ಬಳ್ಳಾರಿ | ಮಹಿಳೆಗೆ ವಂಚಿಸಿದ ಇಬ್ಬರು ಪೊಲೀಸರ ವಿರುದ್ಧ ದೂರು; ಓರ್ವನ ಬಂಧನ

Date:

ಮದುವೆಯಾಗುವುದಾಗಿ ನಂಬಿಸಿ ಮಹಿಳೆಯನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿರುವ ಆರೋಪದಡಿ ಇಬ್ಬರು ಪೊಲೀಸ್‌ ಸಿಬ್ಬಂದಿ ಮೇಲೆ ಬಳ್ಳಾರಿ ಮಹಿಳಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಳ್ಳಾರಿ ಕೌಲ್‌ ಬಜಾರ್‌ ಠಾಣೆಯ ಮುಖ್ಯ ಪೇದೆ ಸೈಯದ್‌ ಇಮ್ರಾನ್‌ ಹಾಗೂ ನಗರ ಸಂಚಾರಿ ಠಾಣೆಯ ಪೇದೆ ಆಜಾದ್‌ ವಿರುದ್ಧ ಮಹಿಳೆಯೊಬ್ಬರು ದೂರು ದಾಖಲಿಸಿದ್ದು, ಆಜಾದ್‌ನನ್ನು ಬಂಧಿಸಲಾಗಿದೆ. ಮುಖ್ಯ ಪೇದೆ ಸೈಯದ್‌ ಇಮ್ರಾನ್‌ ತಲೆಮರೆಸಿಕೊಂಡಿದ್ದಾನೆ ಎಂದು ಎಸ್ಪಿ ಡಾ.ಶೋಭಾ ರಾಣಿ ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ : 2 ವರ್ಷಗಳ ಹಿಂದೆ 35 ವರ್ಷದ ಮಹಿಳೆ ತನ್ನ ಗಂಡನ ವಿರುದ್ಧ ದೂರು ನೀಡಲು ಕೌಲ್ ಬಜಾರ್ ಪೊಲೀಸ್ ಠಾಣೆಗೆ ಬಂದಿದ್ದರು. ಠಾಣೆಯ ಮುಖ್ಯಪೇದೆ ಸೈಯದ್ ಇಮ್ರಾನ್ ಮಹಿಳೆಗೆ ಸಹಾಯ ಮಾಡುವುದಾಗಿ ಮಹಿಳೆಯ ಮೊಬೈಲ್‌ ನಂಬರ್‌ ಪಡೆದುಕೊಂಡು ಪರಿಚಯ ಬೆಳೆಸಿದ್ದ. ಮಹಿಳೆಯು ತನ್ನ ಗಂಡನೊಂದಿಗೆ ಗಲಾಟೆ ಮಾಡಿಕೊಂಡಿದ್ದ ಹಿನ್ನೆಲೆ ಮಹಿಳೆಗೆ ಬೇರೆಡೆ ಮನೆ ಮಾಡಿಕೊಳ್ಳಲು 15 ಸಾವಿರ ಹಣ ನೀಡುವ ಮೂಲಕ ಮಹಿಳೆಯ ಸ್ನೇಹ ಬೆಳೆಸಿದ್ದ. ಮದುವೆಯಾಗುವುದಾಗಿ ನಂಬಿಸಿ ಮಹಿಳೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಲ್ಲದೆ ಬಳ್ಳಾರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿರುವ ಸೈಯದ್ ಇಮ್ರಾನ್ ಅಕ್ಕನ ಮಗ ಆಜಾದ್ ಎಂಬಾತನೂ 2 ತಿಂಗಳೊಳಗೆ ಮದುವೆ ಮಾಡಿಕೊಳ್ಳುತ್ತೇನೆಂದು ನಂಬಿಸಿ, ಸೈಯದ್ ಇಮ್ರಾನ್‌ಗೆ ತಿಳಿಯದಂತೆ ನನ್ನನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾಳೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...