ಬ್ಯಾರಿ ಕೂಟದಲ್ಲಿ ಅನಾವರಣಗೊಂಡ ಕರಾವಳಿಯ ಮುಸ್ಲಿಂ ಸಮುದಾಯದ ಸಾಂಸ್ಕೃತಿಕ ಸಂಭ್ರಮ

Date:

ಬೆಂಗಳೂರಿನಲ್ಲಿ ನೆಲೆಸಿರುವ ಕರಾವಳಿಯ ಮುಸ್ಲಿಂ ಸಮುದಾಯ (ಬ್ಯಾರಿಗಳು) ಶುಕ್ರವಾರ ಬೆಂಗಳೂರಿನ ಶೃಂಗಾರ್ ಪ್ಯಾಲೇಸ್ ಮೈದಾನದಲ್ಲಿ ಒಟ್ಟಾಗಿದ್ದರು. ಬ್ಯಾರಿ ಕೂಟದಲ್ಲಿ ಸೇರಿ ಸಂತಸಪಟ್ಟರು, ಸಂಭ್ರಮಿಸಿದರು.

ಬ್ಯಾರೀಸ್‌ ಸೆಂಟ್ರಲ್ ಕಮಿಟಿ ಬೆಂಗಳೂರು ಸಂಘಟನೆಯೂ “ಇದ್ ಬೆಂಗಳೂರ್ ಬ್ಯಾರಿಙಲೋ ಗಮ್ಮತ್ತ್ …” ಎಂಬ ಧ್ಯೇಯವಾಕ್ಯವನ್ನಿಟ್ಟುಕೊಂಡು ‘ಬ್ಯಾರಿ ಕೂಟ’ ಕಾರ್ಯಕ್ರಮವನ್ನ ಹಮ್ಮಿಕೊಂಡಿತ್ತು. 9 ತಿಂಗಳ ಹಿಂದೆ ಆರಂಭಗೊಂಡು ಕಾರ್ಯನಿರ್ವಹಿಸುತ್ತಿರುವ ‘ಬ್ಯಾರಿಇನ್ಫೋ ಡಾಟ್ ಕಾಂ’ ( www.bearyinfo.com ) ವೆಬ್‌ಸೈಟ್‌ನ ಹೊಸ ವಿಭಾಗ ‘ಬ್ಯಾರಿ ಬ್ಯುಸಿನೆಸ್ ಡೈರೆಕ್ಟರಿ’ ಲೋಕಾರ್ಪಣೆ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಹಲವು ಕರಾವಳಿ ಭಾಗದ ಮುಸ್ಲಿಂ ಸಮುದಾಯದ ಬ್ಯಾರಿಗಳು ಭಾಗವಹಿಸಿದ್ದರು. ಹಲವಾರು ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿತ್ತು. ಚಿಕ್ಕಮಕ್ಕಳಿಗೆ ಆಟದ ಸ್ಫರ್ಧೆ ಏರ್ಪಡಿಸಲಾಗಿತ್ತು. ಗೆದ್ದ ಮಕ್ಕಳಿಗೆ ಬಹುಮಾನ ನೀಡಲಾಯಿತು. ಹಾಗೆಯೇ, ಮಹಿಳೆಯರ ಕೈ ರುಚಿ ಸ್ಪರ್ಧೆ ಕೂಡ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯ ವಿಶೇಷತೆ ಏನೆಂದರೆ, ಬೆಂಕಿ ಇಲ್ಲದೇ ಮಹಿಳೆಯರು ಅಡುಗೆ ಮಾಡುವ ಸ್ಪರ್ಧೆ ಇದಾಗಿತ್ತು. ಸಂಪೂರ್ಣವಾಗಿ ಆರೋಗ್ಯಕರವಾದ ಅಡುಗೆ ಪದಾರ್ಥಗಳನ್ನ ಬಳಸಿ ತಿಂಡಿ ತಯಾರು ಮಾಡಲಾಗಿತ್ತು.    

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬ್ಯಾರಿಬ್ಯಾರಿ ಕೂಟದ ಪ್ರಮುಖ ಆಕರ್ಷಣೆಗಳಲ್ಲಿ ಯಾಸಿರ್ ಕಲ್ಲಡ್ಕರವರು ಸಂಗ್ರಹಿಸಿದ ನಾಣ್ಯ, ನೋಟುಗಳ ಪ್ರದರ್ಶನ ಕೂಡ ಒಂದಾಗಿತ್ತು. ಸಾಹಿತಿ, ಮುಖ್ಯಮಂತ್ರಿಗಳು, ಪ್ರಧಾನಮಂತ್ರಿಗಳ ಹುಟ್ಟಿದ ದಿನಾಂಕ ಇರುವ ಸಂಖ್ಯೆಯ ನೋಟುಗಳನ್ನ ಸಂಗ್ರಹಿಸಿದ್ದರು. ಇನ್ನು ಸಾಂಸ್ಕೃತಿಕ ಕಾರ್ಯಕ್ರಮದ ಜೊತೆಗೆ ಕವಿಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿತ್ತು.ಈ ಎಲ್ಲ ಕಾರ್ಯಕ್ರಮದಲ್ಲಿ ಆಯಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಬ್ಯಾರಿ ಸಮುದಾಯದ ಸಾಧಕರು ಭಾಗವಹಿಸಿದ್ದರು. ಜತೆಗೆ, ಕರಾವಳಿ ತಿಂಡಿ ತಿನಿಸುಗಳು ಕೂಡ ಪ್ರಮುಖ ಆಕರ್ಷಣೆಯಾಗಿತ್ತು.

ಈ ಸುದ್ದಿ ಓದಿದ್ದೀರಾ? ಸಮಾನ ಕೆಲಸಕ್ಕೆ ಸಮಾನ ವೇತನ ನೀಡಿ : ಶುಶ್ರೂಷಾಧಿಕಾರಿಗಳ ಪ್ರತಿಭಟನೆ

ಬ್ಯಾರೀಸ್ ಸೆಂಟ್ರಲ್ ಕಮಿಟಿ ಬೆಂಗಳೂರು ಅಧ್ಯಕ್ಷರಾದ ಶಬೀರ್ ಬ್ರಿಗೇಡ್ ಈ ದಿನ.ಕಾಮ್ ಜತೆಗೆ ಮಾತನಾಡಿ, “ಬೆಂಗಳೂರಿನಲ್ಲಿ ನೆಲೆಸಿರುವ ಎಲ್ಲರನ್ನೂ ಒಂದುಗೂಡಿಸಲು ಹಾಗೂ ವ್ಯಾಪಾರ ಏಳಿಗೆಗಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮ ರೂಪಿಸಿರುವುದು ಬೆಂಗಳೂರಿನಲ್ಲಿ ವಾಸಿಸುವ ಬ್ಯಾರಿಗಳ ಸಮಗ್ರ ಅಭಿವೃದ್ಧಿಯ ದೃಷ್ಟಿಕೋನ ಇಟ್ಟುಕೊಂಡು ಸಂಘಟನೆ ಸ್ಥಾಪನೆ ಮಾಡಲಾಗಿದೆ. ಈ ವೇದಿಕೆಯಿಂದ ನಾವು ಸರ್ಕಾರಕ್ಕೆ ಕೆಲವು ಬ್ಯಾರಿಗಳ ಬೇಡಿಕೆಯನ್ನ ಇಡುತ್ತೇವೆ. ಬ್ಯಾರಿ ಸಮುದಾಯ ದೊಡ್ಡ ಸಮುದಾಯ. ಬ್ಯಾರಿಗಳು ಎಲ್ಲ ಕಡೆಯೂ ಇದ್ದಾರೆ. ಬ್ಯಾರಿ ಎಂದರೆ, ವ್ಯಾಪಾರ ಮಾಡುವವರು, ಇದರ ಅರ್ಥ ನಮ್ಮ ರಕ್ತದಲ್ಲಿಯೇ ವ್ಯಾಪಾರ ಇದೆ” ಎಂದರು.

ಬ್ಯಾರಿಈ ದಿನ.ಕಾಮ್‌ ಜತೆಗೆ ಮಾತನಾಡಿದ ಟೀಕೆಸ್ ಗ್ರೂಪ್‌ನ ಅಧ್ಯಕ್ಷ ಉಮರ್ ಟೀಕೆ ಅವರು, “ ಬ್ಯಾರಿಗಳು ಸಂಘಟಿತರಾಗುವುದರಿಂದ ಸಾಮೂಹಿಕ ಪ್ರಗತಿ ಕಾಣಲು ಸಾಧ್ಯವಿದೆ. ಬ್ಯಾರಿ ಸಮುದಾಯದವರು ಈಗಾಗಲೇ ವ್ಯಾಪಾರದಲ್ಲಿ ಪ್ರಗತಿಯನ್ನು ಸಾಧಿಸುತ್ತಿದ್ದಾರೆ. ಶಿಕ್ಷಣದಲ್ಲೂ ಮಹತ್ವದ ಹೆಜ್ಜೆಯನ್ನಿಟ್ಟಿದ್ದಾರೆ. ಕೆನಡಾ, ಲಂಡನ್, ನ್ಯೂಝಿಲೆಂಡ್, ಅಮೆರಿಕ ಸಹಿತ ನಾನಾ ದೇಶಗಳಲ್ಲಿ ಬ್ಯಾರಿಗಳು ವ್ಯಾಪಾರ ನಡೆಸುತ್ತಿದ್ದಾರೆ. ಶೈಕ್ಷಣಿಕ ಪ್ರಗತಿ, ವ್ಯಾಪಾರ, ಶಿಕ್ಷಣ ಕ್ಷೇತ್ರದ ಅಭಿವೃದ್ಧಿಯಲ್ಲಿ ಬ್ಯಾರಿ ಸಮುದಾಯ ತೊಡಗಿಸಿಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಮುಸ್ಲಿಂ ಆಡಳಿತದ ಅಧೀನದಲ್ಲಿರುವ 160 ಕ್ಕೂ ಅಧಿಕ ಶಾಲೆಗಳಲ್ಲಿ ಕಡಿಮೆ ಶುಲ್ಕ, ಉಚಿತ ಶಿಕ್ಷಣ ನೀಡಲಾಗುತ್ತಿದೆ” ಎಂದರು.

ಬ್ಯಾರಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...