ಕಲಬುರಗಿ | ಮಣಿಕಂಠ ರಾಠೋಡ ವಿರುದ್ಧ ನಾಳೆ ‘ಡಿಜಿ’ಗೆ ದೂರು; ಪ್ರಿಯಾಂಕ್‌ ಖರ್ಗೆ

Date:

  • ಇದೇ ಪ್ರಕರಣ ಬಿಜೆಪಿಯವರಿಗೆ ಆಗಿದ್ದರೆ ಸ್ವಯಂ ದೂರು ದಾಖಲಾಗುತ್ತಿತ್ತು
  • ಬಿಜೆಪಿ ಅಭ್ಯರ್ಥಿ ಅಷ್ಟೊಂದು ಜಾಣನಲ್ಲ; ಬಿಜೆಪಿ, ಆರ್ ಎಸ್ ಎಸ್ ಇದರ ಕಿಂಗ್ ಪಿನ್

ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿರುವುದರಿಂದ ಕಾಂಗ್ರೆಸ್ ಕಾನೂನು ಘಟಕದೊಂದಿಗೆ ಚರ್ಚಿಸಿ ಮಣಿಕಂಠ ರಾಠೋಡ ವಿರುದ್ಧ ಕಾಂಗ್ರೆಸ್ ನಾಳೆ ಡಿಜಿ ಅವರಿಗೆ ದೂರು ನೀಡಲಿದೆ ಎಂದು ಚಿತ್ತಾಪುರ ಕಾಂಗ್ರೆಸ್‌ ಅಭ್ಯರ್ಥಿ ಮತ್ತು ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಪ್ರಿಯಾಂಕ್‌ ಖರ್ಗೆ ಹೇಳಿದರು.

ಕಲಬುರಗಿ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, “ಖರ್ಗೆ ಮತ್ತು ಕುಟುಂಬವನ್ನು ಸಾಫ್ ಮಾಡುವುದಾಗಿ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಮಾತನಾಡಿದ್ದಾನೆ ಎನ್ನಲಾದ ಆಡಿಯೋ ಟೇಪ್ ಬಹಿರಂಗವಾಗಿದ್ದು, ಈ ಕುರಿತು ಈಗಾಗಲೇ ಸಂಘಟನೆ ಕಡೆಯಿಂದ ಒಂದು ದೂರು ದಾಖಲಾಗಿದೆ” ಎಂದು ತಿಳಿಸಿದರು.

“ಬಿಜೆಪಿ ಸೋಲುವ ಭೀತಿ ಎದುರಿಸುತ್ತಿದ್ದು, ಮೋದಿ ಅವರಿಂದ ಹಾಗೂ ಬೊಮ್ಮಾಯಿ ಅವರ ದುರಾಡಳಿತದಿಂದ ಜನರ ಗಮನ ಬೇರೆಡೆ ಸೆಳೆಯಲು ಇಂತಹ ತಂತ್ರಗಳನ್ನು ಮಾಡುತ್ತದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದೇ ಪ್ರಕರಣ ಬಿಜೆಪಿಯವರಿಗೆ ಆಗಿದ್ದರೆ ಇಷ್ಟೊತ್ತಿಗೆ ಸ್ವಯಂ ದೂರು ದಾಖಲಾಗುತ್ತಿತ್ತು. ಆದರೆ, ಇಲ್ಲಿ ಕೊನೆ ಪಕ್ಷ ಅಪರಿಚಿತರ ಮೇಲಾದರೂ ದೂರು ದಾಖಲಾಗಬೇಕಿತ್ತು ಅದೂ ಆಗಿಲ್ಲ.  ಖರ್ಗೆ ಹಾಗೂ ಕುಟುಂಬವನ್ನು ಯಾಕೆ ಸಾಯಿಸಬೇಕು? ಎನ್ನುವುದಕ್ಕೆ ಬಿಜೆಪಿಗರು ಉತ್ತರ ಹೇಳಬೇಕು. ಇಎಸ್‌ಐ ಆಸ್ಪತ್ರೆ, ಕೇಂದ್ರಿಯ ವಿದ್ಯಾಲಯ ತಂದಿದ್ದಕ್ಕೆ ಸಾಯಿಸಬೇಕಾ” ಎಂದು ಪ್ರೆಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸುಳ್ಳು ಆರೋಪ ಮಾಡಲು ಯಾರದ್ದೋ ಆಡಿಯೊ ಹಾಕಬೇಡಿ : ಮಣಿಕಂಠ ರಾಠೋಡ

“ಪಾಪ, ಬಿಜೆಪಿ ಅಭ್ಯರ್ಥಿ ಅಷ್ಟೊಂದು ಜಾಣನಲ್ಲ ಅವನು ಇನ್ನೂ ಅಕ್ಕಿ ಪಕ್ಕಿ ಲೆವೆಲ್ ನಲ್ಲಿಯೇ ಇದ್ದಾನೆ. ಇದರ ಹಿಂದಿನ ಕಿಂಗ್ ಪಿನ್ ಬಿಜೆಪಿ ಹಾಗೂ ಆರ್ ಎಸ್ ಎಸ್. ಅದರ ಉಸ್ತುವಾರಿಯನ್ನು ರವಿಕುಮಾರ್‌ಗೆ ವಹಿಸಲಾಗಿದೆ. ಪಾಪ ತಾನೇ ಅಭ್ಯರ್ಥಿ ಅಂದುಕೊಂಡ ರವಿಕುಮಾರ ಎಲ್ಲ ಕಡೆ ಓಡಾಡಿ ಸುಸ್ತಾಗಿದ್ದಾರೆ. ಅವರು ಜೇವರ್ಗಿ ಮತ್ತು ಚಿತ್ತಾಪುರದಲ್ಲಿ ಟಿಕೆಟ್ ಮಾರಿಕೊಂಡಿದ್ದಾರೆ ಎಂದು ಬಿಜೆಪಿಗರೇ ಮಾತನಾಡಿಕೊಳ್ಳುತ್ತಿದ್ದಾರೆ. ಮೊದಲು ಅದಕ್ಕೆ ಉತ್ತರಿಸಲಿ” ಎಂದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಶಾಸಕರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...