ವಿಟ್ಲದಲ್ಲಿ ಹೆಸರಿಗಷ್ಟೇ ಸಮುದಾಯ ಆಸ್ಪತ್ರೆ: ಸಿಬ್ಬಂದಿಗಳ ಕೊರತೆ, ರೋಗಿಗಳಿಗೆ ಬಳಕೆಯಾಗದ ಮೂಲ ಸೌಕರ್ಯ

Date:

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಹೆಸರಿಗೆ ಮಾತ್ರ ಸಮುದಾಯ ಆಸ್ಪತ್ರೆ ಇದೆ. ಇಲ್ಲಿಗೆ ಬರುವ ರೋಗಿಗಳ ಸಂಖ್ಯೆಯೂ ಹೆಚ್ಚಾಗಿದೆ. ಆದರೆ ವೈದ್ಯಾಧಿಕಾರಿ ಸೇರಿದಂತೆ ಹಲವು ಹುದ್ದೆಗಳು ಖಾಲಿ ಇದ್ದರೆ, ಇನ್ನೊಂದೆಡೆ ಆಸ್ಪತ್ರೆಯನ್ನು ಕೆಳದರ್ಜೆಗೆ ಇಳಿಸಲಾಗುತ್ತದೆ ಎಂಬ ಗುಮಾನಿ ಹಬ್ಬಿದೆ.

ವಿಟ್ಲ ಪಟ್ಟಣ ಪಂಚಾಯತ್ ಸಭೆಯಲ್ಲಿ ಸಮುದಾಯ ಆಸ್ಪತ್ರೆಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರವನ್ನಾಗಿ ಕೆಳದರ್ಜೆಗೆ ಇಳಿಸಲಾಗುತ್ತದೆ ಎಂದು ಚರ್ಚೆ ನಡೆದು ಸರ್ಕಾರದ ಗಮನ‌ ಸೆಳೆಯುವುದಾಗಿ ತೀರ್ಮಾನಿಸಲಾಗಿತ್ತು. ಹಾಗೆಯೇ ಕೂಡಲೇ ವೈದ್ಯಾಧಿಕಾರಿ ಸೇರಿದಂತೆ ಇತರೆ ಸಿಬ್ಬಂದಿ ನೇಮಕಾತಿ ಮಾಡುವಂತೆ ಒತ್ತಾಯಿಸಲಾಗಿತ್ತು. ವಿಶೇಷವೆಂದರೆ ವಿಟ್ಲ ಸಮುದಾಯ ಆಸ್ಪತ್ರೆಯನ್ನು ಎಂಡೋ ಪೀಡಿತರಿಗೆ ಶುಶ್ರೂಷೆ ಮತ್ತು ಪಾಲನೆ ಮಾಡುವ ಪಟ್ಟಿಯಲ್ಲಿ ಕೆಲವು ವರ್ಷಗಳ ಹಿಂದೆಯೇ ಸೇರಿಸಲಾಗಿದೆ. ಆದರೆ ಇಲ್ಲಿ ಎಂಡೋ ಪೀಡಿತರ ವಿಶೇಷ ಆರೈಕೆಗಿಂತ ಸಾಮಾನ್ಯ ರೋಗಿಗಳೇ ಪರದಾಡುವಂತಿದೆ.

ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿಗಳ ಗ್ರಾಮೀಣ ಸೇವೆಯ ಕಾರಣ ಸಾಮಾನ್ಯ ಕಾಯಿಲೆಗಳಿಗೆ ಸಮಾಧಾನ ಸಿಕ್ಕರೂ, ಸಮುದಾಯ ಆಸ್ಪತ್ರೆ ಎಂಬ ಹೆಸರಿಗೆ ಕಳಂಕವಿದೆ. ಸರ್ಕಾರದಿಂದ ಔಷಧಿ ಪೂರೈಕೆ ಸೇರಿದಂತೆ ಉಪಕರಣಗಳ ರಿಪೇರಿ ತಕ್ಕ ಕಾಲಕ್ಕೆ ಆಗುತ್ತಿದ್ದರೂ ಸಿಬ್ಬಂದಿಯದೇ ಕೊರತೆ. ಎಕ್ಸ್-ರೇ ವಿಭಾಗದಲ್ಲಿ, ರಕ್ತ ಪರೀಕ್ಷೆ, ‌ಸ್ಕ್ಯಾನಿಂಗ್‌ ವಿಭಾಗಗಳಲ್ಲಿ ತಲಾ ಒಬ್ಬರು ಸಿಬ್ಬಂದಿಯಿದ್ದು, ಹತ್ತು ಶುಶ್ರೂಷಕಿಯರ ಕೊರತೆ ಇದೆ. 14 ಬೆಡ್‌ಗಳಿದ್ದರೂ ಇಲ್ಲಿ ಒಳರೋಗಿಯಾಗಿ ಯಾರನ್ನೂ ತೆಗೆದುಕೊಳ್ಳುತ್ತಿಲ್ಲ. ಸಿಬ್ಬಂದಿ ಕೊರತೆಯೇ ಇದಕ್ಕೆ ಪ್ರಮುಖ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ವಿಟ್ಲ ಆಸ್ಪತ್ರೆ

“ವಿಟ್ಲ ಆಸ್ಪತ್ರೆಗೆ ತುರ್ತು ಚಿಕಿತ್ಸೆಗಾಗಿ ಬಂದವರನ್ನು ಪ್ರಾಥಮಿಕ ಚಿಕಿತ್ಸೆ ನೀಡಿ ಬಂಟ್ವಾಳ, ಪುತ್ತೂರು ಅಥವಾ ಮಂಗಳೂರಿಗೆ ಕಳುಹಿಸಲಾಗುತ್ತದೆ. ಶುಶ್ರೂಷಕರ ಕೊರತೆ ಹಿನ್ನೆಲೆಯಲ್ಲಿ ಈ ಕ್ರಮ ಅನುಸರಿಸಲಾಗುತ್ತದೆ” ಎಂದು ಹಿರಿಯ ನರ್ಸ್ ತಿಳಿಸಿದ್ದಾರೆ.

“ವಿಟ್ಲ ನಿವಾಸಿ, ಹಿರಿಯ ನಾಗರಿಕ ವಿ. ಮಹಮ್ಮದ್ ಮೂಸಾ ಅವರ ಪ್ರಕಾರ ವಿಟ್ಲ ಆಸ್ಪತ್ರೆಗೆ ತನ್ನದೇ ಹೆಸರಿದೆ. ಇಲ್ಲಿಗೆ ಬಂದ ಎಲ್ಲ ವೈದ್ಯಾಧಿಕಾರಿಗಳೂ ನಾಗರಿಕ ಸ್ನೇಹಿಗಳಾಗಿ, ರೋಗಿಗಳ ಜತೆಗೆ ಉತ್ತಮ ಭಾಂಧವ್ಯ ಹೊಂದಿರುತ್ತಾರೆ. ಒಳ್ಳೆಯ ಹೆಸರು ಕೂಡ ಸಂಪಾದಿಸುತ್ತಾರೆ. ಒಳ್ಳೆಯ ವೈದ್ಯರಿದ್ದಾಗ ಶ್ರೀಮಂತರೂ ಸರ್ಕಾರಿ ಆಸ್ಪತ್ರೆಗಳ ಕಡೆ ಬರುತ್ತಾರೆ. ವಿಟ್ಲ ಆಸ್ಪತ್ರೆಯಲ್ಲಿ ಈ ಹಿಂದೆ ಹೆರಿಗೆ ಚಿಕಿತ್ಸೆಗಳೂ ನಡೆಯುತ್ತಿದ್ದವು. ಅದಕ್ಕೆ ತಕ್ಕಂತೆ ಅನುಭವಿ ಶುಶ್ರೂಷಕಿಯರು, ವೈದ್ಯರೂ ಇದ್ದರು. ಈ‌ಗ ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಇದು ಸರ್ಕಾರ ತುರ್ತಾಗಿ ಗಮನಹರಿಸಬೇಕಾದ ವಿಚಾರವಾಗಿದೆ” ಎನ್ನುತ್ತಾರೆ ಸ್ಥಳೀಯರು.

ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಮಾತನಾಡಿ, “ಈ ಬಗ್ಗೆ ಶಾಸಕರ ಗಮನ ಸೆಳೆಯಲಾಗಿದೆ. ಹಾಗೆಯೇ ಭರವಸೆ ಕೂಡಾ ಸಿಕ್ಕಿದೆ. ಶೀಘ್ರದಲ್ಲಿಯೇ ಏನಾದರೂ ವ್ಯವಸ್ಥೆ ಆಗಬಹುದು” ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ವಿಟ್ಲದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರ ಗಮನ ಸೆಳೆದಾಗ ಈ ಬಗ್ಗೆ ಆರೋಗ್ಯ ಇಲಾಖೆಯ ಗಮನ ಸೆಳೆದಿದ್ದು, ರಾಜ್ಯಾದ್ಯಂತ ಈ ಕುರಿತು ಪರಿಶೀಲಿಸಿ, ಹೆಚ್ಚುವರಿ ವೈದ್ಯರು, ಸಿಬ್ಬಂದಿ ಇರುವಲ್ಲಿಂದ ವರ್ಗಾವಣೆ ಪಡೆಯುವ ಬಗ್ಗೆ ಮಾತುಕತೆ ನಡೆಸಲಾಗಿದೆ” ಎಂದಿದ್ದಾರೆ.

ಇದನ್ನೂ ಓದಿದ್ದೀರಾ? ದಕ್ಷಿಣ ಕನ್ನಡ | ಸೇತುವೆ ಮುಚ್ಚಿ ಎರಡು ವರ್ಷ ಕಳೆದರೂ ದುರಸ್ತಿ, ನಿರ್ಮಾಣ ಪ್ರಕ್ರಿಯೆ ನಡೆಸಿಲ್ಲ: ಮುನೀರ್‌ ಕಾಟಿಪಳ್ಳ ಆರೋಪ

“ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ತಿಮ್ಮಯ್ಯ ಅವರು ಜಿಲ್ಲೆಯಾದ್ಯಂತ ಇರುವ ಸರ್ಕಾರಿ ಆಸ್ಪತ್ರೆಗಳ ಕೊರತೆ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗಿದೆ. ಆದಷ್ಟು ಬೇಗ ಖಾಲಿ ಹುದ್ದೆಗಳು ಭರ್ತಿಯಾಗಬಹುದೆಂಬ ನಿರೀಕ್ಷೆ ಇದೆ” ಎನ್ನುತ್ತಾರೆ.

ಸರ್ಕಾರ ಹಾಗೂ ಆರೋಗ್ಯ ಇಲಾಖೆಯು ತಕ್ಷಣವೇ ವಿಟ್ಲದ ಸಮುದಾಯ ಆಸ್ಪತ್ರೆಯಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ, ಆಸ್ಪತ್ರೆಯ ಮೂಲಸೌಕರ್ಯ ಮತ್ತು ಸೇವೆಗಳ ಗುಣಮಟ್ಟವನ್ನು ಹೆಚ್ಚಿಸಬೇಕಾಗಿದೆ. ಇಲ್ಲದಿದ್ದರೆ, ವೈದ್ಯಕೀಯ ಉಪಕರಣಗಳಿದ್ದರೂ ಬಳಕೆಗಿಲ್ಲದಿರುವುದು ಜನಸಾಮಾನ್ಯರ ಆರೋಗ್ಯ ಹಕ್ಕುಗಳಿಗೆ ಧಕ್ಕೆಯಾಗುವುದರ ಜತೆಗೆ ವಿಟ್ಲದ ಸಮುದಾಯ ಆಸ್ಪತ್ರೆಯ ಅಸ್ತಿತ್ವವೇ ಪ್ರಶ್ನಾರ್ಥಕವಾಗಲಿದೆ.

ವರದಿ : ರಾಜೇಶ್‌ ಶೆಟ್ಟಿ ಬಿ, ಮಂಗಳೂರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...