ಶಾಸಕ ರೈ ವಿರುದ್ಧ ಮಾತನಾಡಿದ್ದಕ್ಕೆ ನನ್ನ ಗಡೀಪಾರಿಗೆ ಕ್ರಮ: ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಆಕ್ರೋಶ

Date:

ಕಾಂಗ್ರೆಸ್ ಕಾರ್ಯಕರ್ತ ಹಕೀಂ‌ ಕೂರ್ನಡ್ಕಗೆ ಗಡೀಪಾರು ಆದೇಶ ನೋಟೀಸ್ ನೀಡಿದ ಬೆನ್ನಲ್ಲೇ ಇದೀಗ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ರೈ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಸಾರ್ವಜನಿಕವಾಗಿ ಪಿಸ್ತೂಲ್ ಹಿಡಿದ ಶಾಸಕ ಅಶೋಕ್ ರೈಯನ್ನು ಮೊದಲು ಗಡೀಪಾರು ಮಾಡಲಿ’ ಎಂದು ಕಿಡಿಕಾರಿದ್ದಾರೆ.

ಪುತ್ತೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಪುತ್ತೂರು ಪೊಲೀಸರು ಸಹಾಯಕ ಆಯುಕ್ತರಿಗೆ ನನ್ನ ಮೇಲೆ ಇರುವ ಸುಳ್ಳು ದೂರುಗಳ ಮಾಹಿತಿ ನೀಡಿದ್ದಾರೆ. ಅಶೋಕ್ ರೈ ವಿರುದ್ಧ ಮಾತನಾಡಿದ್ರೆ ನಿಮ್ಮನ್ನ ಗಡೀಪಾರು ಮಾಡುತ್ತೇವೆಂದು ಪುತ್ತೂರು ನಗರ ಠಾಣೆಯ ಇನ್ಸ್‌ಪೆಕ್ಟರ್ ಈ ಹಿಂದೆ ಹೇಳಿದ್ದರು. ಇದೀಗ ಯಾವುದೇ ಗುಂಪು ಗಲಭೆ, ಕೋಮುಗಲಭೆ, ಹಲ್ಲೆ, ಹತ್ಯೆ, ಪ್ರಚೋದನಾಕಾರಿ ಭಾಷಣ ಮಾಡಿದ ಪ್ರಕರಣಗಳಲ್ಲಿ ಇಲ್ಲದ ನನ್ನನ್ನು ಯಾಕೆ ಬೀದರ್‌ ಜಿಲ್ಲೆಗೆ ಗಡೀಪಾರು ಮಾಡಬಾರದು ಎಂದು ಕೇಳಿ ನೋಟಿಸ್ ನೀಡಿದ್ದಾರೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

“ನನ್ನ ಗಡೀಪಾರು ನೋಟಿಸ್ ಹಿಂದೆ ಶಾಸಕ ಅಶೋಕ್‌ರೈ ಅವರ ಕೈವಾಡವಿದೆ. ಮುಸಲ್ಮಾನರ ಮತ ಪಡೆದು ಗೆದ್ದಿರುವ ಅಶೋಕ್ ರೈ ಮುಸಲ್ಮಾನರಿಗೆಯೇ ಅನ್ಯಾಯ ಮಾಡುತ್ತಾ ಇದ್ದಾರೆ. ಇತ್ತೀಚೆಗೆ ಹತ್ಯೆಯಾದ ರಹೀಂ ಮನೆಗೆ ಸಾಂತ್ವನ ಹೇಳಲು ಅಶೋಕ್ ರೈ ಯಾಕೆ ಹೋಗಿಲ್ಲ?, ಜಿಲ್ಲಾ ಉಸ್ತುವಾರಿ ಸಚಿವರು ಮಂಗಳೂರಿಗೆ ಬಂದಿರುವಾಗ ಅಶೋಕ್ ರೈ ಗೈರಾಗಿದ್ದರು. ಯಾಕಂದ್ರೆ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ರಹೀಂ ಮನೆಗೆ ಸಾಂತ್ವನ ಹೇಳಲು ಹೋಗಬೇಕಾಗಬಹುದು, ಸಾಂತ್ವನ ಹೇಳಲು ಹೋದ್ರೆ ನನಗೆ ಹಿಂದೂಗಳ ಮತ ಸಿಗಲ್ಲ ಎಂಬುದು ಅವರ ಮನಸ್ಸಲ್ಲಿದೆ. ಅಶೋಕ್ ರೈಗಳೇ, ನೀವು ನನ್ನ ಶ್ರಮದ ಬೆವರಿನಿಂದ ಶಾಸಕರಾಗಿದ್ದೀರಿ. ಮುಂದಿನ ಬಾರಿ ನಿಮ್ಮನ್ನ ನಾನು ಮಾಜಿ ಶಾಸಕನಾಗಿ ಮಾಡ್ತೇನೆ. ನೀವು ಒಂದು ಗ್ರಾಮ ಪಂಚಾಯತ್ ಚುನವಣೆಯಲ್ಲೂ ನಿಂತರೂ ಸೋಲಿಸುತ್ತೇನೆ” ಎಂದು ಸವಾಲು ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನ್ನನ್ನು ಗಡೀಪಾರು ಮಾಡುವ ಮೊದಲು ಅಶೋಕ್ ರೈ ಅವರನ್ನ ಗಡಿಪಾರು ಮಾಡಬೇಕು. ಅಶೋಕ್ ರೈ ಸಾರ್ವಜನಿಕ ಸ್ಥಳದಲ್ಲಿ ಪಿಸ್ತೂಲ್ ಹಿಡಿದು ಜನರನ್ನ ಬೆದರಿಸಿದವರು. ಅಶೋಕ್ ರೈಗಳ ಜೊತೆ ಇರುವವರ ಪೈಕಿ ಜಲೀಲ್ ಕರೋಪಾಡಿ ಹತ್ಯೆ ಪ್ರಕರಣದ ಆರೋಪಿಗಳು. ಯಾಕೆ ಅವರನ್ನ ಗಡೀಪಾರು ಮಾಡಿಲ್ಲ. ಪ್ರಜ್ವಲ್ ರೈ, ದೀಕ್ಷಿತ್ ರೈ ಅವರನ್ನ‌ ಗಡೀಪಾರು ಮಾಡಲಿ. ಅಶೋಕ್ ರೈ ಜೊತೆ ಇರುವವರು ಉಪ್ಪಿನಂಗಡಿಯಲ್ಲಿ ತಲ್ವಾರ್ ಕಾಳಗ ಮಾಡಿದವರು. ಅವರ ಮೇಲೆ ಪ್ರಕರಣ ದಾಖಲಾಗಿದೆಯಾ” ಎಂದು ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...