ಚಿತ್ರದುರ್ಗ | ಅಸ್ಥಿಪಂಜರಗಳಿದ್ದ ಮನೆಯಲ್ಲಿ ಡೆತ್‌ನೋಟ್ ಪತ್ತೆ; ಕುಟುಂಬ ಆತ್ಮಹತ್ಯೆ

Date:

ಚಿತ್ರದುರ್ಗದ ಪಾಳುಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರಗಳು ಪತ್ತೆಯಾಗಿವೆ. ಇದೀಗ, ಅದೇ ಮನೆಯಲ್ಲಿ ಡೆತ್‌ನೋಟ್ ಕೂಡ ಪತ್ತೆಯಾಗಿದೆ. ಮನೆಯ ಮಾಲೀಕ ಜಗನ್ನಾಥರೆಡ್ಡಿ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಮನೆಯಲ್ಲಿ ಸಿಕ್ಕ ಡೆತ್‌ನೋಟ್‌ಅನ್ನು ಪೊಲೀಸು ವಶಕ್ಕೆ ಪಡೆದುಕೊಂಡಿದ್ದಾರೆ. ಜಗನ್ನಾಥರೆಡ್ಡಿ ಅವರ ಪುತ್ರ ನರೇಂದ್ರರೆಡ್ಡಿ ದರೋಡೆಯಲ್ಲಿ ಭಾಗಿಯಾಗಿ, ಜೈಲು ಸೇರಿದ್ದ. ಇದರಿಂದ ಮನನೊಂದು ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ ಎಂದು ಹೇಳಲಾಗಿದೆ.

ನರೇಂದ್ರರೆಡ್ಡಿ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಇಂಜಿನಿಯರ್‌ ಕೆಲಸ ಮಾಡುತ್ತಿದ್ದ. 2013ರಲ್ಲಿ ಬಿಡದಿ ಬಳಿ ವಾಹನವೊಂದನ್ನು ತಡೆದು ದರೋಡೆ ಮಾಡಿದ್ದ ಪ್ರಕರಣದಲ್ಲಿ ಆತನೂ ಭಾಗಿಯಾಗಿದ್ದ. ಆತನನ್ನು ಪೊಲೀಸರು ಬಂಧಿಸಿದ್ದರು. ಕಲವು ದಿನ ಆತ ಜೈಲಿನಲ್ಲಿದ್ದ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆತ ಜೈಲಿಗೆ ಹೋಗಿದ್ದರಿಂದ ಮನವೊಂದಿದ್ದ ಕುಟುಂಬ 2019ರಲ್ಲಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ.

ಅಸ್ಥಿಪಂಜರಗಳು ನಿವೃತ್ತ ಇಂಜಿನಿಯರ್ ಜಗನ್ನಾಥರೆಡ್ಡಿ, ಅವರ ಪತ್ನಿ ಪ್ರೇಮಕ್ಕ, ಪುತ್ರಿ ತ್ರಿವೇಣಿ, ಪುತ್ರ ಕೃಷ್ಣರೆಡ್ಡಿ ಹಾಗೂ ನರೇಂದ್ರರೆಡ್ಡಿ ಅವರದ್ದೇ ಆಗಿರಬಹುದು ಎಂದು ಅವರ ಸಂಬಂಧಿ ಪವನ್ ಕುಮಾರ್ ತಿಳಿಸಿದ್ದಾರೆ.

“ಜಗನ್ನಾಥರೆಡ್ಡಿ ಹಲವು ವರ್ಷಗಳಿಂದ ನಮ್ಮ ಸಂಪರ್ಕದಲ್ಲಿ ಇರಲಿಲ್ಲ. ಕೆಲ ವರ್ಷಗಳಿಂದ ಅವರ ಕುಟುಂಬ ಕಾಣಿಸಿರಲಿಲ್ಲ. ಅವರ ಮನೆಯಲ್ಲಿ ಪತ್ತೆಯಾಗಿರುವ ಅಸ್ಥಿಪಂಜರಗಳು ಅವರದ್ದೇ ಇರಬಹುದು. ವರ್ಷಗಳ ಹಿಂದೆಯೇ ಅವರು ಮೃತಪಟ್ಟಿರುವ ಸಾಧ್ಯತೆಗಳಿವೆ” ಎಂದು ಪವನ್ ಕುಮಾರ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...