ಸಚಿವ ಸಂಪುಟ ವಿಸ್ತರಣೆ | ಸೋನಿಯಾ ಗಾಂಧಿ-ರಾಹುಲ್‌ ಗಾಂಧಿ ಭೇಟಿಯಾದ ಸಿದ್ದರಾಮಯ್ಯ

Date:

ಸಚಿವ ಸಂಪುಟ ವಿಸ್ತರಣೆ ಮತ್ತು ಖಾತೆ ಹಂಚಿಕೆ ವಿಚಾರವಾಗಿ ದೆಹಲಿಯಲ್ಲಿ ಮೂರು ದಿನಗಳಿಂದ ಬೀಡು ಬಿಟ್ಟಿರುವ ಸಿಎಂ ಸಿದ್ದರಾಮಯ್ಯ ಶುಕ್ರವಾರ ಬೆಳಗ್ಗೆ ಎಐಸಿಸಿ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಭೇಟಿಯಾದರು.

ಸಿದ್ದರಾಮಯ್ಯ ಅವರು ತಮ್ಮ ಸಂಪುಟಕ್ಕೆ ಸೇರಲಿರುವ ನೂತನ ಸಚಿವ ಪಟ್ಟಿಗೆ ಒಪ್ಪಿಗೆ ಪಡೆಯಲು ದೆಹಲಿಯಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಿದ್ದಾರೆ.

ಲಿಂಗಾಯತ, ಒಕ್ಕಲಿಗ, ದಲಿತ, ಒಬಿಸಿ ಪ್ರಾತಿನಿಧ್ಯವುಳ್ಳ ಪಟ್ಟಿಯನ್ನು ತಯಾರಿಸಲಾಗಿದ್ದು, ಬ್ರಾಹ್ಮಣ ಶಾಸಕರಿಗೂ ಪ್ರಾತಿನಿಧ್ಯ ಕಲ್ಪಿಸಲಾಗಿದೆ ಎನ್ನುವ ಮಾಹಿತಿ ಇದೆ. ನೂತನ ಸಚಿವರ ಪಟ್ಟಿ ಇಂದು ಸಂಜೆಯೊಳಗೆ ಅಂತಿಮವಾಗುವ ನಿರೀಕ್ಷೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಜೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಸಿಎಂ ಸಿದ್ದರಾಮಯ್ಯ ಪ್ರತ್ಯೇಕ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ. ನಂತರ ಸಿದ್ದರಾಮಯ್ಯ ಅವರು ಬೆಂಗಳೂರಿಗೆ ಹಿಂದಿರುಗಲಿರುವ ಸಾಧ್ಯತೆ ಇದೆ.

ಮತ್ತೆ ದೆಹಲಿಗೆ ತೆರಳಿದ ಡಿಕೆಶಿ

ಮನೆಯಲ್ಲಿನ ಕಾರ್ಯಕ್ರಮವೊಂದರ ನಿಮಿತ್ತ ದೆಹಲಿಯಿಂದ ಗುರುವಾರ ರಾತ್ರಿ ದಿಢೀರನೆ ದೆಹಲಿಯಿಂದ ಬೆಂಗಳೂರಿಗೆ ಬಂದಿದ್ದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಬೆಳಗ್ಗೆ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಒಟ್ಟಾರೆ ತೀವ್ರ ಕುತೂಹಲ ಕೆರಳಿಸಿರುವ ಸಿದ್ದರಾಮಯ್ಯನವರ ಸಂಪುಟ ವಿಸ್ತರಣೆಯು ಇಂದು ಬಹುತೇಕ ಫೈನಲ್ ಆಗಲಿದ್ದು, ಅದರಲ್ಲಿ 24 ಮಂದಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆಯಿದೆ. ಶನಿವಾರ ಎಲ್ಲ ಸಚಿವರು ರಾಜ್ಯಪಾಲರಿಂದ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...