ದಾವಣಗೆರೆ | ಲಕ್ಷಾಂತರ ರೂ. ಹಣ ಲೂಟಿ; ಪಿಡಿಒ ವಿರುದ್ಧ ದೂರು ದಾಖಲಿಸಿದ ಮೇಲಾಧಿಕಾರಿ

Date:

ಲಕ್ಷಾಂತರ ರೂಪಾಯಿ ಹಣ ಲೂಟಿ ಮಾಡಿದ್ದಾರೆ. ಯಾವುದೇ ಗ್ರಾಮ ಪಂಚಾಯತಿಗೆ ವರ್ಗಾವಣೆ ಮಾಡಿದರೂ, ಲೂಟಿ ಮುಂದುವರೆಸಿದ್ದಾರೆ ಎಂದು ಆರೋಪಿಸಿ ಗ್ರಾಮ ಪಂಚಾಯತಿ ಪಿಡಿಒ ವಿರುದ್ಧ ಮೇಲಧಿಕಾರಿ ದೂರು ದಾಖಲಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣಿಹಳ್ಳಿ ಗ್ರಾಮ ಪಂಚಾಯತಿ ಪಿಡಿಒ ಟಿ ಸಿದ್ದಪ್ಪ ವಿರುದ್ಧ ಜಗಳೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗ್ರಾಮ ಪಂಚಾಯತಿಯ ಅಧ್ಯಕ್ಷರು ಸಹಿ ಮಾಡಾಬೇಕಾದ ಪತ್ರ, ಬಿಲ್‌ಗಳಿಗೆ ತಾನೇ ಅಧ್ಯಕ್ಷರ ನಕಲಿ ಸಹಿ ಹಾಕಿ ಗುತ್ತಿಗೆದಾರರ ಹೆಸರಿಗೆ ಬಿಲ್ ಪಾವತಿಸಿದ್ದಾರೆ. ಆ ಹಣವನ್ನು ತಾವೇ ಲೂಟಿ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ದೊಣ್ಣಿಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಮಾತ್ರವಲ್ಲದೆ, ಈ ಹಿಂದೆ ಕೆಲಸ ಮಾಡಿದ್ದ ಬಿಳಿಚೋಡು ಮತ್ತು ಬಸವನಕೋಟೆ ಗ್ರಾಮ ಪಂಚಾಯತಿಗಳನ್ನೂ ಭಾರೀ ಹಣವನ್ನು ಲೂಟಿ ಮಾಡಿದ್ದಾರೆ. ಈ ಎರಡೂ ಗ್ರಾಮ ಪಂಚಾಯತಿಗಳಲ್ಲಿ ಒಟ್ಟು 27 ಲಕ್ಷ ರೂ. ಹಣವನ್ನು ಸಿದ್ದಪ್ಪ ಲಪಟಾಯಿಸಿದ್ದಾರೆ. ಇದೀಗ, ಆ ಪಂಚಾಯತಿಗಳ ಪಿಡಿಒಗಳು ಈ ಬಗ್ಗೆ ವರದಿ ನೀಡಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಎಲ್ಲ ಅಕ್ರಮಗಳು ಇದೀಗ ನಡೆಯುತ್ತಿರುವ ಗ್ರಾಮ ಪಂಚಾಯತಿ ಲೆಕ್ಕ ಪರಿಶೀಲನೆ ಪ್ರಕ್ರಿಯೆ ವೇಳೆ ಬೆಳಕಿಗೆ ಬಂದಿವೆ. ಸಿದ್ದಪ್ಪ ವಿರುದ್ಧ ಪಂಚಾಯತ್ ರಾಜ್ ಇಲಾಖೆ ಕೂಡಾ ತನಿಖೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಜಗಳೂರು ಪೊಲೀಸ್‌ ಠಾಣೆಯಲ್ಲಿಯೂ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...