ಕರಾವಳಿ | 106 ದ್ವೀಪಗಳಿಗೆ ಹೊಸ ಕಳೆ: ಪರಿಸರ ಪ್ರವಾಸೋದ್ಯಮ ತಾಣಗಳಾಗಿ ಅಭಿವೃದ್ಧಿಪಡಿಸಲು ಸರ್ಕಾರದ ಮಾಸ್ಟರ್ ಪ್ಲಾನ್

Date:

ರಾಜ್ಯದ ಕರಾವಳಿ ಪ್ರದೇಶದಲ್ಲಿನ 106 ದ್ವೀಪಗಳನ್ನು ಪರಿಸರ ಹಾಗೂ ಪ್ರವಾಸೋದ್ಯಮ ಚಟುವಟಿಕೆಗಳ ಕೇಂದ್ರಗಳಾಗಿ ಅಭಿವೃದ್ಧಿ ಪಡಿಸಲು ಉದೇಶಿಸಲಾಗಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಮಂಕಾಳ ವೈದ್ಯ ಅವರು ತಿಳಿಸಿದ್ದಾರೆ.

ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ರಮೇಶ್ ಬಾಬು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.

ಉತ್ತರ ಕನ್ನಡ ಜಿಲ್ಲೆಯಲ್ಲಿನ 7 ದ್ವೀಪಗಳನ್ನು ಪರಿಸರ ಪ್ರವಾಸೋದ್ಯಮವನ್ನು (Eco-Tourism) ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ (PPP Model) ಅಭಿವೃದ್ಧಿಪಡಿಸಲು ವ್ಯವಹರಣಾ ಸಲಹೆಗಾರರನ್ನು (Transaction Advisor) ಆಯ್ಕೆ ಮಾಡಲಾಗಿದ್ದು, ಕಾರ್ಯ ಸಾಧ್ಯತಾ ವರದಿ (Feasibility Report) ತಯಾರಿಸಲಾಗುತ್ತಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಡುಪಿ ಜಿಲ್ಲೆಯ 7 ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 1 ದ್ವೀಪಗಳಿಗೆ Feasibility Report ತಯಾರಿಸಲಾಗಿದೆ. ಈ ಪೈಕಿ 3 ದ್ವೀಪಗಳಾದ ದರಿಯಾ ಬಹದ್ದೂರ್ ಘಡ, ಮಲ್ಪೆ ಮತ್ತು ಅಯಾಬಾ ದ್ವೀಪಗಳನ್ನು ಅಭಿವೃದ್ಧಿಪಡಿಸಲು GIS (Master Plan) ಸಿದ್ಧಪಡಿಸಲಾಗಿದೆ.

ರಾಜ್ಯವು ಸುಮಾರು 185.21 ನಾಟಿಕಲ್ ಮೈಲಿ (ಸುಮಾರು 343 ಕಿ.ಮೀ) ಕಡಲ ತೀರವನ್ನು ಹೊಂದಿದ್ದು, ರಾಜ್ಯದಲ್ಲಿ ಒಟ್ಟು 13 ಸಣ್ಣ ಬಂದರುಗಳು ಹಾಗೂ ಒಂದು ಬೃಹತ್ ಬಂದರು (ನವ ಮಂಗಳೂರು ಬಂದರು) ಇರುತ್ತದೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಅರಣ್ಯ ಭೂಮಿ-ಸಿಆರ್‌ಝಡ್ ಸಂಘರ್ಷ; ಜಿಲ್ಲೆಯ ಶೇ 86ರಷ್ಟು ಆಸ್ತಿಗಳಿಗೆ ಸಿಗದ ‘ಇ-ಸ್ವತ್ತು’ ಮಾನ್ಯತೆ

2024-25ನೇ ಸಾಲಿನಲ್ಲಿ ಕಾರವಾರ ಬಂದರಿನಲ್ಲಿ 5,50,502 ಮೆಟ್ರಿಕ್ ಟನ್ ಸರಕು ನಿರ್ವಹಣೆ ಹಾಗೂ ಹಳೇ ಮಂಗಳೂರು ಬಂದರಿನಲ್ಲಿ 55,505 ಮೆಟ್ರಿಕ್ ಟನ್ ಸರಕು ನಿರ್ವಹಣೆ ವಾರ್ಷಿಕ ವಹಿವಾಟು ಮಾಡಲಾಗಿದ್ದು, ಉಳಿದ ಬಂದರುಗಳಲ್ಲಿ ಯಾವುದೇ ವಾಣಿಜ್ಯ ಸರಕು ವಹಿವಾಟು ನಡೆಯುತ್ತಿರುವುದಿಲ್ಲ.

ರಾಜ್ಯದಲ್ಲಿ ಮೀನುಗಾರರಿಗೆ ತೊಂದರೆಯಾಗದಂತೆ ಬಂದರು ಗಳನ್ನು ಮತ್ತು ಕರಾವಳಿ ಪ್ರವಾಸೋದ್ಯಮವನ್ನು ಅಭಿವೃದ್ಧಿ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...