ಉಡುಪಿ | ರೆಸಾರ್ಟ್‌ಗೆ ತೆರಳಿದ್ದ ಕುಟುಂಬಕ್ಕೆ ಆಘಾತ: ಸ್ವಿಮ್ಮಿಂಗ್​ ಪೂಲ್​ನಲ್ಲಿ ಮುಳುಗಿ ಬಾಲಕ ಸಾವು

Date:

ಈದ್ ಹಬ್ಬದ ಪ್ರಯುಕ್ತ ಖುಷಿ ಸಂಭ್ರಮಿಸಲು ಖಾಸಗಿ ರೆಸಾರ್ಟ್‌ವೊಂದಕ್ಕೆ ತೆರಳಿದ್ದ ಕುಟುಂಬವೊಂದು ಆಘಾತ ಅನುಭವಿಸಿದ ಘಟನೆ ನಡೆದಿದೆ. ಸ್ವಿಮ್ಮಿಂಗ್​ ಪೂಲ್​ನಲ್ಲಿ ಮುಳುಗಿ ಕುಟುಂಬದ ಬಾಲಕನೋರ್ವ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ನಡೆದಿದೆ.

ಉಡುಪಿ‌ಯ ಹೂಡೆ ಮೂಲದ ಮುಹಮ್ಮದ್ ಅರೀಝ್ (10) ಮೃತ ವಿದ್ಯಾರ್ಥಿ. ಈದ್ ಹಬ್ಬದ ಹಿನ್ನೆಲೆಯಲ್ಲಿ ಹೂಡೆಯ ದಾರುಸ್ಸಲಾಮ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿ ಕುಟುಂಬ ಸದಸ್ಯರೊಂದಿಗೆ ಪ್ರವಾಸಕ್ಕೆ ಬಂದಿದ್ದನು. ಆದರೆ ಟಿನ್ ಟಾನ್ ಅಡ್ವೆಂಚರ್ಸ್ ರೆಸಾರ್ಟ್​ನ ಸ್ವಿಮ್ಮಿಂಗ್​ ಪೂಲ್​ನ ನೀರಿನಲ್ಲಿ ಬಿದ್ದು ಅಸ್ವಸ್ಥನಾಗಿದ್ದನು. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಅರೀಝ್ ಮೃತಪಟ್ಟಿದ್ದಾನೆ.

ಸದ್ಯ ಈ ಸಂಬಂಧ ಬಾಲಕನ ಪೋಷಕರು ಟಿನ್ ಟಾನ್ ಅಡ್ವೆಂಚರ್ಸ್ ರೆಸಾರ್ಟ್ ವಿರುದ್ಧ ದೂರು ದಾಖಲಿಸಿದ್ದಾರೆ. ಮಗುವಿನ ಸಾವಿಗೆ ಟಿನ್ ಟಾನ್ ಎಡ್ವೆಂಚರ್ಸ್ ರೆಸಾರ್ಟ್‌ನ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣವೆಂದು ದೂರಿನಲ್ಲಿ ಆರೋಪಿಸಲಾಗಿದೆ. ಲೈಫ್ ಜಾಕೆಟ್, ಲೈಫ್ ಗಾರ್ಡ್ ಇನ್ನಿತರ ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಈ ದುರ್ಘಟನೆ ಸಂಭವಿಸಿದೆಯೆಂದು ದೂರಿನಲ್ಲಿ ಕುಟುಂಬಸ್ಥರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ನರೇಂದ್ರ ಮೋದಿಯನ್ನು ಕಿತ್ತೊಗೆಯುವುದೇ ನಮ್ಮೆಲ್ಲರ ಗುರಿ: ಬಿ ಕೆ ಹರಿಪ್ರಸಾದ್‌

ಮೃತ ವಿದ್ಯಾರ್ಥಿಯು ತಂದೆ, ತಾಯಿ ಅಪಾರ ಬಂಧು ಬಳಗವನ್ನು ಅಗಲಿದ್ದಾನೆ‌. ಈತ ಹೂಡೆಯ ದಾರುಸ್ಸಲಾಮ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಯಾಗಿದ್ದ ಆಡಳಿತ ಮಂಡಳಿ ಸಂತಾಪ ವ್ಯಕ್ತಪಡಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...