ಚಿತ್ರದುರ್ಗ | ಅಡುಗೆ ಅನಿಲ ಕೊರತೆಯಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

Date:

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ದೇಶದಲ್ಲಿ ಗ್ಯಾಸ್ ಸರಬರಾಜು ವ್ಯತ್ಯಯ ಉಂಟಾಗಬಹುದು ಎಂಬ ಭೀತಿ ಸಾರ್ವಜನಿಕರಲ್ಲಿ ಮನೆ ಮಾಡಿದೆ. ಆದರೆ, ಚಿತ್ರದುರ್ಗ ಜಿಲ್ಲೆಯಲ್ಲಿ ಅಡುಗೆ ಅನಿಲದ ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿದ್ದು, ಗ್ರಾಹಕರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.


ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಏರ್ಪಡಿಸಿದ್ದ ಅಡುಗೆ ಅನಿಲ ಸರಬರಾಜುದಾರ ಕಂಪನಿಗಳಾದ ಐಒಸಿಎಲ್ ಮತ್ತು ಬಿಪಿಸಿಎಲ್ ಸೇಲ್ಸ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿನ ಅಡುಗೆ ಅನಿಲ ಸಿಲಿಂಡರ್ ಪೂರೈಕೆ ಕುರಿತಂತೆ ಸೇಲ್ಸ್ ಅಧಿಕಾರಿಗಳಿಂದ ಸ್ಥಿತಿಗತಿ ಕುರಿತು ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಗೃಹ ಬಳಕೆಯ ಅಡುಗೆ ಅನಿಲದ ದಾಸ್ತಾನು ಸಮರ್ಪಕವಾಗಿದ್ದು, ಸರಬರಾಜು ಸಹಜ ಸ್ಥಿತಿಯಲ್ಲೇ ಮುಂದುವರಿಯಲಿದೆ. ಅಡುಗೆ ಅನಿಲ ಸಿಲಿಂಡರ್ ಸಿಗುವುದಿಲ್ಲ ಎಂಬ ತಪ್ಪು ಕಲ್ಪನೆ ಮತ್ತು ಭಯದಿಂದಾಗಿ, ಗ್ರಾಹಕರು ಗ್ಯಾಸ್ ಏಜೆನ್ಸಿಗಳ ಮುಂದೆ ಸಾಲುಗಟ್ಟಿ ನಿಲ್ಲುವ, ಮುಗಿಬೀಳುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.

ಗೃಹ ಬಳಕೆಯ ಅಡುಗೆ ಅನಿಲದ ಸಿಲಿಂಡರ್‍ಗಳನ್ನು ವಾಣಿಜ್ಯ ಬಳಕೆಗೆ ಯಾವುದೇ ಗ್ರಾಹಕರು ನೀಡಿದ್ದು, ಕಂಡು ಬಂದರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಸಿದ್ದಾರೆ.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಶಿದ್ರಾಮ ಮಾರಿಹಾಳ, ಐಒಸಿಎಲ್ ಸೇಲ್ಸ್ ಅಧಿಕಾರಿ ಭರತ್ ಚಂದ್ರ ಮತ್ತು ಬಿಪಿಸಿಎಲ್ ಸೇಲ್ಸ್ ಅಧಿಕಾರಿ ಸುಶ್ರಿಮ ಬೆಹ್ರ ಇದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಭಾರತೀಯ ವಾಸ್ತುಶಿಲ್ಪ ಜ್ಞಾನ ವಿದ್ಯಾರ್ಥಿಗಳಿಗೆ ಅಗತ್ಯ : ಡಾ.ಹೊನ್ನೂರ ಸ್ವಾಮಿ

ಭಾರತೀಯ ದೇವಾಲಯಗಳ ಪರಂಪರೆಗೆ ಸುದೀರ್ಘ ಹಾಗೂ ಪ್ರಾಚೀನ ಇತಿಹಾಸವಿದೆ. ಮುಂದಿನ ದಿನಗಳಲ್ಲಿ...

ಚಿತ್ರದುರ್ಗ | ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ (ಎಸ್‍ಐಆರ್)-2026ರ ಸಂಬಂಧ ಬಾಕಿ ಇರುವ ಮತದಾರರ...

ಚಿತ್ರದುರ್ಗ | ವಿಜೃಂಭಣೆಯ ನಾಯಕನಹಟ್ಟಿ ದೊಡ್ಡರಥೋತ್ಸವ

ಮಧ್ಯ ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ನಾಯಕನಹಟ್ಟಿಯಲ್ಲಿ ಶುಕ್ರವಾರ ದೊಡ್ಡರಥೋತ್ಸವ ಜರುಗಿತು. ಮಧ್ಯಾಹ್ನ...

ಚಿತ್ರದುರ್ಗ | ಭದ್ರಾ ಹೋರಾಟಕ್ಕೆ ಸಂಘಟನೆಗಳ ಶಕ್ತಿ

 ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡುವಂತೆ ಆಗ್ರಹಿಸಿ ಒನಕೆ ಓಬವ್ವ ವೃತ್ತದಲ್ಲಿ...