ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ

Date:

  • ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆದ ಬಳಿಕ ಉಭಯ ನಾಯಕರ ಮೊದಲ ಭೇಟಿ
  • ಪ್ರಧಾನಿ ಮೋದಿ ಭೇಟಿ ವೇಳೆ ಸಿದ್ದರಾಮಯ್ಯ ಅಕ್ಕಿ ವಿಚಾರ ಪ್ರಸ್ತಾಪಿಸುವ ಸಾಧ್ಯತೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾದ ಬಳಿಕ ಉಭಯ ನಾಯಕರ ಮೊದಲ ಭೇಟಿ ಇದಾಗಿದ್ದು, ರಾಜಕೀಯ ಮತ್ತು ರಾಜ್ಯ ಯೋಜನೆ ಎರಡು ವಿಚಾರದಲ್ಲೂ ಸಹ ಈ ಭೇಟಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ.

ಅನ್ನ ಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ವಿತರಿಸುವುದನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ದ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದರು. ಹೀಗಾಗಿ ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ತೀವ್ರ ಕುತೂಹಲ ಕೆರಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಸಿದ್ದರಾಮಯ್ಯ-ಮೋದಿ

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಡವರ ಜೀವಕ್ಕೆ ಕಂಟಕ ತರುತ್ತಿರುವ ಜೀವಜಲ; ಆಡಳಿತಶಾಹಿಯೇ ಹೊಣೆ

ಈ ಹಿಂದೆ ಅನ್ನಭಾಗ್ಯ ಯೋಜನೆ ಅಕ್ಕಿ ವಿಚಾರವಾಗಿ ಗೃಹ ಸಚಿವ ಅಮಿತ್‌ ಶಾ ಅವರನ್ನು ಸಿದ್ದರಾಮಯ್ಯ ಭೇಟಿಯಾಗಿ ಮಾತುಕತೆ ನಡೆಸಿದ್ದರು. ಇಂದು ಪ್ರಧಾನಿ ಮೋದಿ ಭೇಟಿ ವೇಳೆ ಅಕ್ಕಿ ವಿಚಾರವನ್ನು ಸಿದ್ದರಾಮಯ್ಯ ಪ್ರಸ್ತಾಪಿಸಲಿದ್ದಾರೆ ಎನ್ನಲಾಗಿದೆ. ಅಕ್ಕಿ ಯೋಜನೆಯಾದ ಅನ್ನ ಭಾಗ್ಯಕ್ಕಾಗಿ ಕೇಂದ್ರ ಸರ್ಕಾರದ ಸಂಸ್ಥೆಗಳಿಂದ ಅಕ್ಕಿಯನ್ನು ಪೂರೈಸಲು ಪ್ರಧಾನಿಗೆ ಮನವಿ ಮಾಡುವ ಸಾಧ್ಯತೆಯಿದೆ.

ಹಾಗೆಯೇ ನೀರಾವರಿ ಯೋಜನೆಗಳು, ಜಲ ಜೀವನ್ ಮಿಷನ್, ಎಂಎನ್‌ಆರ್‌ಇಜಿಎಸ್‌ಗೆ ಕೇಂದ್ರ ಸರ್ಕಾರ ಮತ್ತು ಹೆಚ್ಚುವರಿ ಹಣವನ್ನು ಹೆಚ್ಚಿಸುವಂತೆ ಮನವಿ ಮಾಡುವ ಸಾದ್ಯತೆ ಇದೆ. ಇನ್ನೂ ಪ್ರಧಾನಿ ಭೇಟಿ ಬಳಿಕ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹಾಗೂ ರಸ್ತೆ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರನ್ನು ಸಹ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...