ರಾಯಚೂರು | ಮಣಿಪುರ ಹಿಂಸಾಚಾರ ಖಂಡಿಸಿ ಕ್ರೈಸ್ತ ಸಮುದಾಯ ಪ್ರತಿಭಟನೆ

Date:

ಮಣಿಪುರದಲ್ಲಿ ನಡೆದ ಕ್ರೈಸ್ತ ಸಮುದಾಯದ ಮೇಲಿನ ದೌರ್ಜನ್ಯ ಮತ್ತು ಹಿಂಸೆ ಖಂಡಿಸಿ ಮೆಥೋಡಿಸ್ಟ್ ಸೆಂಟ್ರಲ್ ಚರ್ಚ್ ನೇತೃತ್ವದಲ್ಲಿ ಕ್ರೈಸ್ತ ಸಮುದಾಯದ ಮುಖಂಡರು ರಾಯಚೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದ ಅವರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಕಳೆದು ಮೂರು ತಿಂಗಳುಗಳಿಂದ ನಿರಂತರವಾಗಿ ಮಣಿಪುರದಲ್ಲಿ ಮೈಥೇಯಿ ಸಮುದಾಯದ ಅರ್‌ಎಸ್‌ಎಸ್ ಮತ್ತು ಭಜರಂಗದಳದ ಕಾರ್ಯಕರ್ತರು ಕ್ರೆಸ್ತರ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದಾರೆ. ಚರ್ಚುಗಳನ್ನು ಧ್ವಂಸ ಮಾಡುತ್ತಿದ್ದಾರೆ. ಹಿಂಸಾಚಾರವನ್ನು ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ” ಎಂದು ಕಿಡಿಕಾರಿದ್ದಾರೆ.

“ಮಣಿಪುರದಲ್ಲಿ ನಡೆದ ಕೃತ್ಯದಲ್ಲಿ 200ಕ್ಕೂ ಹೆಚ್ಚು ಚರ್ಚ್‌ಗಳನ್ನು ಸುಟ್ಟುಹಾಕಿ, 100ಕ್ಕೂ ಹೆಚ್ಚು ಜನರು ಹಿಂಸಾಚಾರಕ್ಕೆ ಬಲಿಯಾಗಿದ್ದಾರೆ. ಪೋಷಕರನ್ನು ಕಳೆದುಕೊಂಡು ಹಲವರು ಅನಾಥರಾಗಿದ್ದಾರೆ. ನಿರಾಶ್ರಿತರಾಗಿದ್ದಾರೆ. ಇಡೀ ಮನುಕುಲವೇ ತಲೆತಗ್ಗಿಸುವಂತೆ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ, ಮೆರವಣಿಗೆ ಮಾಡಿ, ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅಂತಹವರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ವ್ಯವಸ್ಥೆ ವಿಫಲವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಣಿಪುರದಲ್ಲಿ ನಡೆಯುತ್ತಿರುವ ಘಟನೆಗಳಿಗೆ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಅಖಿಲ ಭಾರತ ಕ್ರೈಸ್ತ ಮಹಾಸಭಾದ ಅಧ್ಯಕ್ಷ ರಾಬರ್ಟ್ ರಾಜಶೇಖರ್, ಜಿಲ್ಲಾ ಸೂಪಡೆಂಟ್ ಶಿಮೋನ್, ರೆವರೆಂಡ್ ಡಿ. ಸುಮಿತ್ರಾ ಫಾಸ್ಟ್, ರೆವರೆಂಡ್ ಸಿ ಮಾರ್ಕ್ಸ್, ರಾಣ ರಿಚರ್ಡ್, ಶುಭದೇವಿ, ಶಾಮ್ ಸುಂದರ್ ರಾಜ್, ಇಮ್ಯಾನುವಲ್, ರೂಟ್ ನಳಿನಿ, ಸನ್ನಿ, ಸೇರಿದಂತೆ ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...