ನಾಳೆ(ಡಿ.3) ಮಂಗಳೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ: ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 3(ಬುಧವಾರ)ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಬುಧವಾರ ಬೆಳಗ್ಗೆ 11 ಗಂಟಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, 11:40ಕ್ಕೆ ಕೊಣಾಜೆ ಮಂಗಳಗಂಗೋತ್ರಿಯಲ್ಲಿ ಶಿವಗಿರಿ ಮಠ ವರ್ಕಲಾ ಶ್ರೀ ನಾರಾಯಣ ಗುರು ಅಧ್ಯಯನ ಪೀಠ, ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಆಯೋಜಿಸಿರುವ ಶತಮಾನದ ಪ್ರಸ್ತಾನ ಶ್ರೀ ನಾರಾಯಣ ಗುರು- ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ, ಶ್ರೀ ಗುರುವಿನ ಮಹಾ ಸಮಾಧಿ ಶತಾಬ್ದಿ, ಸರ್ವಮತ ಸಮ್ಮೇಳನ ಶತಮಾನೋತ್ಸವ, ಯತಿ ಪೂಜೆ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12:30ಕ್ಕೆ ದೇರಳಕಟ್ಟೆಯಲ್ಲಿ ಕಣಚೂರು ಕ್ಲಾಕ್ ಟವರ್ ವೃತ್ತ ಉದ್ಘಾಟನೆ, ಮಧ್ಯಾಹ್ನ 1ಕ್ಕೆ-ಪೇಸ್, ಜ್ಞಾನ ನಗರ, ಕೊಣಾಜೆ ವತಿಯಿಂದ ಆಯೋಜಿಸಿರುವ ಪೇಸ್ ಮತ್ತು ಎ.ಐ ಉನ್ನತ ಅಧ್ಯಯನ ಕೇಂದ್ರದ ಶಿಲಾನ್ಯಾಸ, ಪೇಸ್ ಟ್ರೈಡ್ ಪಾರ್ಕ್ ಮತ್ತು ಪೇಸ್ ಸ್ಪೋರ್ಟ್ಸ್ ಅರೆನಾ ಇದರ ಶಿಲಾನ್ಯಾಸ ಹಾಗೂ ಪೇಸ್‍ಕೇರ್ಸ್ ಸಮುದಾಯ ಸೇವಾ ಯೋಜನೆಗಳು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಆಹಾರದಲ್ಲಿ ಹುಳ ಪತ್ತೆ: ಗ್ರಾಹಕನ ವಿರುದ್ಧ ಸುಳ್ಳು ದೂರು ನೀಡಿ, ತಾವೇ ಸಿಕ್ಕಿಬಿದ್ದ ರಾಮೇಶ್ವರಂ ಕೆಫೆ ಮಾಲೀಕರು!

1:50ಕ್ಕೆ ನಗರದ ಸರ್ಕ್ಯೂಟ್ ಹೌಸ್‌ಗೆ ಆಗಮಿಸಲಿದ್ದು, ನಂತರ ಸರ್ಕ್ಯೂಟ್ ಹೌಸ್‍ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ವಕೀಲರ ಬಾರ್ ಅಸೋಸಿಯೇಷನ್‍ರವರ ಭೇಟಿ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಂಜೆ 4:30ಕ್ಕೆ ವಿಶೇಷ ವಿಮಾನದ ಮೂಲಕ ಮುಖ್ಯಮಂತ್ರಿಗಳು ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತವು ಪ್ರಕಟಣೆಯಲ್ಲಿ ತಿಳಿಸಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...