ಪತ್ರಿಕಾ ರಂಗದಲ್ಲಿ ಕೆಲಸ ಮಾಡುವವರಿಗೆ ಬದ್ಧತೆ ಮುಖ್ಯ: ಶಿವಾನಂದ ತಗಡೂರು

Date:

ಬಾಗೇಪಲ್ಲಿ:ಪತ್ರಿಕಾ ರಂಗದಲ್ಲಿ ಕೆಲಸ ಮಾಡುವವರಿಗೆ ಬದ್ಧತೆ ಮುಖ್ಯ ಗಾಂಧೀಜಿ ಅಂಬೇಡ್ಕರ್ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಪತ್ರಿಕಾರಂಗ ಮುನ್ನಡೆಯಬೇಕಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು.

ಅವರು ಪಟ್ಟಣದ ಹೊರವಲಯದ ಕೋಮಲ್ ಗಾರ್ಡನ್ ಹೋಟೆಲ್ ನಲ್ಲಿ ಬುಧವಾರ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚಿಕ್ಕಬಳ್ಳಾಪುರ ಜಿಲ್ಲಾ ಘಟಕ ಮತ್ತು ವಿವಿಧ ತಾಲ್ಲೂಕು ಘಟಕಗಳ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಪತ್ರಿಕಾರಂಗಕ್ಕೆ ಭವ್ಯವಾದ ಇತಿಹಾಸವಿದೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂದು ಪರಿಗಣಿಸಲಾಗಿದೆ ಆ ಚೌಕಟ್ಟಿನಲ್ಲಿ ಪತ್ರಕರ್ತರು ನಡೆಯಬೇಕಿದೆ ಜನರ ಸಮಸ್ಯೆಗೆ ಸ್ಪಂದಿಸಬೇಕು ಜನರ ಧ್ವನಿಯಾಗಬೇಕು ಎಂದು ಹೇಳಿದರು.

ಕಾಲಮಾನಕ್ಕೆ ತಕ್ಕಂತೆ ಈಗ ಉದ್ಯಮ ಸ್ವರೂಪ ಬೆಳೆದಿದೆ ಈ ನಡುವೆ ಅನೇಕರು ನಾನಾ ಉದ್ದೇಶಗಳೊಂದಿಗೆ ಪತ್ರಿಕೋದ್ಯಮಕ್ಕೆ ನುಸುಳುತ್ತಿರುವುದು ಆತಂಕಕಾರಿ ಬೆಳವಣಿಗೆ ಅದರಲ್ಲೂ ಮುಖ್ಯವಾಗಿ ಬ್ಲ್ಯಾಕ್ ಮೇಲ್ ದಂಧೆಕೋರರು ಕ್ರಿಮಿನಲ್‌ಗಳ ಹಾವಳಿಯಿಂದ ನೈಜ ಪತ್ರಕರ್ತರ ಘನತೆಗೆ ಧಕ್ಕೆಯಾಗುತ್ತಿದೆ ಅಂತಹವರನ್ನು ಸಂಘದಿಂದ ಮೊದಲು ಹೊರ ಹಾಕುವ ಕೆಲಸ ಮಾಡಬೇಕು ಮಹಾತ್ಮ ಗಾಂಧೀಜಿ ಅಂತಹವರು ಪ್ರತಿನಿಧಿಸಿದ್ದ ಮಾಧ್ಯಮ ಕ್ಷೇತ್ರದ ಪಾವಿತ್ರ್ಯತೆಯನ್ನು ಕಾಪಾಡಬೇಕು ಎಂದು ಸಲಹೆ ನೀಡಿದರು.

ಪತ್ರಕರ್ತರು ಸಮಾಜದ ಮೇಲಾಗುವ ಸಾಧಕ-ಬಾಧಕಗಳನ್ನು ಗಮನದಲ್ಲಿಟ್ಟುಕೊಂಡು ವಸ್ತುನಿಷ್ಠ ವರದಿ ಬರೆಯಬೇಕು ಎಂದರು ಗ್ರಾಮೀಣ ಪತ್ರಕರ್ತರ ಪ್ರಮುಖ ಬೇಡಿಕೆಯಾಗಿರುವ ಉಚಿತ ಬಸ್ ಮುಖ್ಯಮಂತ್ರಿಗಳ ಮಾಧ್ಯಮ ಆರೋಗ್ಯ ಸಂಜೀವಿನಿ ಜಾರಿಗೆ ಅಡ್ಡಿಯಾಗಿರುವ ಷರತ್ತುಗಳನ್ನು ಸಡಿಲಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದೇವೆ ಆದಷ್ಟು ಬೇಗ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ನಿರಂತರ ಪ್ರಯತ್ನ ನಡೆಸುತ್ತಿರುವುದಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹೇಳಿದರು.

ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ನೂತನ ಸಾಲಿನ ಪದಾಧಿಕಾರಿಗಳಾಗಿ ಆಯ್ಕೆಯಾಗಿರುವ ಎಲ್ಲಾ ಜಿಲ್ಲಾ ಘಟಕ ಹಾಗೂ ತಾಲ್ಲೂಕು ಘಟಕ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರನ್ನು ಅಭಿನಂದಿಸಿ ಮಾತನಾಡಿ ಶಾಸಕಾಂಗ ನ್ಯಾಯಾಂಗ ಮತ್ತು ಕಾರ್ಯಾಂಗದ ಜೊತೆಗೆ ನಾಲ್ಕನೇ ಅಂಗವಾಗಿ ಗುರುತಿಸಿಕೊಂಡಿರುವ ಮಾಧ್ಯಮರಂಗ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವಲ್ಲಿ ಮತ್ತು ಸಮಾಜದ ಓರೆಕೋರೆ ಸಾಮಾಜಿಕ ಪಿಡುಗುಗಳ ನಿವಾರಣೆಯಲ್ಲಿ ಪ್ರಮುಖ ಪಾತ್ರವಿದೆ ಸುದ್ದಿಯನ್ನು ತಲುಪಿಸುವ ನಿಟ್ಟಿನಲ್ಲಿ ಧಾವಂತ ಬೇಡ ಸರಿಯಾದ ಸುದ್ದಿಯನ್ನು ಜನರಿಗೆ ತಲುಪಿಸುವುದು ಆದ್ಯತೆಯಾಗಬೇಕು ಎಂದು ಸಲಹೆ ನೀಡಿದರು.

ದೈನಂದಿನ ವರದಿಗಳಲ್ಲಿ ನೊಂದವರ ಅನ್ಯಾಯಕ್ಕೊಳಗಾದವರ ದ್ವನಿಯಾಗಬೇಕು ವಸ್ತುಸ್ಥಿತಿ ವರದಿ ನೀಡುವಲ್ಲಿ ಪತ್ರಕರ್ತರು ತಮ್ಮ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಬಾಗೇಪಲ್ಲಿ ಗುಡಿಬಂಡೆ ಹಾಗೂ ಚೇಳೂರು ತಾಲ್ಲೂಕು ಕಾರ್ಯನಿರತ ಪತ್ರಕರ್ತರಿಗೆ ನಿವೇಶನ ಹಾಗೂ ಮನೆ ಮಂಜೂರಾತಿಗೆ ಸರಕಾರದ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸುವ ಭರವಸೆ ನೀಡಿದ ಅವರು ಪತ್ರಕರ್ತರ ಬೇಡಿಕೆಗಳಿಗೆ ಸಾಧ್ಯವಾದಷ್ಟು ಸ್ಪಂದಿಸಿದ್ದು ಪತ್ರಕರ್ತರಿಗೆ ನಿವೇಶನ ಹಾಗೂ ಮನೆ ಮಂಜೂರಾತಿಗೆ ಜಿಲ್ಲಾಧಿಕಾರಿಗಳಿಂದ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಚುನಾವಣೆ ಅಧಿಕಾರಿಗಳಾದ ಸೋ.ಸು.ನಾಗೇಂದ್ರ ನಾಥ್ನೂ ತನ 2025-2028 ಸಾಲಿನ ಪದಾಧಿಕಾರಿಗಳಾಗಿ ಆಯ್ಕೆಯಾಗಿರುವ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಘಟಕಗಳ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರಿಗೆ ಪ್ರಮಾಣ ವಚನ ಸ್ವೀಕಾರ ಭೋಧಿಸಿದರು.

ಇದನ್ನು ಓದಿದ್ದೀರಾ..? ಆರೋಗ್ಯ ಇಲಾಖೆಯ 30 ಕೋಟಿ ವೆಚ್ಚದ ಸೌಲಭ್ಯಗಳಿಗೆ ಇಂದು ದಿನೇಶ್ ಗುಂಡೂರಾವ್ ಲೋಕಾರ್ಪಣೆ

ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಬಿ.ಸಿ.ಲೋಕೇಶ್, ಖಜಾಂಚಿ ವಾಸುದೇವ ಹೊಳ್ಳ,ಜಿಲ್ಲಾದ್ಯಕ್ಷ ವಿ.ರವಿ ಕುಮಾರ್, ಪ್ರಧಾನ ಕಾರ್ಯದರ್ಶಿ ಕಾಗತಿ ನಾಗರಾಜು, ಜಿಲ್ಲಾ ಉಪಾಧ್ಯಕ್ಷ ಜಿ.ಕೆ.ಆನಂದ್,ಖಜಾಂಚಿ ಬಿ.ಕೆ.ಮುದ್ದುಕೃಷ್ಣ,ಜಿಲ್ಲಾ ಕಾರ್ಯಕಾರಿ ಸಮಿತಿಯ ಸದಸ್ಯರಾದ ಬಿ.ಎಸ್.ಸುರೇಶ್, ತಾಲ್ಲೂಕು ಅದ್ಯಕ್ಷ ಡಿ.ಎನ್.ಕೃಷ್ಣಾರೆಡ್ಡಿ,ಉಪಾಧ್ಯಕ್ಷ ಬಿ.ಟಿ.ಚಂದ್ರಶೇಖರ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಸೈಯದ್ ಸಿದ್ದೀಕ್,ಖಜಾಂಚಿ ರಾಮಕೃಷ್ಣ (ಹೆಗಡೆ) ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಸತ್ಯನಾರಾಯಣ ರೆಡ್ಡಿ
ಆರ್.ಹನುಮಂತ ರೆಡ್ಡಿ ಎ.ಜಿ.ಸುಧಾಕರ್ ಆರ್.ಶಿವಪ್ಪ,ಎ.ಶ್ರೀನಿವಾಸ್, ಹಾಗೂ ಇತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...