ದಾವಣಗೆರೆ | ಚಿತ್ರದುರ್ಗದ ಭೋವಿ ಗುರುಪೀಠದಲ್ಲಿ ಶ್ರೀಗಳ ಪಟ್ಟಾಭಿಷೇಕ ಮಹೋತ್ಸವ ಹಾಗೂ ಭೋವಿ ಜನೋತ್ಸವ

Date:

ಚಿತ್ರದುರ್ಗದ ಭೋವಿ ಗುರುಪೀಠದಲ್ಲಿ ಜುಲೈ 18 ಶುಕ್ರವಾರದಂದು ಇಮ್ಮಡಿ ಸಿದ್ಧರಾಮೇಶ್ವರ ಶ್ರೀಗಳ 16ನೇ ಪಟ್ಟಾಭಿಷೇಕ ಮಹೋತ್ಸವ, 27ನೇ ಲಾಂಛನ ದೀಕ್ಷಾ ಮಹೋತ್ಸವ, 40ನೇ ವಸಂತೋತ್ಸವ ನಿಮಿತ್ತ ಪ್ರತಿಭಾ ಪುರಸ್ಕಾರ, ವಧುವರರ ಸಮಾವೇಶ, ರಕ್ತದಾನ ಶಿಬಿರಗಳನ್ನು ಹಮ್ಮಿಕೊಂಡಿದ್ದು ದಾವಣಗೆರೆ ಜಿಲ್ಲೆಯ ಭೋವಿ ಗುರುಪೀಠದ ಸದ್ಬಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಮಾಜದ ಮುಖಂಡ ಹೆಚ್ ಜಯಣ್ಣ ಕರೆ ನೀಡಿದರು.

ದಾವಣಗೆರೆ ನಗರದ ವೆಂಕಾಭೋವಿ ಕಾಲೋನಿಯ ಸಿದ್ಧರಾಮೇಶ್ವರ ಮಠದಲ್ಲಿ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿರವರ ನೇತೃತ್ವದಲ್ಲಿ ಜಿಲ್ಲಾ ಮಟ್ಚದ ಪೂರ್ವಭಾವಿ ಸಭೆ ನಡೆಸಲಾಯಿತು. ಮುಖಂಡ ಬಿ.ಟಿ.ಸಿದ್ಧಪ್ಪ ಮಾತನಾಡಿ “ಶ್ರೀಗಳ ಜನ್ಮಕ್ಷೇತ್ರ ದಾವಣಗೆರೆ. ಅವರ ಪ್ರಭಾವಳಿ ರಾಜ್ಯ ದೇಶಾದ್ಯಾಂತ ಹಬ್ಬಿದೆ. ಸಮಾಜದ ಲೋಪದೋಷಗಳನ್ನು ಮರೆತು ಸಮಾಜ ನೆರವೇರಿಸುವ ಚಿತ್ರದುರ್ಗದ ಭೋವಿ ಜನೋತ್ಸವ, ದಾವಣಗೆರೆಯ ಸಿದ್ಧರಾಮೇಶ್ವರ ರಥೋತ್ಸವ ಅರ್ಥಪೂರ್ಣವಾಗಿ ಆಚರಿಸೋಣ” ಎಂದು ತಿಳಿಸಿದರು.‌

1002322530
ಭೋವಿ ಜನೋತ್ಸವ ಅಂಗವಾಗಿ ದಾವಣಗೆರೆಯಲ್ಲಿ ಜರುಗಿದ ಪೂರ್ವಭಾವಿ ಸಭೆ

ಮಹಾನಗರಪಾಲಿಕೆ ಸದಸ್ಯರಾದ ಶಿವಾನಂದ ಮಾತನಾಡಿ “ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು ಸರ್ವಸಮುದಾಯಗಳೊಂದಿಗೆ, ಸರ್ವಸಮುದಾಯದ ಶ್ರೀಗಳೊಂದಿಗೆ ಸರ್ವ ಪಕ್ಷಗಳೊಂದಿಗೆ ಸಮನ್ವಯ ಕಾಪಾಡಿಕೊಂಡ ಸಂತರಾಗಿದ್ದಾರೆ. ಈ ಕಾರಣದಿಂದ ಯಾವುದೇ ಪಕ್ಷದ ಸರ್ಕಾರವಿದ್ದರು ಭೋವಿ ಸಮಾಜದ ಕಾರ್ಯಗಳು ಸರಾಗವಾಗಿ ನೆರವೇರುತ್ತಿದೆ. ಶ್ರೀಗಳ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ರಾಜಕೀಯವಾಗಿ ಸೂಕ್ತ ಮಾರ್ಗದರ್ಶನದಿಂದ ಭೋವಿ ಸಮಾಜ ಮುನ್ನೆಲೆಗೆ ಬರುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿವೃತ್ತ ಅಭಿಯಂತರರಾದ ವೆಂಕಟೇಶ ಮಾತನಾಡಿ ಧಾರ್ಮಿಕ ಕಾರ್ಯಕ್ರಮಗಳುನ್ನು ಒಬ್ಬ ಬಂಡವಾಳಶಾಹಿ ನಡೆಸಬಹುದು. ಆದರೆ ಆಣೆ ದುಗ್ಗಾಣೆ ಸೇರಿಸಿಕೊಂಡು ಎಲ್ಲರು ಕೈಜೊಡಿಸಿದಾಗ ಸಾರ್ವಜನಿಕ ಸಮಾರಂಭವಾಗುತ್ತದೆ. ಹಾಗಾಗಿ ಜಿಲ್ಲೆಯ ಪ್ರತಿಯೊಬ್ಬ ಭೋವಿ ಸಮಾಜದ ಬಾಂಧವರು ತನು ಮನ ಧನ ಸಹಕಾರ ನೀಡಬೇಕು” ಎಂದು ವಿನಂತಿಸಿದರು.

ಜಿ.ಪಂ.ಮಾಜಿ ಸದಸ್ಯ ಹರಿಹರ ವೀರಭದ್ರಪ್ಪ ಮಾತನಾಡಿ “ಅಧಿಕಾರ ಶಾಶ್ವತವಲ್ಲ. ನಾವು ಮಾಡುವ ಕಾರ್ಯ ಶಾಶ್ವತ. ಸಮಾಜ ಒಗ್ಗಟಿನ ಮಂತ್ರ ಜಪಿಸಬೇಕು. ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು ನಮ್ಮ ಸಮಾಜದ ಹೆಮ್ಮೆಯಾಗಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಬುದ್ಧ ಬಸವ ಅಂಬೇಡ್ಕರರಂತೆ ಪ್ರಜ್ಞೆ, ಕರುಣೆ ಬೆಳೆಸಿಕೊಳ್ಳಬೇಕು; ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀಗಳು

ಪೂರ್ವಭಾವಿ ಸಭೆಯಲ್ಲಿ ಎಪಿಎಂಸಿ ಮಾಜಿ ಸದಸ್ಯ ಪುಟ್ಟಣ್ಣ, ವಕೀಲ ಗೋಪಾಲ, ಶ್ರೀನಿವಾಸ, ಎ.ಬಿ.ನಾಗರಾಜ, ಶ್ರೀಮತಿ ಉಮಾ ಕುಮಾರ, ಗರಗ ರಾಜಪ್ಪ, ಹರಿಹರ, ಹೊನ್ನಾಳ್ಳಿ, ಜಗಳೂರು, ಚನ್ನಗಿರಿ, ಮಾಯಕೊಂಡ ಕ್ಷೇತ್ರಗಳ ಸಮಾಜದ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...