ಬೀದರ್‌ | ಅಂದಾಜು 100 ಕೋಟಿ ವೆಚ್ಚದಲ್ಲಿ ಜಿಲ್ಲಾಡಳಿತ ಕಚೇರಿಗಳ ಸಂಕೀರ್ಣ ನಿರ್ಮಾಣ: ಸಚಿವ ಈಶ್ವರ ಖಂಡ್ರೆ

Date:

ಬೀದರ್‌ ನಗರದ ಜಿಲ್ಲಾಧಿಕಾರಿ ಕಚೇರಿ ಹಾಗೂ ನಗರ ಸಭೆ ಕಚೇರಿ ಇರುವ ಸ್ಥಳದಲ್ಲೇ ಜಿಲ್ಲಾಡಳಿತ ಕಚೇರಿಗಳ ಸಂಕೀರ್ಣ ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ ಅಂದಾಜು 100 ಕೋಟಿ ರೂ. ಅನುದಾನದ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸಲಾಗಿದೆ, ಫೆಬ್ರವರಿ ಮೊದಲ ವಾರದಲ್ಲಿ ಸಚಿವ ಸಂಪುಟದ ಅನುಮೋದನೆ ಪಡೆದು ಕಾಮಗಾರಿಗೆ ಚಾಲನೆ ನೀಡಲಾಗುವುದು ಜಿಲ್ಲಾ ಉಸ್ತುವಾರಿ ಮಂತ್ರಿ ಈಶ್ವರ ಖಂಡ್ರೆ ಹೇಳಿದರು.

“ಸಂಕೀರ್ಣದ ನಿವೇಶನದ ಅಂತಿಮಗೊಳಿಸುವ ಕೆಲಸ ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು. ಇದೀಗ ಕಂದಾಯ ಇಲಾಖೆಯಿಂದ ಲೋಕೋಪಯೋಗಿ ಇಲಾಖೆಗೆ ಪತ್ರ ಬರೆಸಿ ವಿನ್ಯಾಸ ಸಿದ್ದಪಡಿಸಲಾಗಿದೆ. ಜಿಲ್ಲಾಧಿಕಾರಿಗಳು ನಗರ ಸಭೆಯ 2 ಎಕರೆ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ 3 ಎಕರೆಯ ಒಟ್ಟು 5 ಎಕರೆ ನಿವೇಶನದಲ್ಲಿ ನೂತನ ಜಿಲ್ಲಾ ಸಂಕೀರ್ಣನಿರ್ಮಾಣವಾಗುತ್ತುದೆ” ಎಂದು ಹೇಳಿದರು.

“ಈ ಹಿಂದೆ 48 ಕೋಟಿ ರೂ. ಅನುದಾನ ಇತ್ತು, ಆದರೆ ಸಚಿವ ಸಂಪುಟದಲ್ಲಿ 100 ಕೋಟಿ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದ್ದೇನೆ. ಲೋಕಸಭೆ ಚುನಾವಣೆಯ ಮುನ್ನವೇ ಕಾಮಗಾರಿಗೆ ಚಾಲನೆ ನೀಡಲಾಗುವುದು. ನೂತನ ಸಂಕೀರ್ಣ ಕಟ್ಟಡದಲ್ಲಿ ನಗರ ಸಭೆ ಕಚೇರಿ ಇರುವುದಿಲ್ಲ. ಈಗಿರುವ ನಗರ ಸಭೆ ಕಚೇರಿ ಬೇರೆಡೆ ಸ್ಥಳಾಂತರಿಸಲಾಗವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶೆಟ್ಟರ್ ನಡೆಯಿಂದ ಬೆಳಗಾವಿಯಲ್ಲಿ ಅಂಗಡಿ ಕುಟುಂಬದ ಟಿಕೆಟ್‌ ಭದ್ರ? 

“ಬಸವಕಲ್ಯಾಣದಲ್ಲಿ 600 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ನೂತನ ಅನುಭವ ಮಂಟಪ ನಿರ್ಮಾಣ ಕಾಮಗಾರಿಗೆ 200 ಕೋಟಿ ಬಿಡಗುಡೆಗೊಳಿಸಲಾಗಿತ್ತು. ಇದೀಗ ನಮ್ಮ ಸರ್ಕಾರ 40 ಕೋಟಿ ರೂ. ಅನುದಾನಕ್ಕೆ ತಾತ್ವಿಕ ಅನುಮೋದನೆ ನೀಡಲಾಗಿದ್ದು, ಶೀಘ್ರದಲ್ಲೇ ಬಿಡುಗಡೆ ಆಗುತ್ತದೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...