ಕಲಬುರಗಿಯ ನಗರದ ಮಾರ್ಕೆಟ್ ಬಸ್ ನಿಲ್ದಾಣದ ಆವರಣದಲ್ಲಿ ಕೆಎಂಎಫ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಾದ್ಯಂತ ಏಕಕಾಲಕ್ಕೆ 500 ನಂದಿನಿ ಹಾಲಿನ ಉತ್ಪನ್ನಗಳ ಮಾರಾಟ ಮಳಿಗೆಗಳನ್ನು ಲೋಕಾರ್ಪಣೆಗೊಳಿಸಿದರು.
ಉದ್ಘಾಟನೆ ಮಾಡಿ ಸಿಎಮ್ ಸಿದ್ದರಾಮಯ್ಯ ಮಾತನಾಡಿ, ʼನಂದಿನಿ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನ ಮಾರಾಟವನ್ನು ವಿಸ್ತರಿಸಿಕೊಂಡು, ದೇಶದಲ್ಲೇ ಉತ್ಕೃಷ್ಟ ಗುಣಮಟ್ಟ ಹಾಗೂ ನಂಬಿಕಾರ್ಹ ಹಾಲಿನ ಉತ್ಪನ್ನದ ಸಂಸ್ಥೆಯಾಗಿ ಬೆಳೆಯುತ್ತಿದೆ. ಕನ್ನಡಿಗನಾಗಿ ಈ ಬಗ್ಗೆ ನನಗೆ ಹೆಮ್ಮೆಯಿದೆ’ ಎಂದು ಹೇಳಿದರು.
ಸಚಿವರಾದ ಪ್ರಿಯಾಂಕ್ ಖರ್ಗೆ, ಕೆಕೆಆರ್‌ಡಿಬಿ ಅಧ್ಯಕ್ಷ ಅಜಯ್ ಸಿಂಗ್, ಕೆಎಂಎಫ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ಸೇರಿದಂತೆ ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ : SSLC-PUನಲ್ಲಿ ಉತ್ತೀರ್ಣ ಪ್ರಮಾಣ ಕಡಿಮೆ, 5267 ಶಿಕ್ಷಕರ ಹುದ್ದೆಗಳ ಭರ್ತಿಗೆ ಸೂಚನೆ: ಸಿದ್ದರಾಮಯ್ಯ





