ರಾಜ್ಯ ಕರುಡು ನಿಯಮಗಳು 2026 ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಉಡುಪಿಯಲ್ಲಿ ಪ್ರತಿಭಟನೆ

Date:

ರಾಜ್ಯ ಕರುಡು ನಿಯಮಗಳು–2026 ಕುರಿತು ಕಾರ್ಮಿಕ ಸಂಘಗಳ ಆಕ್ಷೇಪಣೆಗಳು ಹಾಗೂ ಸಲಹೆಗಳನ್ನು ಸಲ್ಲಿಸಲು ಸಿಐಟಿಯು ನೇತೃತ್ವದಲ್ಲಿ ರಾಜ್ಯಾದ್ಯಂತ ಕರೆ ನೀಡಲಾಗಿದ್ದ ಹಿನ್ನೆಲೆ, ಉಡುಪಿಯಲ್ಲಿಯೂ ವಿವಿಧ ಕಾರ್ಮಿಕ ಸಂಘಟನೆಗಳು ಇಂದು ಪ್ರತಿಭಟನೆ ನಡೆಸಿದವು.

ಉಡುಪಿ ಜಿಲ್ಲಾ ಕಟ್ಟಡ ಕಾರ್ಮಿಕ ಸಂಘ, ಬೀಡಿ ಎಂಡ್ ಟೋಬ್ಯಾಕೋ ಲೇಬರ್ ಯೂನಿಯನ್ ಮತ್ತು ಜನರಲ್ ವರ್ಕರ್ಸ್ ಯೂನಿಯನ್ ಸಂಘಗಳ ಸದಸ್ಯರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, ಬಳಿಕ ಕಾರ್ಮಿಕ ಅಧಿಕಾರಿಗಳು ಹಾಗೂ ಅಪಾರ ಜಿಲ್ಲಾಧಿಕಾರಿ ಮೂಲಕ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಮತ್ತು ಕಾರ್ಮಿಕ ಕಾರ್ಯದರ್ಶಿ (ವಿಕಾಸಸೌಧ), ಬೆಂಗಳೂರು ಇವರಿಗೆ ಆಕ್ಷೇಪಣೆ ಪತ್ರವನ್ನು ಸಲ್ಲಿಸಿದರು.

1009860578

ಪ್ರಮುಖ ಬೇಡಿಕೆಗಳು:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
  1. ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು.
  2. ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿ ಸಮವರ್ತಿ ಪಟ್ಟಿಯ ಕಾರ್ಮಿಕರ ಕುರಿತ ಅಧಿಕಾರವನ್ನು ಕೇಂದ್ರ ಸರ್ಕಾರಕ್ಕೆ ಸೀಮಿತಗೊಳಿಸುವ ಪ್ರಯತ್ನವನ್ನು ರಾಜ್ಯ ಸರ್ಕಾರ ವಿರೋಧಿಸಬೇಕು.
  3. ರಾಜ್ಯ ಸರ್ಕಾರ ತನ್ನ ಅಧಿಕಾರವನ್ನು ಚಲಾಯಿಸಿ ಮೂಲ ಸಂಹಿತೆಗಳಿಗೆ ತಿದ್ದುಪಡಿ ತಂದು ನಂತರ ನಿಯಮಾವಳಿ ರೂಪಿಸಬೇಕು.
  4. ಕರಡು ನಿಯಮಗಳನ್ನು ಕನ್ನಡದಲ್ಲಿ ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಸಮರ್ಪಕ ಸಮಯಾವಕಾಶ ನೀಡಬೇಕು.
  5. ರಾಜ್ಯ ಸರ್ಕಾರ ಕೂಡಲೇ ಕನಿಷ್ಠ ವೇತನ ಅಧಿಸೂಚನೆ ಹೊರಡಿಸಬೇಕು.

ಪ್ರತಿಭಟನೆಯಲ್ಲಿ ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗಾರ, ಉಡುಪಿ ಬೀಡಿ ಎಂಡ್ ಟೋಬ್ಯಾಕೋ ಲೇಬರ್ ಯೂನಿಯನ್ ಅಧ್ಯಕ್ಷೆ ನಳಿನಿ ಎಸ್, ಪ್ರಧಾನ ಕಾರ್ಯದರ್ಶಿ ಉಮೇಶ್ ಕುಂದರ್, ಮುಖಂಡರಾದ ವಸಂತಿ, ಉಡುಪಿ ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಸುಭಾಸ್ ನಾಯಕ್, ಪ್ರಧಾನ ಕಾರ್ಯದರ್ಶಿ ಶಶಿಧರ್ ಗೊಲ್ಲ, ಉಪಾಧ್ಯಕ್ಷ ದಯಾನಂದ ಕೊಟ್ಯಾನ್, ಕೋಶಾಧಿಕಾರಿ ವಾಮನ ಬಂಗೇರ ಸೇರಿದಂತೆ ಸರೋಜ ಎಸ್., ದಯಾನಂದ ಅಮೀನ್, ರಾಮ ಕಾರ್ಕಡ, ನಾಗರಾಜ ಸಾಲಿಗ್ರಾಮ, ಮುರಳಿ, ರಮೇಶ್, ಶ್ರೀಧರ ಶೆಟ್ಟಿ, ಅಶೋಕ, ರಂಗನಾಥ, ಚಂದ್ರಯ್ಯ ಪೂಜಾರಿ ಹಾಗೂ ಸಿಐಟಿಯು ಉಡುಪಿ ಮುಖಂಡ ಮೋಹನ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...