆ ಬಿಡುಗಡೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದ ಅನೇಕ ಹಿಂದುಳಿದ ಸಮುದಾಯಗಳ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿಗಳು ಸ್ವಾತಂತ್ರ್ಯ ಬಂದು ಇಂದಿನವರೆಗೂ ಗೊತ್ತಿಲ್ಲ. ಕಾಂತರಾಜ್ ವರದಿಯ ಮೂಲಕ ಕುರುಬ, ಈಡಿಗ, ಗೊಲ್ಲ, ಮಡಿವಾಳ, ಬೆಸ್ತ, ಉಪ್ಪಾರ, ವಿಶ್ವಕರ್ಮ, ಸವಿತಾ, ತಿಗಳ, ದೇವಾಂಗ, ಲಮಾಣಿ, ಭೋವಿ, ಕುಂಚಿಟಿಗ, ಮಾದಾರ, ಛಲವಾದಿ, ಹಡಪದ, ಗಾಣಿಗ, ಕುಂಬಾರ, ಹೆಳವ, ಕೊರಮ, ಕೊರಚ ಸೇರಿದಂತೆ ಇನ್ನೂ ಅಲಕ್ಷಿತ ಸಮುದಾಯಗಳು ಜಾತಕ ಪಕ್ಷಿಯಂತೆ ವರದಿ, ಸೌಲಭ್ಯಕ್ಕೆ ಕಾಯುತ್ತಿವೆ” ಎಂದರು.‌

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವ ಡಿ.ಸುಧಾಕರ್

ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ...

ಚಿತ್ರದುರ್ಗ | ಭಾರತೀಯ ವಾಸ್ತುಶಿಲ್ಪ ಜ್ಞಾನ ವಿದ್ಯಾರ್ಥಿಗಳಿಗೆ ಅಗತ್ಯ : ಡಾ.ಹೊನ್ನೂರ ಸ್ವಾಮಿ

ಭಾರತೀಯ ದೇವಾಲಯಗಳ ಪರಂಪರೆಗೆ ಸುದೀರ್ಘ ಹಾಗೂ ಪ್ರಾಚೀನ ಇತಿಹಾಸವಿದೆ. ಮುಂದಿನ ದಿನಗಳಲ್ಲಿ...

ಚಿತ್ರದುರ್ಗ | ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ (ಎಸ್‍ಐಆರ್)-2026ರ ಸಂಬಂಧ ಬಾಕಿ ಇರುವ ಮತದಾರರ...

ಚಿತ್ರದುರ್ಗ | ವಿಜೃಂಭಣೆಯ ನಾಯಕನಹಟ್ಟಿ ದೊಡ್ಡರಥೋತ್ಸವ

ಮಧ್ಯ ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ನಾಯಕನಹಟ್ಟಿಯಲ್ಲಿ ಶುಕ್ರವಾರ ದೊಡ್ಡರಥೋತ್ಸವ ಜರುಗಿತು. ಮಧ್ಯಾಹ್ನ...