ಚಿತ್ರದುರ್ಗ | ಗಂಡು ಮಗುವಿಗೆ ಜನ್ಮ ನೀಡದಕ್ಕೆ ಪತ್ನಿ ಮೇಲೆ ಗಂಭೀರ ಹಲ್ಲೆ.

Date:

ಗಂಡು ಮಗುವಿಗೆ ಜನ್ಮ ನೀಡಲಿಲ್ಲ ಎನ್ನುವ ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಬ್ಬ ಹೆಂಡತಿಯ ಮೇಲೆ ಗಂಭೀರವಾಗಿ ಹಲ್ಲೆ ನೆಲೆಸಿರುವ ಘಟನೆ ನಡೆದಿದೆ. ಅಲ್ಲದೇ ಪತಿ ಎರಡನೇ ವಿವಾಹವಾಗಿದ್ದಾನೆ ಎನ್ನುವ ಆರೋಪ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಂದಲಹಟ್ಟಿ ಗ್ರಾಮದಲ್ಲಿ ಕೇಳಿಬಂದಿದೆ.

ಗಂಡು ಮಗುವಿನ ವ್ಯಾಮೋಹಕ್ಕೆ ಬಿದ್ದ ಪತಿಯೊಬ್ಬ ಹೆಂಡತಿಯ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದ್ದಲ್ಲದೇ, ಮೂರು ಬಾರಿ ಲಿಂಗ ಪತ್ತೆ ಪರೀಕ್ಷೆ ನಡೆಸಿ ಗರ್ಭಪಾತ ಮಾಡಿಸಿರುವ ಅಮಾನವೀಯ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನೆಡೆದಿದ್ದು, ಗಂಭೀರವಾಗಿ ಗಾಯಗೊಂಡ ಮಹಿಳೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

1001922877

ಚಳ್ಳಕೆರೆ ತಾಲೂಕಿನ ಮಂದಲಹಟ್ಟಿ ಗ್ರಾಮದ ಕಾಟಮಲಿಂಗಯ್ಯ ಎನ್ನುವ ವ್ಯಕ್ತಿಯೇ ಆರೋಪಿಯಾಗಿದ್ದು, ಈತನ ವಿರುದ್ಧ ನಾಯಕನಹಟ್ಟಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪತ್ನಿ ಶಾಂತಮ್ಮ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಟಮಲಿಂಗಯ್ಯ ಹಂಪಿ ಕನ್ನಡ ವಿವಿಯ ಪಿಎಚ್‌ಡಿ ಪದವಿ ಪಡೆದಿರುವ ಪದವೀಧರನಾಗಿದ್ದು, ದೇವರಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯನಾಗಿದ್ದಾನೆ ಎಂದು ಮಾಹಿತಿ ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪಾಕಿಸ್ತಾನಿ ಮಹಿಳೆಯ ಅಧ್ಯಯನ ವೀಸಾ, ಭಾರತ ಬಿಡುವ ಅಗತ್ಯವಿಲ್ಲ; ಎಸ್ಸಿ ಉಮಾ ಪ್ರಶಾಂತ್.‌

ಎಂಟು ವರ್ಷದ ಹಿಂದೆ ಮದುವೆಯಾಗಿದ್ದ ಕಾಟಮಲಿಂಗಯ್ಯ ಹಾಗೂ ಶಾಂತಮ್ಮ ದಂಪತಿಗಳಿಗೆ ಎರಡು ಹೆಣ್ಣುಮಕ್ಕಳಿವೆ.‌ ಗಂಡು ಮಗು ಹುಟ್ಟಲಿಲ್ಲ ಎಂದು ಆಗಾಗ್ಗೆ ಇದೇ ವಿಷಯಕ್ಕೆ ಪೀಡಿಸುತ್ತಿದ್ದು, ಹೆಂಡತಿಯ ಮೇಲೆ ಹಲ್ಲೆಯನ್ನೂ ನಡೆಸುತ್ತಿದ್ದ.
ವಿದ್ಯಾವಂತನಾಗಿದ್ದು, ಪದವೀಧರನಾದರೂ ಹೆಂಡತಿಗೆ ಗಂಡು ಮಗು ಬೇಕೆಂದು ಸತತ ಹಲ್ಲೆ ನಡೆಸಿದ್ದಲ್ಲದೇ, ಗೌರಮ್ಮ ಎಂಬ ಯುವತಿಯನ್ನು ಎರಡನೇ ವಿವಾಹವಾಗಿದ್ದಾನೆಂದು ಆರೋಪಿಸಲಾಗಿದೆ.

ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ದೂರು ದಾಖಲಿಸಿಕೊಂಡಿರುವ ಪೊಲೀಸರು ಕಾಟಮಲಿಂಗಯ್ಯನ ವಿಚಾರಣೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಕೌಟುಂಬಿಕ ಕಲಹ: ಪತ್ನಿ, ಮಗಳು ಸೇರಿ ಐವರ ಮೇಲೆ ಆಸಿಡ್‌ ದಾಳಿ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ವ್ಯಕ್ತಿಯೊಬ್ಬ ತನ್ನನ್ನು ಬಿಟ್ಟು ಹೋಗಿದ್ದ ಪತ್ನಿ,...

ಕಥುವಾ ಪ್ರಕರಣ | ಭದ್ರತೆ ಕಡಿತ; ‘ಮಗಳು ಶಾಲೆಗೂ ಹೋಗುತ್ತಿಲ್ಲ’ ಎಂದ ವಕೀಲೆ ದೀಪಿಕಾ

2018ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಉದ್ದಿಮೆ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಚಿತ್ರದುರ್ಗ | ಹಾಯ್ಕಲ್ ಗ್ರಾಮದಲ್ಲಿ ಚರಂಡಿ ಅವ್ಯವಸ್ಥೆ; ಅನುದಾನವಿಲ್ಲ ಎಂದ ಪಂಚಾಯಿತಿ, ಶಾಸಕರಿಗೆ ದೂರು

​ಚಿತ್ರದುರ್ಗ ತಾಲೂಕಿನ ತುರುವನೂರು ಹೋಬಳಿ ಬೆಳಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಯ್ಕಲ್...