ಜನರ ದುಡ್ಡನ್ನು ತಿಂದ್ಕೊಂಡು ಹೋಗಿ ಎಂದು ಬಿಜೆಪಿಯವರನ್ನು ಸುಮ್ನೆ ಬಿಡಬೇಕಾ: ಸಿಎಂ ಪ್ರಶ್ನೆ

Date:

  • ‘ಬಿಜೆಪಿ ಹಗರಣ ತನಿಖೆ ಮಾಡಿಸುವುದಾಗಿ ಚುನಾವಣೆ ಪೂರ್ವದಲ್ಲೇ ಹೇಳಿದ್ದೆವು’
  • ನಾವು ದ್ವೇಷದ ರಾಜಕಾರಣ ಮಾಡುತ್ತಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸರ್ಕಾರದ ತಪ್ಪುಗಳ ಬಗ್ಗೆ ಬಿಜೆಪಿಗೆ ಚಾರ್ಜ್ ಶೀಟ್ ತರಲು ಆ ಪಕ್ಷಕ್ಕೆ ನೈತಿಕ ಹಕ್ಕಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ತನಿಖೆ ಆರಂಭವಾಗುತ್ತಿವೆ. ತನಿಖೆ ಕೈಗೊಂಡಿರುವ ಬಗ್ಗೆ ಮೊದಲು ಉತ್ತರಿಸಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸರ್ಕಾರದ 100 ದಿನಗಳ ತಪ್ಪುಗಳನ್ನು ಚಾರ್ಜ್ ಶೀಟ್ ಮಾದರಿಯಲ್ಲಿ ಹೊರತರುವುದಾಗಿ ಬಿಜೆಪಿ ಹೇಳಿರುವ ಬಗ್ಗೆ ಮಂಗಳವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದರು.

ಬಿಜೆಪಿಯವರನ್ನು ಟಾರ್ಗೆಟ್ ಮಾಡಿದ್ದಾರೆ ಎಂಬ ಆರೋಪಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು, “ಈ ಬಗ್ಗೆ ನಾವು ಮೊದಲೇ ಹೇಳಿದ್ದೆವು. ಅಧಿಕಾರಕ್ಕೆ ಬರುವ ಮುನ್ನವೇ ಅವರ ಎ‌ಲ್ಲ ಹಗರಣಗಳ ಬಗ್ಗೆ ತನಿಖೆ ಮಾಡಿಸುವುದಾಗಿ ಹೇಳಿದ್ದೆವು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಿಎಸ್ಐ ಹಗರಣವನ್ನು ನಿವೃತ್ತ ನ್ಯಾ. ಬಿ ವೀರಪ್ಪ ಅವರು, 40% ಹಗರಣವನ್ನು ನಿವೃತ್ತ ನ್ಯಾ. ನಾಗಮೋಹನ್ ದಾಸ್ ಅವರ ನೇತೃತ್ವದ ಆಯೋಗ ತನಿಖೆ ಮಾಡಲಿದೆ, ಕೋವಿಡ್ ಕಾಲದ ಹಗರಣವನ್ನು ನಿವೃತ್ತ ನ್ಯಾ. ಕುನ್ಹಾ ಅವರ ಅಧ್ಯಕ್ಷತೆಯಲ್ಲಿ ತನಿಖೆ ನಡೆಯುತ್ತಿದೆ. ಇದರಲ್ಲಿ ದ್ವೇಷ ಎಲ್ಲಿದೆ? ರಾಜ್ಯದ ಜನರ ಹಿತಾಸಕ್ತಿ ಇದರಲ್ಲಿದೆ. ಬಿಜೆಪಿಯವರು ಅಧಿಕಾರದಲ್ಲಿದ್ದಾಗಲೇ ಈ ಎಲ್ಲದರ ಬಗ್ಗೆ ತನಿಖೆ ಮಾಡಿಸಿ ಎಂದು ನಾವು ಒತ್ತಾಯ ಮಾಡಿದ್ದೆವು” ಎಂದು ಸಮರ್ಥಿಸಿಕೊಂಡರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರಕ್ಕೆ ನೂರು, ಸಮಸ್ಯೆ ನೂರಾರು

ದ್ವೇಷದ ರಾಜಕಾರಣ ಮಾಡುತ್ತಿಲ್ಲ

“ನಾವು ದ್ವೇಷದ ರಾಜಕಾರಣ ಮಾಡುತ್ತಿಲ್ಲ. ಅವರು ಅಧಿಕಾರದಲ್ಲಿದ್ದಾಗ 40 ಪರ್ಸೆಂಟ್ ಗೆ ಒತ್ತಾಯ ಮಾಡಿರಲಿಲ್ಲವೇ? ತನಿಖೆಗೆ ನಾವು ಆಗಲೇ ಒತ್ತಾಯ ಮಾಡಿದ್ದೆವು. ಅಧಿಕಾರಕ್ಕೆ ಬಂದ ನಂತರ ತನಿಖೆಗೆ ಕ್ರಮ ಕೈಗೊಂಡಿದ್ದೇವೆ. ಹಾಗಾದರೆ ಜನರ ದುಡ್ಡನ್ನು ತಿಂದುಕೊಂಡು ಹೋಗಿ ಎಂದು ಬಿಡಬೇಕಿತ್ತೆ” ಎಂದು ಪ್ರಶ್ನಿಸಿದರು.

ಸಿಎಂ, ಡಿಸಿಎಂ ಸಂಬಂಧ ಉತ್ತಮ

ವಿರೋಧ ಪಕ್ಷಗಳು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಸಂಬಂಧದ ಬಗ್ಗೆಯೇ ಅನುಮಾನ ವ್ಯಕ್ತಪಡಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ಹೇಳಿದಷ್ಟೂ ನಮ್ಮ ಸಂಬಂಧ ಉತ್ತಮಗೊಳ್ಳುತ್ತಿದೆ ಎಂದು ತಿಳಿ ಹೇಳಿ ಅವರಿಗೆ (ಬಿಜೆಪಿ) ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...