ಬೀದರ್ ಜಿಲ್ಲೆಗೆ ಏ.16ರಂದು ಸಿಎಂ, ಡಿಸಿಎಂ ಪ್ರವಾಸ : ನಾನಾ ಅಭಿವೃದ್ಧಿ ಕಾಮಗಾರಿ ಶಂಕುಸ್ಥಾಪನೆ, ಉದ್ಘಾಟನೆ

Date:

ಬೀದರ್ ಜಿಲ್ಲೆಗೆ ಏ.16ರಂದು ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಮಿಸಲಿದ್ದು, ₹1 ಸಾವಿರ ಕೋಟಿಗೂ ಅಧಿಕ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಅವರು ತಿಳಿಸಿದರು.

ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಿದ್ಧತಾ ಸಭೆ ಉದ್ದೇಶಿಸಿ ಅವರು ಮಾತನಾಡಿದರು.

ʼನೀರಾವರಿ, ಕುಡಿಯುವ ನೀರು, ಜಿಲ್ಲಾಡಳಿತ ಭವನ, ರಸ್ತೆ ಮತ್ತು ಒಳಚರಂಡಿ, ಶಾಲೆ ಹಾಗೂ ವಸತಿ ಶಾಲೆ, ಹೊನ್ನಿಕೇರಿ ಪರಿಸರ ಪ್ರವಾಸೋದ್ಯಮ ಯೋಜನೆ, ಬ್ರೀಮ್ಸ್ ಕ್ಯಾಥ್‌ಲ್ಯಾಬ್, ಭಾಲ್ಕಿ ತಾಲೂಕು ಆಸ್ಪತ್ರೆ, ಭಾಲ್ಕಿ ಕ್ರೀಡಾಂಗಣ, ನೀರಾವರಿ ಯೋಜನೆಗಳು ಹಾಗೂ ವಿವಿಧ ಇಲಾಖೆಯ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆʼ ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏ.15ರಿಂದ ವಿಮಾನಯಾನ ಪುನಾರಂಭ :

ʼಕಳೆದ ಒಂದೂವರೆ ವರ್ಷದಿಂದ ಸ್ಥಗಿತಗೊಂಡಿದ್ದ ಬೀದರ್-ಬೆಂಗಳೂರು ನಾಗರಿಕ ವಿಮಾನಯಾನ ಸೇವೆಯನ್ನು ಏಪ್ರಿಲ್ 15ರಿಂದ ಪುನಾರಂಭಗೊಳಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಏ.16 ರಂದು ಬೀದರ್ ನಗರಕ್ಕೆ ಆಗಮಿಸಿ, ವಿಮಾನಯಾನ ಸೇವೆಗೆ ವಿಧ್ಯುಕ್ತವಾಗಿ ಚಾಲನೆ ನೀಡಲಿದ್ದಾರೆʼ ಎಂದು ತಿಳಿಸಿದರು.

ಅಂದಿನ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ದಿನೇಶ ಗುಂಡುರಾವ್, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ‌ ಪ್ರಿಯಾಂಕ್‌ ಖರ್ಗೆಸೇರಿದಂತೆ ಹಲವು ಸಚಿವರು, ಗಣ್ಯರು ಭಾಗಿಯಾಗಲಿದ್ದಾರೆ. ಜಿಲ್ಲೆಯ ವಿವಿಧ ಭಾಗಗಳಿಂದ 40 ರಿಂದ 50 ಸಾವಿರ ಜನರು ಕಾರ್ಯಕ್ರಮದಲ್ಲಿ ಸೇರಲಿದ್ದಾರೆ. ಎಂದು ತಿಳಿಸಿದರು.

ಸಿಎಂ ಮತ್ತು ಡಿಸಿಎಂ ಪ್ರವಾಸ ಕುರಿತು ಕರೆದ ಸಭೆಯ ಫೋಟೋ 3
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಬಸವಕಲ್ಯಾಣದ ಆಧುನಿಕ ಅನುಭವ ಮಂಟಪದ ಕಾಮಗಾರಿ ಮುಂದುವರೆದಿದ್ದು, ಪೂರ್ಣಗೊಳ್ಳುವ ಹಂತದಲ್ಲಿದೆ. ಬೀದರ್ ಜಿಲ್ಲೆಯನ್ನು ಧಾರ್ಮಿಕ, ಐತಿಹಾಸಿಕ ಹಾಗೂ ಆಧ್ಯಾತ್ಮಿಕ ತಾಣವಾಗಿ ರೂಪಿಸುವಲ್ಲಿ ಈ ಯೋಜನೆಗಳು ಮಹತ್ವಪೂರ್ಣ ಪಾತ್ರ ವಹಿಸಲಿವೆʼ ಎಂದರು.

ʼಜಿಲ್ಲೆಯ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇವೆ, ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ಕಾರ್ಯ ಎಲ್ಲರೂ ಒಗ್ಗಟ್ಟಿನಿಂದ ಮಾಡುತ್ತೇವೆʼ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ನಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ

ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಂ.ಎಂ, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಬೀದರ್ ಹಾಗೂ ಬಸವಕಲ್ಯಾಣ ಸಹಾಯಕ ಆಯುಕ್ತರು ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...