ಜನರ ಸಮಸ್ಯೆಗೆ ಅಧಿಕಾರಿಗಳಿಂದ ಉಡಾಫೆ ಸಲ್ಲದು: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Date:

  • ದಾವಣಗೆರೆ ಜಿಲ್ಲಾ ಪಂಚಾಯತ್‌ನಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಿಎಂ
  • ಜನಪ್ರತಿನಿಧಿಗಳಿಗೆ ವಿಳಂಬ ಮಾಡದೇ ಅಧಿಕಾರಿಗಳು ಸ್ಪಂದಿಸಬೇಕು: ಸೂಚನೆ

ಯಾವುದೇ ಅಧಿಕಾರಿಗಳು ಜನರ ಸಮಸ್ಯೆಗಳ ಬಗ್ಗೆ ಉಡಾಫೆ ತೋರಿಸಿದರೆ ಅಂತಹ ಅಧಿಕಾರಿಗಳಿಗೆ ನಮ್ಮ ಸರ್ಕಾರದಲ್ಲಿ ಜಾಗವಿಲ್ಲ. ಜನರು ಬದಲಾವಣೆ ಬಯಸಿ ನಮ್ಮನ್ನ ಆಯ್ಕೆ ಮಾಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಜನರ ಸಂಕಷ್ಟಕ್ಕೆ ಸ್ಪಂದಿಸದಿದ್ದರೆ ಅಂತಹ ಅಧಿಕಾರಿಗಳ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.

ದಾವಣಗೆರೆ ಜಿಲ್ಲಾ ಪಂಚಾಯತ್‌ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, “ಜನಪ್ರತಿನಿಧಿಗಳಿಗೆ ವಿಳಂಬ ಮಾಡದೇ ಅಧಿಕಾರಿಗಳು ಸ್ಪಂದಿಸಬೇಕು. ಒಂದು ವೇಳೆ ವಿಳಂಬ ಮಾಡಿದರೆ ಅದು ಒಂದು ರೀತಿಯಲ್ಲಿ ಭ್ರಷ್ಟಾಚಾರಕ್ಕೆ ಸಮ. ಅಧಿಕಾರಿಗಳಿಂದ ಇಂತಹ ತಪ್ಪು ಆಗಬಾರದು” ಎಂದು ಎಚ್ಚರಿಸಿದರು.

ತಹಶೀಲ್ದಾರ ಕಚೇರಿಯಲ್ಲಿ ವ್ಯಾಪಕ ಭ್ರಷ್ಟಾಚಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಹಶೀಲ್ದಾರ ಕಚೇರಿಯಲ್ಲಿ ವ್ಯಾಪಕ ಭ್ರಷ್ಟಾಚಾರ ಹೆಚ್ಚಿದೆ‌. ಕಂದಾಯ, ಕೃಷಿ, ಪೊಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆಗೆ ಬರುವ ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸೂಕ್ತವಾಗಿ ಸ್ಪಂದಿಸಿ. ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲೂಕು ಹಾಗೂ ಹೋಬಳಿ‌ ಮಟ್ಟಕ್ಕೆ ಭೇಟಿ ನೀಡಬೇಕು. ಯಾವುದೇ ವಿಚಾರದ ಬಗ್ಗೆ ಮಾಧ್ಯಮಗಳಲ್ಲಿ ಬಂದರೆ ಕೂಡಲೇ ಕ್ರಮ ಕೈಗೊಳ್ಳಬೇಕು” ಎಂಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಯ ಬಿತ್ತುವವರನ್ನು ಬದಿಗಿಟ್ಟು, ಜನತೆಗೆ ತಲುಪಿಸುವುದರತ್ತ ಸರ್ಕಾರ ಗಮನ ಹರಿಸಲಿ

ರೈತರಿಗೆ ಬೀಜ, ಗೊಬ್ಬರ ಪೂರೈಕೆ ಸೂಚನೆ

“ದಾವಣಗೆರೆ ಜಿಲ್ಲೆಯ 20 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆಲಿಕಲ್ಲು ಮಳೆಯಾಗಿದೆ. ತಕ್ಷಣ ವರದಿ ಕೊಡಿ. ಜೂನ್ 9 ಮಳೆಗಾಲ ಶುರುವಾಗುತ್ತದೆ. ಆಗ ಕೃಷಿ ಚಟುವಟಿಕೆ ಆರಂಭವಾಗುತ್ತದೆ‌. ರೈತರಿಗೆ ಬೀಜ, ಗೊಬ್ಬರ, ಕೀಟನಾಶಕ ಅಗತ್ಯ ಪೂರೈಕೆ ಮಾಡಬೇಕು. ವಿಳಂಬಕ್ಕೆ ಅವಕಾಶವಿಲ್ಲ. ಯಾರೂ ಎಸಿ ಕಚೇರಿಗಳಲ್ಲಿ‌ ಕುಳಿತು ಕಾರ್ಯ ಮಾಡಬೇಡಿ” ಎಂದರು.

ಮಾಜಿ ಶಾಸಕ ರೇಣುಕಾಚಾರ್ಯ ವಿರುದ್ಧ ತನಿಖೆಗೆ ಆಗ್ರಹ

ಸಿಎಂ ಸಿದ್ಧರಾಮಯ್ಯ ಸಮ್ಮುಖದಲ್ಲಿ ಮಾಜಿ ಶಾಸಕ ರೇಣುಕಾಚಾರ್ಯ ಭ್ರಷ್ಟಾಚಾರವನ್ನು ಶಾಸಕ ಶಾಂತನಗೌಡ ಬಯಲು ಮಾಡಿದರು. ರೇಣುಕಾಚಾರ್ಯ ಅವರು ಕಾನೂನು ಬಾಹಿರವಾಗಿ ಮನೆಗಳನ್ನ ನೀಡಿ ಭ್ರಷ್ಟಾಚಾರ ಮಾಡಿದ್ದಾರೆ. ಅದರ ಬಗ್ಗೆ ತನಿಖೆ ಮಾಡುವಂತೆ ಸಿದ್ದರಾಮಯ್ಯ ಸಮ್ಮುಖದಲ್ಲಿ ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...