ಚಿತ್ರದುರ್ಗ | ಉದ್ಯೋಗಾಕಾಂಕ್ಷಿಗಳ ಯುವಜನರ ಹೋರಾಟದ ನಾಯಕರ ಬಂಧನ: ಎಐಡಿಎಸ್ಓ ಖಂಡನೆ

Date:

ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಅನುಮತಿ ನಿರಾಕರಿಸಿದ ಹಾಗೂ ಧಾರವಾಡದಲ್ಲಿ ನಡೆಯುತ್ತಿರುವ ಉದ್ಯೋಗಾಕಾಂಕ್ಷಿಗಳ ಯುವಜನರ ಹೋರಾಟದಲ್ಲಿದ್ದ ನಾಯಕರನ್ನು ಬಂಧಿಸಿರುವ ಸರ್ಕಾರದ, ಪೊಲೀಸರ ಕ್ರಮವನ್ನು ಚಿತ್ರದುರ್ಗ ಎಐಡಿಎಸ್ಓ ಘಟಕ ಖಂಡಿಸಿದೆ.

ಧಾರವಾಡ | ಉದ್ಯೋಗಾಕಾಂಕ್ಷಿಗಳ ಪ್ರತಿಭಟನಾ ಧರಣಿ; ಹಲವು ನಾಯಕರ ಬಂಧನ

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಜಿಲ್ಲಾ ಸಂಚಾಲಕ ಈರಣ್ಣ “ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳಲ್ಲಿ ಲಕ್ಷಾಂತರ ಹುದ್ದೆಗಳು ಖಾಲಿ ಇವೆ. ಖಾಲಿ ಬಿದ್ದಿರುವ ಹುದ್ದೆಗಳ ಭರ್ತಿ ಮಾಡುವಂತೆ ಆಗ್ರಹಿಸಿ ಇಂದು ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ಯುವಜನರ ಪ್ರತಿಭಟನಾ ಧರಣಿ ನಡೆಯುತ್ತಿದೆ. ಯುವಜನರ ನ್ಯಾಯಯುತ ಹೋರಾಟ ಹಾಗೂ ಪ್ರಜಾತಾಂತ್ರಿಕ ಹಕ್ಕಿನ ಮೇಲೆ ದಾಳಿ ಮಾಡಿರುವ ಪೊಲೀಸರು ಎಐಡಿವೈಓ ಯುವಜನ ಸಂಘಟನೆ ಹಾಗೂ ಎಐಕೆಕೆಎಂಎಸ್ ರೈತ ಸಂಘಟನೆಯ ನಾಯಕರುಗಳನ್ನು ಬಂಧಿಸಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ರಾಜ್ಯ ಸರ್ಕಾರದ ಈ ಧಮನಕಾರಿ ನಡೆಯನ್ನು ಎಐಡಿಎಸ್ಓ ತೀವ್ರವಾಗಿ ಖಂಡಿಸುತ್ತದೆ. ಪೊಲೀಸರು ಕೇಳಿದ ಮಾಹಿತಿಯನ್ನು ಹಲವು ಬಾರಿ ನೀಡಿದ್ದರೂ, ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಅನುಮತಿ ನಿರಾಕರಿಸಲಾಗಿದೆ. ಮತ್ತು ಇದೀಗ ಯುವಜನರ ನ್ಯಾಯಯುತ ಹೋರಾಟವನ್ನು ಬೆಂಬಲಿಸಲು ಬಂದ ಸಂಘಟನೆಗಳ ನಾಯಕರುಗಳನ್ನು ಬಂಧಿಸಲಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಎಸ್ಐಆರ್ ಎಂದರೆ ಎನ್ಆರ್ಸಿ, ಮತದಾನ ಹಕ್ಕುಗಳ ಪೌರತ್ವ ನಿರಾಕರಣೆ: ಚಿಂತಕ ಶಿವಸುಂದರ್

“ಧಾರವಾಡ ಸೇರಿದಂತೆ ರಾಜ್ಯದ ವಿದ್ಯಾರ್ಥಿ- ಯುವಜನರು, ಹಾಗೂ ಪ್ರಜ್ಞಾವಂತ ಜನ ಸಮೂಹವು ಒಂದಾಗಿ ಸರ್ಕಾರದ ಈ ನಿರಂಕುಶ ಧೋರಣೆಯ ವಿರುದ್ಧ ಧ್ವನಿಯೆತ್ತಬೇಕು ಮತ್ತು ಹೋರಾಡುವ ಪ್ರಜಾತಾಂತ್ರಿಕ ಹಕ್ಕಿನ ರಕ್ಷಣೆಗಾಗಿ ಹೋರಾಡಬೇಕು ಒಂದು ಎಐಡಿಎಸ್ಓ ಕರೆ ನೀಡುತ್ತದೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...