ಬಳ್ಳಾರಿ | ವಿದ್ಯಾರ್ಥಿಗಳಿಗೆ ಶೌಚಾಲಯ ವ್ಯವಸ್ಥೆ ಕಲ್ಪಿಸಲು ಒತ್ತಾಯ

Date:

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಕೆ.ಬೆಳಗಲ್ಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಶೌಚಾಲಯ ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಬಯಲೇ ಗತಿ ಎಂಬಂತಾಗಿದೆ.

ʼಆಂಧ್ರಪ್ರದೇಶ ಗಡಿಗೆ ಹೊಂದಿಕೊಂಡಿರುವ ಕೆ.ಬೆಳಗಲ್ಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (ಆದರ್ಶ)ಯ ಮಕ್ಕಳಿಗೆ ಅಗತ್ಯವಾಗಿರುವ ಮೂಲ ಸೌಕರ್ಯ ಒದಗಿಸುವಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವಿಫಲವಾಗಿದೆ. ಇದರಿಂದ ವಿದ್ಯಾರ್ಥಿಗಳ ಓದಿಗೆ ಅಡ್ಡಿಯಾಗುತ್ತಿದೆʼ ಎಂದು ಪೋಷಕರು ದೂರಿದರು.

ಶಾಲೆಯ ಓದುವ ಮಕ್ಕಳಿಗೆ ಸುಸ್ಸಜಿತ ಕಟ್ಟಡ ಹೊಂದಿದೆ. ಆದರೆ ಶೌಚಾಲಯ ಇದ್ದರೂ ಅಲ್ಲಿ ನೀರಿನ ವ್ಯವಸ್ಥೆ, ನಿರ್ವಹಣೆ ಇಲ್ಲದೇ ಗಬ್ಬು ನಾರುತ್ತಿದೆ. ಶೌಚಾಲಯ ಸುತ್ತಮುತ್ತಲೂ ಗಿಡ ಗಂಟಿ ಬೆಳೆದಿರುವ ಕಾರಣ ವಿದ್ಯಾರ್ಥಿನಿಯರು ಶೌಚಾಲಯ ಬಳಕೆಗೆ ಹಿಂಜರಿಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 09 22 at 9.38.17 PM

ʼಶಾಲೆಯಲ್ಲಿ ಮಕ್ಕಳಿಗೆ ಶೌಚಾಲಯ ಇದ್ದರೂ ಅದು ಸಮಪರ್ಕವಾಗಿ ನಿರ್ವಹಣೆಯಿಲ್ಲದ ಕಾರಣಕ್ಕೆ ಬಯಲಿಗೆ ಹೋಗುವ ಪರಿಸ್ಥಿತಿ ಬಂದೊದಗಿದೆ. ಶೌಚಾಲಯ ಸುತ್ತಲೂ ಹುಲ್ಲು, ಮುಳ್ಳು ಬೆಳೆದಿದ್ದು ವಿದ್ಯಾರ್ಥಿಗಳಿಗೆ ಭೀತಿ ಕಾಡುತ್ತಿದೆ. ಬಯಲಿಗೆ ಹೋದರೆ ರಸ್ತೆ ಅಪಘಾತ ಸಂಭವಿಸುವ ಸಾಧ್ಯತೆ ಇದೆʼ ಎಂದು ಸ್ಥಳೀಯರಾದ ಸಿಂಗ್ಲಿ ನಾಗರಾಜ್, ವೀರೇಶ್ ಯಾದವ್, ಭೀಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಹಿಂದೂ-ಮುಸ್ಲಿಮರು ಶತ್ರುಗಳಲ್ಲ : ಅಕ್ಬರ್‌ ಅಲಿ

ನಾನು ಹೊಸದಾಗಿ ಶಾಲೆಗೆ ಬಂದಿರುವೆ, ಶಾಲೆಯಲ್ಲಿ ಸಣ್ಣಪುಟ್ಟ ಸಮಸ್ಯೆಗಳಿದ್ದು, ಕೂಡಲೇ ಅವುಗಳನ್ನು ಸರಿಪಡಿಸಿ ಮಕ್ಕಳಿಗೆ ಅಗತ್ಯ ಸೌಲಭ್ಯ ಒದಗಿಸಲಾಗುವುದು ಎಂದು ಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ್‌ ಹೇಳಿದರು.

ವರದಿ : ರಾಧಾಕೃಷ್ಣ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...