ಮೈಸೂರು | ತಂಬಾಕು ಬೆಳೆಗಾರರ ಹಿತಕಾಯಲು ಬದ್ಧ; ಉತ್ತಮ ಬೆಲೆಗೆ ಖರೀದಿಸಿ: ಎಚ್ಡಿಕೆ

Date:

ಮೈಸೂರಿನ ಭಾರತೀಯ ಬಾಷಾ ಸಂಸ್ಥೆಯ ಸಭಾಂಗಣದಲ್ಲಿ ಸೋಮವಾರದಂದು ಬೃಹತ್ ಕೈಗಾರಿಕೆ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಮಾತನಾಡಿ, ತಂಬಾಕು ಬೆಳೆಗಾರರ ಹಿತಕಾಯಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಖರೀದಿದಾರರು ಉತ್ತಮ ಬೆಲೆಗೆ ತಂಬಾಕು ಖರೀದಿ ಮಾಡುವಂತೆ ಸೂಚನೆ ನೀಡಿದರು.

ತಂಬಾಕು ಮಂಡಳಿ, ಖಾಸಗಿ ಕಂಪನಿಗಳ ಪ್ರತಿನಿಧಿಗಳು, ಬೆಳೆಗಾರರು ಹಾಗೂ ಜನಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ, ರಾಜ್ಯದ ಯಾವುದೇ ತಂಬಾಕು ಮಾರುಕಟ್ಟೆಗಳಲ್ಲಿ ರೈತರಿಂದ ಹಿಂದಿನ ಸರಾಸರಿ ಅಥವಾ ಅದಕ್ಕಿಂತ ಹೆಚ್ಚಿನ ಬೆಲೆಗೆ ತಂಬಾಕು ಖರೀದಿ ಮಾಡಬೇಕು. ಇದರ ಜೊತೆಗೆ ತಂಬಾಕು ಮಂಡಳಿಯು ಹರಾಜು ಪ್ರಕ್ರಿಯೆಯ ಮೇಲೆ ನಿಗಾ ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಆಂಧ್ರ ತಂಬಾಕು ಮಾರುಕಟ್ಟೆಯಲ್ಲಿ ₹470 ರೂಪಾಯಿಗೆ ಖರೀದಿ ಮಾಡಲಾಗಿದ್ದು, ರಾಜ್ಯದಲ್ಲಿ ನಿಗದಿಯಾಗಿರುವ ₹370 ರೂಪಾಯಿಗಳನ್ನು ನೀಡದೆ ಮನಸೋ ಇಚ್ಛೆ ಖರೀದಿ ಮಾಡುತ್ತಿರುವುದು ಸೂಕ್ತವಲ್ಲ. ನಿಗದಿಯಾದ ದರದಂತೆ ಕೊಳ್ಳಬೇಕು. ಐಟಿಸಿ ಕಂಪನಿ ಅತಿ ಹೆಚ್ಚು ಖರೀದಿ ಮಾಡುವುದರಿಂದ ಇದರ ಕಡೆಗೆ ಗಮನಹರಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಂಬಾಕು ಉತ್ಪನ್ನಗಳಿಗೆ ವಿಧಿಸಲಾಗುತ್ತಿರುವ ತೆರಿಗೆ ಕುರಿತಾಗಿ ದೂರುಗಳಿದ್ದಲ್ಲಿ, ಲಿಖಿತ ರೂಪದಲ್ಲಿ ಸಲ್ಲಿಸಿದರೆ ಕೇಂದ್ರ ಹಣಕಾಸು ಸಚಿವರ ಗಮನಕ್ಕೆ ತಂದು ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿಯೂ, ರೈತರಿಗೆ ತೆರಿಗೆ ಹೆಸರಿನಲ್ಲಿ ಯಾವುದೇ ಕಾರಣಕ್ಕೂ ಅನ್ಯಾಯ ಆಗಬಾರದು ಎಂದರು.

ಐಟಿಸಿ ಕಂಪನಿ ಅಧಿಕಾರಿ ರವಿ ಮಾತನಾಡಿ, ತಂಬಾಕು ಉತ್ಪನ್ನಗಳಿಗೆ ವಿಧಿಸುತ್ತಿರುವ ಜಿಎಸ್ಟಿಯನ್ನು ಕೇಂದ್ರ ಶೇ.18 ರಿಂದ 40ಕ್ಕೆ ಏರಿಸಿದೆ. ಸಿಗರೇಟು ಬೆಲೆ ಏರಿಕೆ ಕಂಡಿದ್ದು, ಉತ್ಪನ್ನಗಳ ಬೇಡಿಕೆ ಕುಸಿಯುತ್ತಿದೆ. ಇದರಿಂದಾಗಿ ನಿಗದಿತ ಪ್ರಮಾಣಕ್ಕಿಂತ ಕಡಿಮೆ ತಂಬಾಕು ಖರೀದಿ ಮಾಡುತ್ತಿರುವುದಾಗಿ ತಿಳಿಸಿದರು. ಸಚಿವರಾದ ಕೆ.ವೆಂಕಟೇಶ್ ಮಾತನಾಡಿ, ಸಿಗರೇಟ್ ಮೇಲಿನ ಜಿಎಸ್ಟಿ ಹೆಚ್ಚಳಕ್ಕೆ ರೈತರ ತಂಬಾಕು ಖರೀದಿಯಲ್ಲಿ ಬೆಲೆ ಕಡಿಮೆ ಮಾಡುವುದು, ಹಠಾತ್ ಖರೀದಿ ನಿಲ್ಲಿಸಿ ರೈತರಿಗೆ ಅನ್ಯಾಯ ಮಾಡುವುದು ಸರಿಯಲ್ಲ ಎಂದರು.

ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ತಂಬಾಕು ಮಂಡಳಿ ವಿದೇಶಿ ಕಂಪನಿಗಳಿಗೆ ಆಹ್ವಾನ ನೀಡಿ ಖರೀದಿಗೆ ಮುಕ್ತ ಅವಕಾಶ ಕಲ್ಪಿಸಬೇಕು ಆಗ ಬೆಲೆಯಲ್ಲಿ ಏರಿಕೆ ಕಾಣಲು ಸಾಧ್ಯ. ಈಗ ಸಧ್ಯದ ಪರಿಸ್ಥಿತಿಯಲ್ಲಿ ಐಟಿಸಿ ಕಂಪನಿಯೊಂದೆ ತಂಬಾಕು ಮಂಡಳಿ ನಿಯಂತ್ರಿಸುತ್ತಿರುವುದು ಈ ಸಮಸ್ಯೆಗಳಿಗೆಲ್ಲ ಕಾರಣವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ ತಾಂತ್ರಿಕ ಗೊಂದಲಗಳು; ಎನ್ಯೂಮರೇಷನ್ ಹಂತಕ್ಕೆ ಪೂರ್ವ ಸಿದ್ಧತೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ

ಸಭೆಯಲ್ಲಿ ಶಾಸಕರಾದ ಎ. ಮಂಜು, ಡಿ. ರವಿಶಂಕರ್, ಜಿ.ಡಿ. ಹರೀಶ್ ಗೌಡ ಪರಿಷತ್ ಸದಸ್ಯರಾದ ಸಿ.ಎನ್. ಮಂಜೇಗೌಡ, ಕೆ. ವಿವೇಕಾನಂದ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...