ಕಾವೇರಿ ವಿವಾದ | ಸಂಜೆ ಕೇಂದ್ರ ಜಲ ಸಂಪನ್ಮೂಲ ಸಚಿವರ ಜೊತೆ ಸಭೆ: ಸಿಎಂ ಸಿದ್ದರಾಮಯ್ಯ

Date:

  • ಸಂಕಷ್ಟ ಸೂತ್ರ ಇಲ್ಲದಿರುವುದು ಸಮಸ್ಯೆ, ಸಂಕಷ್ಟ ಹೆಚ್ಚಲು ಕಾರಣ
  • ಪ್ರಧಾನಿ ಮೋದಿ ಅವರ ಮಧ್ಯಪ್ರವೇಶಕ್ಕೆ ಮನವಿ ಮಾಡಿದ್ದೇವೆ: ಸಿಎಂ
  • ಸುಪ್ರೀಂಕೋರ್ಟ್ ಮುಂದೆ CWMA ಆದೇಶಕ್ಕೆ ತಡೆಯಾಜ್ಞೆ ಕೇಳುತ್ತೇವೆ

ತಮಿಳುನಾಡಿಗೆ ನೀರು ಬಿಡಬೇಕು ಎನ್ನುವ ಸಿಡಬ್ಲ್ಯೂಎಂಎ ಆದೇಶಕ್ಕೆ ನಾವು ಸುಪ್ರೀಂಕೋರ್ಟ್ ಮುಂದೆ ತಡೆಯಾಜ್ಞೆಗೆ ಮನವಿ ಮಾಡುತ್ತೇವೆ. ಸಂಕಷ್ಟ ಸೂತ್ರ ಇಲ್ಲದಿರುವುದು ಸಮಸ್ಯೆ, ಸಂಕಷ್ಟ ಹೆಚ್ಚಲು ಕಾರಣವಾಗಿದೆ. ಕೇಂದ್ರ ಜಲ ಸಂಪನ್ಮೂಲ ಸಚಿವರ ಜತೆ ಬುಧವಾರ ಸಂಜೆ ಸಭೆ ನಡೆಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಎದುರಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಲು ತೆಗೆದುಕೊಳ್ಳಬೇಕಾಗಿರುವ ಕ್ರಮಗಳ ಕುರಿತು ದೆಹಲಿಯಲ್ಲಿ ಬುಧವಾರ ನಡೆದ ಸರ್ವ ಪಕ್ಷಗಳ ನಾಯಕರು, ಕೇಂದ್ರ ಸಚಿವರು ಮತ್ತು ಲೋಕಸಭೆ, ರಾಜ್ಯಸಭೆ ಸದಸ್ಯರ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

“ಎರಡೂ ರಾಜ್ಯದವರನ್ನು ಕರೆದು ಅಹವಾಲು ಕೇಳುವ ಅಧಿಕಾರ ವ್ಯಾಪ್ತಿ ಪ್ರಧಾನಿಯವರಿಗೆ ಇದೆ. ಹೀಗಾಗಿ ನಾವು ಪ್ರಧಾನಿ ಅವರ ಮಧ್ಯಪ್ರವೇಶಕ್ಕೆ ಮನವಿ ಮಾಡಿದ್ದೇವೆ. ಸಂಜೆ ಕೇಂದ್ರ ಜಲ ಸಂಪನ್ಮೂಲ ಸಚಿವರ ಸಭೆ ಬಳಿಕ ಮುಂದಿನ ತೀರ್ಮಾನ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿರ್ಮಲಾ ಸೀತಾರಾಮನ್ ಒಬ್ಬರನ್ನು ಹೊರತುಪಡಿಸಿ ರಾಜ್ಯದಿಂದ ಆಯ್ಕೆಯಾದ ಎಲ್ಲ ಸಂಸದರು, ಕೇಂದ್ರ ಸಚಿವರು ಸಭೆಯಲ್ಲಿ ಹಾಜರಿದ್ದರು. ನಿರ್ಮಲಾ ಸೀತಾರಾಮನ್ ಅವರು ಅನ್ಯಕಾರ್ಯ ನಿಮಿತ್ತ ಭಾಗವಹಿಸಲು ಸಾಧ್ಯವಾಗಿಲ್ಲ. ಈಗಾಗಲೇ ರಾಜ್ಯದಲ್ಲಿ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಗುರುತಿಸಿದ್ದೇವೆ. 123 ವರ್ಷಗಳಲ್ಲೇ ಆಗಸ್ಟ್ ತಿಂಗಳಿನಲ್ಲಿ ಅತಿ ಕಡಿಮೆ ಮಳೆ ದಾಖಲಾಗಿದೆ. ವಾಡಿಕೆಗಿಂತ ಅತಿ ಕಡಿಮೆ ಮಳೆ ಸಂಕಷ್ಟ ಹೆಚ್ಚಲು ಕಾರಣ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ’ಈ ದಿನ’ ಸಂಪಾದಕೀಯ| 2029ರ ಕನಸಿಗೆ ಈಗಲೇ ‘ಟೋಪಿ’ ಹೊಲಿದ ಮೋದಿ ಮಂತ್ರವಾದಿ

“177.2 ಟಿಎಂಸಿ ನೀರು ಸಾಮಾನ್ಯ ವರ್ಷದಲ್ಲಿ, ಮಳೆ ಚೆನ್ನಾಗಿದ್ದಾಗ ನೀರು ಬಿಡಬೇಕು ಎಂದು ಹೇಳಿದೆ. ಆದರೆ ಇಂತಹ ಸಂಕಷ್ಟದ ಸಂದರ್ಭದಲ್ಲಿ ಎಷ್ಟು ನೀರು ಬಿಡಬೇಕು ಎನ್ನುವ ಸೂತ್ರ ಇಲ್ಲದಿರುವುದು ಸಮಸ್ಯೆಯಾಗಿದೆ. ನಮಗೆ ಕುಡಿಯುವ ನೀರು, ಬೆಳೆ ರಕ್ಷಣೆ, ಕೈಗಾರಿಕೆಗೂ ನೀರಿಲ್ಲ. ಹೀಗಾಗಿ ನಾವು ಬಹಳ ಕಷ್ಟದಲ್ಲಿದ್ದೇವೆ” ಎಂದರು.

“CWMA, CWRA ಮುಂದೆ ಸಮರ್ಥವಾಗಿ ನಮ್ಮ ವಾಸ್ತವ ಪರಿಸ್ಥಿತಿಯನ್ನು ಮಂಡಿಸಿದ್ದೇವೆ. ತಮಿಳುನಾಡು ವಾದ ವಿರೋಧಿಸಿ ಸುಪ್ರೀಂಕೋರ್ಟ್ ನಲ್ಲಿ ನಮ್ಮ ತಕರಾರು ಮಂಡಿಸಿದ್ದೇವೆ. ಒಟ್ಟು ಮೂರು ಬಾರಿ ಸರ್ವ ಪಕ್ಷ ಸಭೆ ನಡೆಸಿದ್ದೇವೆ. 5 ಸಾವಿರ ಕ್ಯೂಸೆಕ್‌ ನೀರು ಬಿಡಲಾಗುತ್ತಿಲ್ಲ ಎಂದು CWMA ಮುಂದೆಯೂ ಮನವಿ ಸಲ್ಲಿಸಲಿದ್ದೇವೆ. 10 ಸಾವಿರ ಕ್ಯೂಸೆಕ್‌ ನೀರು ಬಿಡಬೇಕು ಎನ್ನುವ ಆದೇಶ ಬಂದಾಗ, 5 ಸಾವಿರ ಕ್ಯೂಸೆಕ್‌ ನೀರು ಬಿಡಬೇಕು ಅಂದಾಗೆಲ್ಲಾ ಒಟ್ಟು ಮೂರು ಬಾರಿ ನಾವು ಸರ್ವ ಪಕ್ಷ ಸಭೆ ಕರೆದಿದ್ದೇವೆ” ಎಂದು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...