ತಾಯಿ ಮತ್ತು ಮಕ್ಕಳ ಆರೋಗ್ಯದ ಕುರಿತು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಒಂದು ದಿನದ ಚಿತ್ರದುರ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಐಸಿಎಂಆರ್ ಮತ್ತು ಕೆಎಚ್‍ಪಿಟಿ, ಸೆಂಟ್ ಜಾನ್ ಆಸ್ಪತ್ರೆ ಸಹಯೋಗದಲ್ಲಿ ತರಬೇತಿ ಕಾರ್ಯಕ್ರಮ ನಡೆಯಿತು.
ಜವನಗೊಂಡನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ರಂಗಸ್ವಾಮಿ ನಾಯ್ಕ್ ಕಾರ್ಯಕ್ರಮಕ್ಕೆ ತರಬೇತಿಗೆ ಚಾಲನೆ ನೀಡಿ ಮಾತನಾಡಿ “ತಾಯಿ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಹಾಗೂ ತೊಡಕಿನ ಗರ್ಭಿಣಿಯ ಪತ್ತೆ ಹಚ್ಚುವಿಕೆ ಮುಖ್ಯ. ಗರ್ಭಿಣಿಯರ ನೋಂದಣಿ, ತಾಯಿ ಮತ್ತು ಶಿಶು ಮರಣದ ಪ್ರಮಾಣ ಕಡಿಮೆ ಮಾಡುವ ಬಗ್ಗೆ ಹಾಗೂ ಪೌಷ್ಟಿಕ ಆಹಾರ ಸೇವನೆಯಿಂದ ತಾಯಿ ಮತ್ತು ಮಗುವಿನ ಆರೋಗ್ಯವನ್ನ ಕಾಪಾಡಬಹುದು” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಂತರ್ಜಾತಿ ವಿವಾಹ ಅಂದು ಕಲ್ಯಾಣ ಕ್ರಾಂತಿಗೆ ಇಂದು ಮರ್ಯಾದಾ ಹತ್ಯೆಗೆ ದಾರಿ: ಎಚ್ಎಲ್ ಪುಷ್ಪ
ತರಬೇತಿಯಲ್ಲಿ ಐಸಿಎಂಆರ್ ತಂಡದ ಸಮುದಾಯದ ಸಂಯೋಜಕ ಎನ್ ಉಮೇಶ್, ತಂಡದ ಶ್ರುತಿ, ಅಬ್ಬಾಸ್, ವೆಂಕಪ್ಪ, ಆರೋಗ್ಯ ನಿರೀಕ್ಷಣಾಧಿಕಾರಿ ಮಂಜುನಾಥ್, ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿಗಳು, ಫಾರ್ಮಸಿ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಸಮುದಾಯ ಆರೋಗ್ಯಾಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಿಬ್ಬಂದಿಗಳು, ಭಾಗವಹಿಸಿದ್ದರು.





