ಉಡುಪಿ | ಕುಂದಾಪುರದ ನಾಡ, ಆಲೂರು ಹಕ್ಲಾಡಿ ಗ್ರಾಮಸ್ಥರಿಂದ ಉಡುಪಿಯಲ್ಲಿ ಧರಣಿ

Date:

ಸರಕಾರಿ ಬಸ್ಸುಗಳು ಇಲ್ಲದ ಕುಂದಾಪುರ ಆಲೂರು, ಹೊಯ್ಯಾಣ ಕ್ರಾಸ್, ತಾರಿಬೇರು, ಅಕ್ಷಾಲಿಬೆಟ್ಟು ಕೋಣ್ಕಿ, ನಾಡ, ಮೊವಾಡಿ ಮಾರ್ಗವಾಗಿ ಕುಂದಾಪುರಕ್ಕೆ ಸರಕಾರಿ ಬಸ್ಸಿಗೆ ಪರ್ಮಿಟ್ ನೀಡಬೇಕು ಎಂದು ಆಗ್ರಹಿಸಿ ಇಂದು ಮಣಿಪಾಲದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಚೇರಿ ಎದುರು ಗ್ರಾಮಸ್ಥರು ಧರಣಿ ನಡೆಸಿದರು.

ಸ್ಥಳೀಯ ಮುಖಂಡರಾದ ರಾಜೀವ ಪಡುಕೋಣೆ ಮಾತನಾಡಿ ನಾವು ಕೇಳುತ್ತಿರುವ ಮಾರ್ಗದಲ್ಲಿ ಯಾವುದೇ ಬಸ್ಸುಗಳು ಓಡಾಡುತ್ತಿಲ್ಲ ಇಲ್ಲಿನ ಗ್ರಾಮೀಣ ಪ್ರದೇಶದ ಜನರು ಹಲವಾರು ವರ್ಷಗಳಿಂದ ಬಸ್ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಮಕ್ಕಳು ಶಿಕ್ಷಣಕ್ಕಾಗಿ, ಉದ್ಯೋಗ ಖಾತ್ರಿ ಕೂಲಿಕಾರರು ಪ್ರಯಾಣಕ್ಕೆ ದುಬಾರಿ ವೆಚ್ಚ ನೀಡಿ ಆದಾಯ ಕಳೆದುಕೊಳ್ಳುತ್ತಿದ್ದಾರೆ ಪ್ರಾಧಿಕಾರ ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಅರಿತು ಬಸ್ ಸೌಲಭ್ಯ ನೀಡಬೇಕು ಇಲ್ಲವಾದಲ್ಲಿ ನಿರಂತರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕ್ರಷಿಕೂಲಿಕಾರರ ಸಂಘಟನೆಯ ನಾಗರತ್ನ ನಾಡ ಮಾತನಾಡಿ ಆಲೂರು, ನಾಡ, ಹಕ್ಲಾಡಿ ಗ್ರಾಮದ ಮಹಿಳೆಯರಿಗೆ ಶಕ್ತಿ ಯೋಜನೆ ಸಾರಿಗೆ ಪ್ರಾಧಿಕಾರ ಕೊಡಿಸುವಲ್ಲಿ ಅನ್ಯಾಯ ಮಾಡಿದೆ ಕೂಡಲೇ ಸರ್ಕಾರಿ ಬಸ್ ಆರಂಭಿಸುವುದರ ಮೂಲಕ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಧರಣಿಯನ್ನು ದ್ದೇಶಿಸಿ ಮಾತನಾಡಿದ ಸಿಐಟಿಯು ರಾಜ್ಯ ಉಪಾಧ್ಯಕ್ಷ ಬಾಲಕ್ರಷ್ಣ ಶೆಟ್ಟಿ ಅವರು ಸಾರಿಗೆ ಪ್ರಾದಿಕಾರ ಜನರ ಹೋರಾಟಗಳನ್ನು ನಿರ್ಲಕ್ಷಿಸುತ್ತಿದೆ ಈ ಹಿಂದೆ ಕೊಲ್ಲೂರು ಗ್ರಾಮಸ್ಥರು ಹೋರಾಟ ಮಾಡಿ ಬೈಂದೂರು ಕೊಲ್ಲೂರು ಮಾರ್ಗಕ್ಕೆ ಬಸ್ ಓಡಿಸುವಂತೆ ಮಾಡಿದರೂ ಈಗ ಅದನ್ನು ರದ್ದು ಪಡಿಸಿರುವುದು ಖಂಡನೀಯ ಇಂತಹ ವರ್ತನೆ ಪ್ರಾಧಿಕಾರ ಕೈಬಿಡಬೇಕು ಜನರ ಬೇಡಿಕೆಯನ್ನು ಈಡೇರಿಸಲು ಪ್ರಾಧಿಕಾರ ಮುಂದಾಗಬೇಕು ಎಂದು ಹೇಳಿದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಎಚ್ ನರಸಿಂಹ, ಧರಣಿಯಲ್ಲಿ ಚಂದ್ರಶೇಖರ ವಿ, ಕವಿರಾಜ್ ಎಸ್ ಕಾಂಚನ್, ರಘುರಾಮ ಆಚಾರ್ಯ ಆಲೂರು, ಶೀಲಾವತಿ ಹಡವು, ನಾಗರತ್ನ ಪಡುವರಿ, ನಿಸರ್ಗ, ಬಲ್ಕೀಸ್, ನಳಿನಿ ಉಮೇಶ್ ಕುಂದರ್ ಮೊದಲಾದವರಿದ್ದರು
ಡಿವೈಎಫ್ಐ ಮುಖಂಡ ರಾಜೇಶ್ ಪಡುಕೋಣೆ ಸ್ವಾಗತಿಸಿದರು. ನಾಡ ಗ್ರಾಮ ಪಂಚಾಯತ್ ಸದಸ್ಯೆ ಶೋಭಾ ಕೆರೆಮನೆ ವಂದಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಜನವಾದಿ ಮಹಿಳಾ ಸಂಘಟನೆ, ಕರ್ನಾಟಕ ಪ್ರಾಂತ ಕ್ರಷಿಕೂಲಿಕಾರರ ಸಂಘಟನೆ, ಕುಂದಾಪುರ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ,ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಸಂಘಟನೆಗಳು ವಹಿಸಿದ್ದವು. ಪ್ರಾದೇಶಿಕ ಅಧಿಕಾರಿ ಲಕ್ಷ್ಮೀ ನಾರಾಯಣ ಪಿ ನಾಯಕ್ ಮನವಿ ಸ್ವೀಕರಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...