ಕಲಬುರಗಿ, ಬೀದರ್‌, ವಿಜಯಪುರ ಜಿಲ್ಲೆಗಳಲ್ಲಿ ಶೀತ ಅಲೆ ಮುಂದುವರಿಕೆ ಸಾಧ್ಯತೆ

Date:

ರಾಜ್ಯದ ಕೆಲವೆಡೆ ಶೀತ ಅಲೆ ಕಾಣಿಸಿಕೊಳ್ಳುವುದರಿಂದ ಚಳಿಯ ತೀವ್ರತೆ ಹೆಚ್ಚುತಿದ್ದು, ಬುಧವಾರ ಮೂರು ಜಿಲ್ಲೆಗಳಿಗೆ ಶೀತ ಅಲೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ವಿಜಯಪುರ, ಕಲಬುರಗಿ ಹಾಗೂ ಬೀದರ್ ಜಿಲ್ಲೆಯಲ್ಲಿ ಬುಧವಾರವೂ ಶೀತ ಅಲೆ ಕಾಣಿಸುಕೊಳ್ಳುವ ಸಾಧ್ಯತೆ ಇದೆ. ಎರಡು ದಿನಗಳ ಬಳಿಕ ಕನಿಷ್ಠ ತಾಪಮಾನ ಹೆಚ್ಚಾಗುವ ಸಂಭವವಿದೆ. ಸಾಮಾನ್ಯಕ್ಕಿಂತ 3 ರಿಂದ 5 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶ ಕಡಿಮೆಯಾಗಿದ್ದರಿಂದ ಚಳಿ ಹೆಚ್ಚಳವಾಗಿದೆ.

ಮಂಗಳವಾರ ಬೆಳಿಗ್ಗೆ 8:30ಕ್ಕೆ ಕೊನೆಗೊಂಡಂತೆ ಹಿಂದಿನ ದಿನ 24 ಗಂಟೆಗಳಲ್ಲಿ ಕನಿಷ್ಠ ಉಷ್ಣಾಂಶವು ವಿಜಯಪುರದಲ್ಲಿ 8 ಡಿಗ್ರಿ ಸೆಲ್ಸಿಯಸ್ ಇಳಿಕೆಯಾದರೆ, ಬೀದರ್‌ನಲ್ಲಿ 8.5 ಡಿಗ್ರಿ ಸೆಲ್ಸಿಯಸ್‌ಗೆ ಕುಸಿತವಾಗಿತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತೀಯ ಹವಾಮಾನ ಇಲಾಖೆಯು ಡಿ.18 ರಂದು ರೆಡ್ ಅಲರ್ಟ್ ಮತ್ತು ಡಿ.19 ರಂದು ಎಲ್ಲೊ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಾದ್ಯಂತ ಬೆಳಗಿನ ಜಾವ ತೀವ್ರವಾದ ಶೀತ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನೆಹರೂ ನಿಂದಿಸಿದರೆ ಅಲ್ಪರು ಮಹಾನ್ ನಾಯಕರಾಗಲು ಸಾಧ್ಯವೇ?

ಈ ಅವಧಿಯಲ್ಲಿ ಸಾಮಾನ್ಯ ತಾಪಮಾನಕ್ಕಿಂತ 5-6 ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆ ತಾಪಮಾನ ಇರಲಿದೆ. ಸಾರ್ವಜನಿಕರು ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಸಾಧ್ಯವಾದಷ್ಟು ಮನೆ ಬಿಟ್ಟು ಹೊರಗಡೆ ಬಾರದಂತೆ ಎಚ್ಚರಿಕೆ ವಹಿಸಬೇಕು. ಒಂದು ವೇಳೆ ಅವಶ್ಯವಿದ್ದಲ್ಲಿ ಬೆಚ್ಚನೆಯ ಉಡುಪುಗಳಾದ ಸ್ವೆಟರ್‌, ಜಾಕೇಟ್‌, ಉಲನ್‌ ಟೋಪಿ, ಕೈ ಗ್ಲೋಸ್‌ ಧರಿಸಬೇಕು. ವಿಶೇಷವಾಗಿ ಚಿಕ್ಕಮಕ್ಕಳನ್ನು ಹೊರಗಡೆ ಬಿಡಬಾರದು ಎಂದು ವಿನಂತಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...