ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ- ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

Date:

ಚಿಕ್ಕಬಳ್ಳಾಪುರ: ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಇಂದು ದೇಶಾದ್ಯಂತ ಮನರೇಗಾ ವನ್ನು ಉಳಿಸಿ ಅಭಿಯಾನ ಪ್ರಾರಂಭಿಸಲಾಗಿದೆ ಚಳಿಗಾಲದ ಅಧಿವೇಶನ್ಲದಲಿ ಕೇಂದ್ರ ಸರ್ಕಾರ ಬಿಜೆಪಿ ಮನರೆಗಾವನ್ನು ರದ್ದುಪಡಿಸಿ, ವಿಬಿಜಿರಾಮ್ ಜಿ ಕಾಯ್ದೆಯನ್ನು ಜಾರಿ ಮಾಡಿದೆ. ಮನರೇಗಾದ ರದ್ದು ಅಗತ್ಯವಿರಲಿಲ್ಲ. ಕೂಲಿಕಾರರು, ಆದಿವಾಸಿಗಳು, ಸಣ್ಣರೈತರಿಗೆ, ಮಹಿಳೆಯರಿಗೆ ಉದ್ಯೋಗದ ಅನುಕೂಲ ಕಲ್ಪಿಸುವ ದಿಸೆಯಲ್ಲಿ 2005 ರಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಾಯಕಿ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಈ ಕಾಯ್ದೆ ಜಾರಿಯಾಯಿತು. ಇದೇ ಕಾಯ್ದೆಯಲ್ಲದೇ ಶಿಕ್ಷಣ ಆಹಾರ ಮಾಹಿತಿ ಹಕ್ಕು ಸೇರಿದಂತೆ ಹಲವು ಜನಪರ ಕಾಯ್ದೆಗಳನ್ನು ಜಾರಿಗೆ ತಂದಿದ್ದರು ಆದರೆ ಈ ಎಲ್ಲ ಜನಪರ ಕಾಯ್ದೆಗಳನ್ನು ದುರ್ಬಲಗೊಳಿಸುವ ಕೆಲಸವನ್ನು ಮೋದಿಯವರ ನೇತೃತ್ವದ ಸರ್ಕಾರ ಮಾಡುತ್ತಿದೆ ಎಂದರು.

ಮನರೇಗಾ ಅಡಿ 12.16 ಕೋಟಿ ಜನರಿಗೆ ಉದ್ಯೋಗ

ಸದನದಲ್ಲಿ ಕೇವಲ 8 ಗಂಟೆಗಳ ಕಾಲ ಚರ್ಚೆ ಮಾಡಿದ ಕೇಂದ್ರ ಸರ್ಕಾರ ನಂತರ ಹೊಸ ಕಾಯ್ದೆಯನ್ನು ಜಾರಿಗೆ ತಂದರು ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಜೀವಿಕ ಮಿಷನ್ ಗ್ರಾಮೀಣ ಕಾಯ್ದೆ 12.16 ಕೋಟಿ ಜನರು ಕೆಲಸ ಪಡೆಯುತ್ತಿದ್ದರು. ಇದರಲ್ಲಿ ಸುಮಾರು 53 % ಉದ್ಯೋಗ ಪಡೆಯುತ್ತಿದ್ದರು. ಅಲ್ಲದೇ ಪರಿಶಿಷ್ಟ ಜಾತಿಯ 17% ಮತ್ತು ಪರಿಶಿಷ್ಟ ವರ್ಗದ 11 % ಜನರು ಉದ್ಯೋಗ ಪಡೆಯುತ್ತಿದ್ದರು ಈ ಎಲ್ಲ ಜನರ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ ಎಂದರು.

ಮನರೇಗಾ ಕಾಯ್ದೆಗೆ ಗ್ರಾಮೀಣಾಭಿವೃದ್ಧಿಯ ಕನಸು ಕಂಡಿದ್ದ ಮಹಾತ್ಮಾಗಾಂಧಿಯವರ ಹೆಸರನ್ನು ಇಡಲಾಗಿತ್ತು. ಅವರ ಗ್ರಾಮ ಸ್ವರಾಜ್ಯದ ಕಲ್ಪನೆಗೆ ಮನರೇಗಾ ಶಕ್ತಿ ತುಂಬಿತ್ತು 100 ದಿನಗಳ ಉದ್ಯೋಗದ ಖಾತ್ರಿ ನೀಡುತ್ತಿದ್ದ ಮನರೇಗಾ ಕಾಯ್ದೆಯಡಿ ಕೂಲಿಕಾರರು ತಮ್ಮ ಸ್ಥಳೀಯ ಮಟ್ಟದಲ್ಲಿಯೇ ಕೆಲಸ ಮಾಡಬಹುದಿತ್ತು ಗ್ರಾಮಪಂಚಾಯತಿ ಮತ್ತು ಗ್ರಾಮಸಭೆಗಳು ನಿರ್ಧರಿಸುವ ಅಧಿಕಾರವಿತ್ತು. ಆದರೀಗ ಈ ನಿರ್ಧಾರವನ್ನು ಕೇಂದ್ರ ಸರ್ಕಾರವೇ ಕೈಗೊಳ್ಳಲಿದೆ. ಕೇಂದ್ರದ ಅನುದಾನ ಅನುಮತಿ ಇಲ್ಲದೇ ಇಲ್ಲಿನ ಗ್ರಾಮ ಪಂಚಾಯತಿಯಲ್ಲಿ ಕೆಲಸವಾಗಲು ಸಾಧ್ಯ ಆದ್ದರಿಂದ ಮನರೇಗಾ ವನ್ನು ಮುಂದುವರೆಸಬೇಕೆಂಬುದು ಕಾಂಗ್ರೆಸ್ ಸರ್ಕಾರದ ಒತ್ತಾಯವಾಗಿದೆ. ಮನರೇಗಾ ದಲ್ಲಿ 100 ದಿನ ಭತ್ಯೆಯನ್ನು ತಪ್ಪದೇ ಕೊಡಲಾಗುತ್ತಿತ್ತು. ಹೊಸ ಕಾಯ್ದೆಯಂತೆ ಕೇಂದ್ರ 60% ಅನುದಾನ ಮತ್ತು ರಾಜ್ಯಗಳು 40% ಅನುದಾನ ಕೊಡಬೇಕಾಗಿದೆ. ರಾಜ್ಯದ ಹಿತವನ್ನು ಕಾಪಾಡುವಲ್ಲಿ ಕೇಂದ್ರ ಸೋತಿದೆ ಅದ್ದರಿಂದ ವಿಬಿಜಿರಾಮ್ ಜಿ ರದ್ದುಪಡಿಸಿ ಮನರೇಗಾ ವನ್ನು ಮರುಸ್ಥಾಪಿಸಲು ದೇಶಾದ್ಯಂತ ಕಾಂಗ್ರೆಸ್ ಪಕ್ಷ ಹೋರಾಟ ಮಾಡುತ್ತಿದೆ ಎಂದರು.

ಇದನ್ನು ಓದಿದ್ದೀರಾ..? ಅರ್ಹ ನಿವೇಶನ ಮನೆ ರಹಿತರಿಗೆ ವಿತರಿಸಬೇಕು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಬಿಜಿರಾಮ್ ಜಿ ಯೋಜನೆಯನ್ನು ಸಂಪೂರ್ಣವಾಗಿ ರದ್ದುಪಡಿಸಿ, ಮನರೇಗಾ ವನ್ನು ಮರು ಜಾರಿಗೊಳಿಸಬೇಕು. ಜನರ ಉದ್ಯೋಗದ ಹಕ್ಕನ್ನು ಮರುಸ್ಥಾಪಿಸಬೇಕು ಪಂಚಾಯತ್ ಸ್ವಯಂ ಆಡಳಿತದ ಹಕ್ಕು ಮರುಸ್ಥಾಪನೆ ದಿನಕ್ಕೆ 400 ರೂ.ಗಳ ಕನಿಷ್ಠ ವೇತನವನ್ನು ದೇಶಾದ್ಯಂತ ನೀಡಬೇಕು. ಈ ಬೇಡಿಕೆಗಳು ಈಡೇರುವವರೆಗೆ ನಮ್ಮ ಆಂದೋಲನ ನಿಲ್ಲುವುದಿಲ್ಲ ಎಂದರು. ರೈತವಿರೋಧಿ ಕಾಯ್ದೆಗಳನ್ನು ಹೋರಾಟದ ಫಲವಾಗಿ ರದ್ದುಗೊಳಿಸಲಾಯಿತು. ಅದೇ ರೀತಿಯಲ್ಲಿ ಈ ಹೋರಾಟ ನಿಲ್ಲುವುದಿಲ್ಲ. ಈ ಹೋರಾಟಕ್ಕೆ ರಾಜ್ಯದ ಜನರೆಲ್ಲರೂ ನಮ್ಮ ಜೊತೆಯಾಗಬೇಕು ಹಳ್ಳಿಗಾಡಿನ ಜನರಿಗೆ ಅನುಕೂಲ ಕಲ್ಪಿಸುವ ಮನರೇಗಾ ಯೋಜನೆಯ ಮರುಸ್ಥಾಪಿಸುವ ಕಾಂಗ್ರೆಸ್ ನ ಸಾರ್ಥಕ ಉದ್ದೇಶಕ್ಕೆ ಜನರು ಬೆಂಬಲಿಸಬೇಕು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...