ಕೆ.ಆರ್.ಪೇಟೆ | ಪುರಸಭೆ ಚುನಾವಣೆ: ಜೆಡಿಎಸ್-ಬಿಜೆಪಿ ಮೈತ್ರಿಗೆ ಆಘಾತ ನೀಡಿದ ಕಾಂಗ್ರೆಸ್ ಗೆಲುವು

Date:

ಕೆ.ಆರ್.ಪೇಟೆ ಪುರಸಭೆಯ ಅಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪಂಕಜಾ ಪ್ರಕಾಶ್ ಭರ್ಜರಿ ಗೆಲುವು ಸಾಧಿಸಿದ್ದಾರೆ.

23 ಸದಸ್ಯರ ಬಲದ ಪುರಸಭೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಬಹುಮತ ಹೊಂದಿದ್ದರೂ, ಕಾಂಗ್ರೆಸ್ ತಂತ್ರಗಾರಿಕೆಯ ಮೂಲಕ ಗೆಲುವು ಸಾಧಿಸಿತು. ಪಂಕಜಾ 14 ಮತಗಳನ್ನು ಪಡೆದು, ಜೆಡಿಎಸ್‌ನ ಗಾಯತ್ರಿ ಸುಬ್ಬಣ್ಣ ಅವರನ್ನು 8 ಮತಗಳ ಅಂತರದಿಂದ ಸೋಲಿಸಿದರು.

ಜೆಡಿಎಸ್ ಸದಸ್ಯರ ಮೂರು ಅಡ್ಡಮತ ಹಾಗೂ ಓರ್ವ ಪಕ್ಷೇತರನ ಬೆಂಬಲದೊಂದಿಗೆ, 10 ಮತಗಳಿದ್ದ ಕಾಂಗ್ರೆಸ್ 14ಕ್ಕೆ ಏರಿತು. ಜೆಡಿಎಸ್-ಬಿಜೆಪಿ ಮೈತ್ರಿ ಹೊಂದಿದ್ದ ಮತಗಳ ಸಂಖ್ಯೆಯ ಮೇಲುಗೈ ಇದ್ದರೂ, ಶಾಸಕರ ನಿರ್ಲಕ್ಷ್ಯದಿಂದ ಜೆಡಿಎಸ್-ಬಿಜೆಪಿ ನಾಯಕರಲ್ಲಿ ಬೇಸರ ಉಂಟಾಗಿದೆ. ಶಾಸಕ ಹೆಚ್.ಟಿ.ಮಂಜು ಹಾಗೂ ಸಂಸದ ಹೆಚ್.ಡಿ.ಕುಮಾರಸ್ವಾಮಿ ಚುನಾವಣೆಗೆ ಗೈರುಹಾಜರಾಗಿದ್ದು, ಜೆಡಿಎಸ್ ಸದಸ್ಯರನ್ನು ಕಾಂಗ್ರೆಸ್‌ನ ಬೆಂಬಲಕ್ಕೆ ಕಳಿಸಿದ್ದಾರೆ ಎಂಬ ಹೇಳಿಕೆಗಳು ಕೇಳಿ ಬಂದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬಾಗಲಕೋಟೆ | ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು

ಚುನಾವಣೆ ಪ್ರಕ್ರಿಯೆ ತಹಶೀಲ್ದಾರ್ ಡಾ.ಅಶೋಕ್ ನೇತೃತ್ವದಲ್ಲಿ ನಡೆಯಿತು. ಕೈ ಎತ್ತುವ ಮೂಲಕ ಮತದಾನ ಮಾಡಲಾಯಿತು. ಜೆಡಿಎಸ್‌ನ ಕೆಲವು ಸದಸ್ಯರು ಅಡ್ಡಮತದಾನ ಮಾಡಿದರೆ, ಇತರರು ಗೈರುಹಾಜರಾಗುವ ಮೂಲಕ ಮೈತ್ರಿಕೂಟದ ಸೋಲಿಗೆ ಕಾರಣವಾಗಿದ್ದಾರೆ.

ಪಂಕಜಾ ಪ್ರಕಾಶ್ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಸಹೋದರ ಕೆ.ಬಿ.ಪ್ರಕಾಶ್ ಧರ್ಮಪತ್ನಿಯಾಗಿದ್ದು, ಈ ಗೆಲುವನ್ನು ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವದೊಂದಿಗೆ ಸಂಭ್ರಮಿಸಿದರು.

ಮಾಜಿ ಸಚಿವ ಡಾ.ನಾರಾಯಣಗೌಡ, ಈ ಗೆಲುವು ವಾಮ ಮಾರ್ಗದ ಮೂಲಕ ಬಂದಿದ್ದು, ಕಾಂಗ್ರೆಸ್ ಪಕ್ಷವು ತಮ್ಮ ಬಲವನ್ನು ದುರುಪಯೋಗ ಪಡಿಸಿಕೊಂಡಿದೆ ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಕಾವೇರಿ ಆರತಿ ಕೈಬಿಟ್ಟು ವಚನ ಪಸರಿಸುವಂತೆ ʼನಾವು ದ್ರಾವಿಡ ಕನ್ನಡಗರು’ ಸಂಘಟನೆ ಆಗ್ರಹ

ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ, ತಾಲೂಕು ಕಾಂಗ್ರೆಸ್ ಉಸ್ತುವಾರಿ ಚಿನಕುರಳಿ ರಮೇಶ್, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ತಾ.ಪಂ ಮಾಜಿ ಅಧ್ಯಕ್ಷ ಕೆ.ಬಿ.ಈಶ್ವರಪ್ರಸಾದ್, ಪುರಸಭೆ ಮಾಜಿ ಅಧ್ಯಕ್ಷ ಕೆ.ಬಿ.ಮಹೇಶ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷೆ ರಾಧಾ ಈಶ್ವರಪ್ರಸಾದ್, ಮಾಜಿ ಅಧ್ಯಕ್ಷ ಕೆ.ಬಿ.ರವಿ, ಯುವಮುಖಂಡ ಕೆ.ಬಿ.ವಿವೇಕ್
ಸೇರಿದಂತೆ ಪುರಸಭೆ ಮಾಜಿ ಅಧ್ಯಕ್ಷ ಕೆ.ಜೆ.ಬೋರಲಿಂಗೇಗೌಡ ಇಡೀ ಕುಟುಂಬವೇ ಹಾಜರಿದ್ದು ಪುರಸಭೆಯ ಅಧ್ಯಕ್ಷೆ ಕೆ.ಬಿ.ಪಂಕಜಾರನ್ನು ಅಭಿನಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...