ಆರ್ ಸಿ ಬಿ ತಂಡದ ಐಪಿಎಲ್ ಗೆಲುವು ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಅಭಿಮಾನಿಗಳ ಶ್ಲಾಘನೆ; ಚಿತ್ರದುರ್ಗ ದಾವಣಗೆರೆಯಲ್ಲಿ ಸಂಭ್ರಮಾಚರಣೆ

Date:

ಐಪಿಎಲ್ ಟಿ-20 18ನೇ ಆವೃತ್ತಿಯಲ್ಲಿ ಆರ್ ಸಿ ಬಿ ತಂಡವು ಪಂಜಾಬ್ ವಿರುದ್ಧ ನಡೆದ ಅಂತಿಮ ಪಂದ್ಯದಲ್ಲಿ 6 ರನ್ ಗಳಿಂದ ಗೆಲ್ಲುವ ಮೂಲಕ ಐಪಿಎಲ್ ಪ್ರಾರಂಭವಾದಾಗಿನಿಂದ 18 ವರ್ಷಗಳ ಕನಸು ಸಾಕಾರಗೊಳಿಸಿಕೊಂಡಿದ್ದು, ಈ ಮೂಲಕ ಮೊದಲ ಬಾರಿಗೆ ಬೆಂಗಳೂರು ರಾಯಲ್ ಚಾಲೆಂಜರ್ಸ್ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ. ಪಂಜಾಬ್ ವಿರುದ್ಧ ಬೆಂಗಳೂರು ರಾಯಲ್ ಚಾಲೆಂಜರ್ಸ್ ಜಯಭೇರಿ ಬಾರಿಸಿ ಮೊದಲ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿದ್ದು, ಆರ್ ಸಿ ಬಿ ಅಭಿಮಾನಿಗಳಲ್ಲಿ ಸಂಭ್ರಮ ಮೂಡಿಸಿದೆ. ಈ ಗೆಲುವಿನ ಹಿನ್ನೆಲೆಯಲ್ಲಿ ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತಡರಾತ್ರಿಯವರೆಗೂ ಮುಳುಗಿದ್ದರು.

ದಾವಣಗೆರೆ ನಗರದ ಹೈಸ್ಕೂಲು ಮೈದಾನ, ಜಯದೇವ ವೃತ್ತ, ಎಂಸಿಸಿ ಬ್ಲಾಕ್, ವಿದ್ಯಾನಗರ, ಮಂಡಿಪೇಟೆ, ರಾಂ ಅಂಡ್ ಕೋ ವೃತ್ತ ಸೇರಿದಂತೆ ಹಲವು ಕಡೆಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಚನ್ನಗಿರಿ, ಹರಿಹರ ನಗರದ ಹಲವೆಡೆ ಮತ್ತು ಗ್ರಾಮೀಣ ಭಾಗದಲ್ಲಿ ಕೂಡ ಆರ್ ಸಿ ಬಿ ಗೆಲುವಿಗೆ ಸಂಭ್ರಮಾಚರಣೆ ನೆಡೆಸಿದರು.‌

ಚಿತ್ರದುರ್ಗದ ಹೊಳಲ್ಕೆರೆ ಗೇಟ್, ಕನಕ ವೃತ್ತ, ಗಾಯತ್ರಿ ವೃತ್ತ, ಜೆಸಿಆರ್ ಬಡಾವಣೆ, ಕೆಳಗೋಟೆ, ಸ್ಟೇಟ್ ಬ್ಯಾಂಕ್ ವೃತ್ತ ಸೇರಿದಂತೆ ಹೊಳಲ್ಕೆರೆ ನಗರದಲ್ಲಿ, ಹೊಸದುರ್ಗ, ಚಳ್ಳಕೆರೆಯ ಮುಖ್ಯ ವೃತ್ತಗಳಲ್ಲಿ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮ ವ್ಯಕ್ತಪಡಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕನ್ನಡ ಭಾಷಾವಿವಾದ, ಕಮಲ್ ಕ್ಷಮೆ ಯಾಚಿಸದಿದ್ದರೆ ಥಗ್ ಲೈಪ್ ಚಿತ್ರ ಪ್ರದರ್ಶನಕ್ಕೆ ಅವಕಾಶವಿಲ್ಲ; ಕರವೇ

ಐಪಿಎಲ್ ಆರಂಭವಾಗಿ 18 ವರ್ಷಗಳಾದರೂ ಪ್ರತಿ ಆವೃತ್ತಿಯಲ್ಲೂ ನಿರಾಸೆ ಅನುಭವಿಸಿದ್ದ ಆರ್ ಸಿ ಬಿ 18 ವರ್ಷಗಳ ಕಾಯುವಿಕೆಗೆ ವಿರಾಮವಿಟ್ಟು ಈ ಆವೃತ್ತಿಯಲ್ಲಿ ಜಯಗಳಿಸಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ವಿಶೇಷ ಸಂಭ್ರಮ ಮೂಡಿಸಿದೆ. ಹಲವೆಡೆ ದೊಡ್ಡ ದೊಡ್ಡ ಪರದೆಗಳಲ್ಲಿ ಪಂದ್ಯ ಪ್ರದರ್ಶನ ಏರ್ಪಡಿಸಲಾಗಿತ್ತು. ಸಂಭ್ರಮಾಚರಣೆ ವೇಳೆ ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ದಯಾಳ್ ಸೇರಿದಂತೆ ಹಲವು ಆಟಗಾರರಿಗೆ ಜೈಕಾರ ಹಾಕಿ ತಂಡದ ಆಟಗಾರರ ಆಟವನ್ನು ಶ್ಲಾಘಿಸಿದ್ದುದು ಕಂಡು ಬಂದಿತು

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...