100 ದಿನಗಳ ಆಡಳಿತದಲ್ಲಿ ನುಡಿದಂತೆ ನಡೆದಿದ್ದೇವೆ: ಸಿಎಂ ಸಿದ್ದರಾಮಯ್ಯ

Date:

  • 100 ದಿನ ಪೂರೈಸಿದ ಕಾಂಗ್ರೆಸ್‌ ಸರ್ಕಾರ
  • ಧನ್ಯವಾದ ತಿಳಿಸಿ, ಸಹಕಾರ ಕೋರಿದ ಸಿಎಂ

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ 100 ದಿನ ಪೂರೈಸಿದೆ. ಈ ವಿಶೇಷ ಸಂದರ್ಭದಲ್ಲಿ ನಮ್ಮೊಂದಿಗೆ ಕೈಜೋಡಿಸಿ, ಬೆಂಬಲವಾಗಿ ನಿಂತಿರುವ ನಾಡಿನ ಪ್ರತಿಯೊಬ್ಬರಿಗೂ ಧನ್ಯವಾದಗಳು. ನಿಮ್ಮೆಲ್ಲರ ಸಹಕಾರ ನಿರಂತರವಾಗಿರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನರನ್ನು ಕೋರಿದ್ದಾರೆ.

ಈ ಕುರಿತು ಅವರು ಸಾಮಾಜಿಕ ಜಾಲತಾಣ ಎಕ್ಸ್‌ (ಟ್ವಿಟ್ಟರ್)ನಲ್ಲಿ ಹರ್ಷ ವ್ಯಕ್ತಪಡಿಸಿ, “ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾಡಿನ ಮತದಾರರು ನಮ್ಮ ಮೇಲೆ ನಂಬಿಕೆ ಮತ್ತು ಭರವಸೆಯನ್ನಿಟ್ಟು 135 ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ಪೂರ್ಣ ಬಹುಮತದ ಸುಭದ್ರ ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಜನರು ನೀಡಿರುವ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು, ಅವರ ನಿರೀಕ್ಷೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದ್ದೇವೆ” ಎಂದಿದ್ದಾರೆ.

“ಗ್ಯಾರಂಟಿ ಮತ್ತು ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಜೊತೆಜೊತೆಗೆ ಬುದ್ಧ, ಬಸವ, ಅಂಬೇಡ್ಕರ್, ಕುವೆಂಪು, ಕನಕದಾಸರು, ನಾರಾಯಣ ಗುರು ಮುಂತಾದ ದಾರ್ಶನಿಕರು ತೋರಿದ ಸಮಾನತೆಯ ಹಾದಿಯಲ್ಲಿ ನಾಡನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಸರ್ಕಾರದ ಕಾರ್ಯಕ್ರಮಗಳ ಮೂಲಕ ತಲುಪಬೇಕೆಂಬ ಆಶಯದೊಂದಿಗೆ ಆರಂಭಿಸಿರುವ ನಮ್ಮ ಪಯಣಕ್ಕಿಂದು ಶತಕದ ಸಂಭ್ರಮ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ಆರ್‌ಟಿಇ ದಾಖಲಾತಿ ಕುಸಿತ; 2018ರ ತಿದ್ದುಪಡಿ ರದ್ದತಿ ಅತ್ಯವಶ್ಯ

“ಹಸಿವುಮುಕ್ತ ಕರ್ನಾಟಕ ನಿರ್ಮಾಣದ ಸಂಕಲ್ಪದೊಂದಿಗೆ ನಾವು ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಯಡಿ ನಾಡಿನ 1.28 ಕೋಟಿ ಬಡ ಕುಟುಂಬಗಳ ಪ್ರತಿ ವ್ಯಕ್ತಿಗೆ ತಲಾ 10 ಕೆ.ಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲು ಉದ್ದೇಶಿಸಲಾಗಿದೆ. ಸದ್ಯ ಪೂರ್ಣ ಪ್ರಮಾಣದಲ್ಲಿ ಅಕ್ಕಿ ಲಭ್ಯತೆಯಿಲ್ಲದ ಕಾರಣಕ್ಕೆ ತಲಾ 5 ಕೆ.ಜಿ ಅಕ್ಕಿ ಹಾಗೂ ಇನ್ನುಳಿದ 5 ಕೆ.ಜಿ ಅಕ್ಕಿ ಬದಲಿಗೆ ರೂ.170 ಅನ್ನು ಫಲಾನುಭವಿಗಳ ಖಾತೆಗೆ ನೇರ ವರ್ಗಾವಣೆ ಮಾಡಲಾಗಿದೆ. ನಮ್ಮ ಮೊದಲ 100 ದಿನಗಳ ಆಡಳಿತದಲ್ಲಿ ನುಡಿದಂತೆ ನಡೆದಿದ್ದೇವೆ ಎಂದು ಹೆಮ್ಮೆಯಿಂದ ಹೇಳಬಯಸುತ್ತೇನೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...